ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಅವರು, ಕೆಎಟಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸದಿರಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿರುವುದಾಗಿ ತಿಳಿಸಿದರು.