

ನವದೆಹಲಿ: ಉತ್ತರ ಪ್ರದೇಶ, ಪಂಜಾಬ್, ಗೋವಾ ಸೇರಿ ಐದು ರಾಜ್ಯಗಳ ವಿಧಾನಸಭಾ ಚುನಾವಣಾ ವೇಳಾ ಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಗೊಳಿಸಿದೆ.
ಇಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಚುನಾವಣಾ ಆಯುಕ್ತ ನಸೀಮ್ ಜೈದಿ ಅವರು ಪಂಚ ರಾಜ್ಯಗಳ ಚುನಾವಣಾ ದಿನಾಂಕಗಳನ್ನು ವಿವರಿಸಿದ್ದಾರೆ.
ಅದರಂತೆ ಗೋವಾ ಮತ್ತು ಪಂಜಾಬ್ ನಲ್ಲಿ ಒಂದೇ ಹಂತದಲ್ಲಿ ಫೆಬ್ರವರಿ 4 ರಂದು ಚುನಾವಣೆ ನಡೆಯಲಿದ್ದು, ಗೋವಾದ ಒಟ್ಟು 40 ವಿಧಾನಸಭಾ ಕ್ಷೇತ್ರ ಹಾಗೂ ಪಂಜಾಬ್ ನ ಒಟ್ಟು 117 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.