ದೆಹಲಿ ವಿಶ್ವವಿದ್ಯಾಲಯ ಹಿಂಸಾಚಾರ; ಇಬ್ಬರು ಎಬಿವಿಪಿ ಸದಸ್ಯರ ಬಂಧನ

ದೆಹಲಿ ವಿಶ್ವವಿದ್ಯಾಲಯದಲ್ಲಿ ಎ ಐ ಎಸ್ ಎ ಸದಸ್ಯರ ಮೇಲೆ ಹಲ್ಲೆ ಮಾಡಿದ್ದಕ್ಕೆ ಇಬ್ಬರು ಎಬಿವಿಪಿ ಸದಸ್ಯರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ನವದೆಹಲಿ: ದೆಹಲಿ ವಿಶ್ವವಿದ್ಯಾಲಯದಲ್ಲಿ ಎ ಐ ಎಸ್ ಎ ಸದಸ್ಯರ ಮೇಲೆ ಹಲ್ಲೆ ಮಾಡಿದ್ದಕ್ಕೆ ಇಬ್ಬರು ಎಬಿವಿಪಿ ಸದಸ್ಯರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ಹೇಳಿದ್ದಾರೆ. 
ಶ್ರೀ ವೆಂಕಟೇಶ್ವರ ಕಾಲೇಜಿನ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಪ್ರಶಾಂತ್ ಮಿಶ್ರ ಮತ್ತು ಅದೇ ಕಾಲೇಜಿನ ವಿದ್ಯಾರ್ಥಿ ವಿನಾಯಕ್ ಶರ್ಮ ಎಂಬುವವರನ್ನು ಮಂಗಳವಾರ ರಾತ್ರಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಹೇಳಿಕೆ ತಿಳಿಸಿದೆ. 
ಫೆಬ್ರವರಿ ೨೨ರೆಂದು ರಾಮಜಾಸ್ ಕಾಲೇಜಿನ ಎದುರು ನಡೆದ ಪ್ರತಿಭಟನೆಯ ವೇಳೆಯಲ್ಲಿ ಬೆಲ್ಟ್ ಗಳನ್ನು ಹಿಡಿದು ಎಡಪಕ್ಷಗಳಿಗೆ ಸಂಬಂಧಿಸಿದ ಅಖಿಲ ಭಾರತ ವಿದ್ಯಾರ್ಥಿ ಸಂಘಟನೆಯ ಸದಸ್ಯರ ಮೇಲೆ ಹಲ್ಲೆ ನಡೆಸಿದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು. 
ಆರ್ ಎಸ್ ಎಸ್ ಪ್ರೇರಿತ ವಿದ್ಯಾರ್ಥಿ ಸಂಘಟನೆ ಅಖಿಲ ಭಾರತ ವಿದ್ಯಾರ್ಥಿ ಪರಿಷದ್ ನ ಹಿಂಸೆಯನ್ನು ಖಂಡಿಸಲು ನೆನ್ನೆ ದೆಹಲಿ ವಿಶ್ವವಿದ್ಯಾಲಯದ ಆವರಣದಲ್ಲಿ ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಇದಾದ ಕೆಲವೇ ಘಂಟೆಗಳಲ್ಲಿ ಪೊಲೀಸರು ಈ ಬಂಧನಕ್ಕೆ ಮುಂದಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com