ಮಹದೇವ ಪ್ರಸಾದ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ದೇವೇಗೌಡ

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮಂಗಳವಾರ ಹೃದಯಾಘಾತದಿಂದ...
ಮಹದೇವ್ ಪ್ರಸಾದ್ ಅಂತಿಮ ದರ್ಶನ ಪಡೆಯುತ್ತಿರುವ ಸಿಎಂ
ಮಹದೇವ್ ಪ್ರಸಾದ್ ಅಂತಿಮ ದರ್ಶನ ಪಡೆಯುತ್ತಿರುವ ಸಿಎಂ
Updated on: 
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾದ ಸಕ್ಕರೆ ಹಾಗೂ ಸಹಕಾರಿ ಸಚಿವ ಎಚ್ ಎಸ್ ಮಹದೇವ ಪ್ರಸಾದ್(58 ವರ್ಷ) ಅವರ ಅಂತಿಮ ದರ್ಶನ ಪಡೆದು, ಕುಟುಂಬಕ್ಕೆ ಸಾಂತ್ವನ ಹೇಳಿದರು.
ಮಹದೇವ ಪ್ರಸಾದ್ ಅವರ ಪಾರ್ಥೀವ ಶರೀರವನ್ನು ಇಂದು ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಮೈಸೂರಿಗೆ ತರಲಾಗಿದ್ದು, ಮೈಸೂರಿನ ಕುವೆಂಪು ನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಸಚಿವರಾದ ಡಿ.ಕೆ.ಶಿವಕುಮಾರ್ ಕೆ.ಜೆ.ಜಾರ್ಜ್ ಅವರು ಸೇರಿದಂತೆ ಹಲವು ರಾಜಕೀಯ ನಾಯಕರು ಮಹದೇವ್ ಪ್ರಸಾದ್ ಅವರ ಅಂತಿಮ ದರ್ಶನ ಪಡೆದರು.
ಮೈಸೂರು ಭಾಗದ ಪ್ರಭಾವಿ ನಾಯಕರಾಗಿದ್ದ ಸಿದ್ದರಾಮಯ್ಯ ಅವರ ಆಪ್ತ ಮಹದೇವ ಪ್ರಸಾದ್ ಅವರು ಇಂದು ಬೆಳಗಿನ ಜಾವ ಚಿಕ್ಕಮಗಳೂರಿನ ಸೆರಾಯ್ ರೆಸಾರ್ಟ್ ನಲ್ಲಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ಕೊಪ್ಪದಲ್ಲಿ ಆಯೋಜಿಸಲಾಗಿದ್ದ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸಿದ್ದ ಮಹದೇವ ಪ್ರಸಾದ್ ಅವರು ರೆಸಾರ್ಟ್ ನಲ್ಲಿ  ತಂಗಿದ್ದರು. ಆದರೆ ರಾತ್ರಿ ಸುಮಾರು 2 ಗಂಟೆ ಹೊತ್ತಿನಲ್ಲಿ ಹೊಟೆಲ್ ಸಿಬ್ಬಂದಿ ಅವರ ಕೊಠಡಿಗೆ ತೆರಳಿ ಬಾಗಿಲು ತಟ್ಟಿದಾಗ ಅವರು ಬಾಗಿಲು ತೆರೆಯಲಿಲ್ಲ. ಬೆಳಗ್ಗೆ ಮತ್ತೆ ಬಾಗಿಲು ಬಡಿದಾಗಲೂ ಬಾಗಿಲು ತೆಗೆಯದ ಕಾರಣ ಅನುಮಾನಗೊಂಡ ಸಿಬ್ಬಂದಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ನಂತರ ಮಹದೇವ ಪ್ರಸಾದ್ ಅವರು ತಂಗಿದ್ದ ಕೊಠಡಿಯ ಬಾಗಿಲನ್ನು ತೆರೆಯಲಾಗಿದ್ದು, ಮಹದೇವ ಪ್ರಸಾದ್ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಹದೇವ ಪ್ರಸಾದ್ ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. 
1994ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಮಹದೇವ್ ಪ್ರಸಾದ್ ಅವರು, ಐದು ಬಾರಿ ಶಾಸಕರಾಗಿದ್ದರು. ಪ್ರಸಾದ್ ಅವರು ಪತ್ನಿ ಡಾ.ಗೀತಾ, ಪುತ್ರ ಗಣೇಶ್ ಪ್ರಸಾದ್ ಸೇರಿದಂತೆ ಬಂಧು, ಬಳಗವನ್ನು ಅಗಲಿದ್ದಾರೆ. 
ನಾಳೆ ಮಹದೇವ ಪ್ರಸಾದ್ ಅವರ ಹುಟ್ಟೂರಾದ ಗುಂಡ್ಲುಪೇಟೆ ತಾಲೂಕಿನ ಹಾಲಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com