ಸಹರಾ ಮತ್ತು ಬಿರ್ಲಾ’ ಕಂಪೆನಿಗಳಿಂದ ವಶಪಡಿಸಿಕೊಂಡ ದಾಖಲೆಗಳಲ್ಲಿ ಆಗಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಸೇರಿ ಹಲವು ಮುಖ್ಯಮಂತ್ರಿಗಳಿಗೆ ಹಣ ಸಂದಾಯವಾಗಿರುವ ಗಂಭೀರ ಆರೋಪಗಳು ಕೇಳಿ ಬಂದಿವೆ. ಇದರ ಜಾಡು ಹಿಡಿದು ತನಿಖೆ ನಡೆಸುವಂತೆ ಸಿಬಿಐ, ಆದಾಯ ತೆರಿಗೆ ಇಲಾಖೆ, ಕೇಂದ್ರ ಜಾಗೃತ ಆಯೋಗಗಳಿಗೆ ದೂರು ಸಲ್ಲಿಸಿದ್ದರೂ ಅವು ತನಿಖೆ ನಡೆಸಲು ನಿರಾಕರಿಸಿವೆ. ಹೀಗಾಗಿ ಸುಪ್ರೀಂ ಕೋರ್ಟ್ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಪ್ರಶಾಂತ್ ಭೂಷಣ್ ಮನವಿ ಮಾಡಿದ್ದರು.