ಪ್ರಕರಣ ಸಂಬಂಧ ತನಿಖೆ ನಡೆಸಲು ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಆ ತಂಡ ನಾಲ್ವರನ್ನು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಇನ್ನು ಇಬ್ಬರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಸೂದ್ ತಿಳಿಸಿದರು. ಅಲ್ಲದೆ ಬಂಧಿತ ನಾಲ್ವರು ಆನ್‌ಲೈನ್ ಫುಡ್ ಡೆಲಿವರಿ ಬಾಯ್‌ಗಳಾಗಿ ಪಾರ್ಟ್ ಟೈಂ ಕೆಲಸ ಮಾಡುತ್ತಿದ್ದರು ಎಂದು ಹೇಳಿದ್ದಾರೆ.