ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಯು.ಟಿ.ಖಾದರ್ ನೇಮಕ

ಚಾಮರಾಜನಗರ ನೂತನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಹಾರ ಸಚಿವ ಯು.ಟಿ.ಖಾದರ್ ಅವರನ್ನು ನೇಮಕ ಮಾಡಿ ಮುಖ್ಯಮಂತ್ರಿ...
ಯು.ಟಿ.ಖಾದರ್
ಯು.ಟಿ.ಖಾದರ್
Updated on
ಬೆಂಗಳೂರು: ಚಾಮರಾಜನಗರ ನೂತನ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅವರನ್ನು ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ.
ಎಚ್ ಎಸ್ ಮಹದೇವಪ್ರಸಾದ್ ಅವರ ಹಠಾತ್ ನಿಧನದಿಂದಾಗಿ ತೆರವಾಗಿದ್ದ ಚಾಮರಾಜನಗರದ ಉಸ್ತುವಾರಿಯನ್ನು ಸಿಎಂ ಯು.ಟಿ.ಖಾದರ್ ಅವರಿಗೆ ನೀಡಿದ್ದಾರೆ.
ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸಕ್ಕರೆ ಹಾಗೂ ಸಹಕಾರಿ ಸಚಿವ ಎಚ್‌.ಎಸ್‌.ಮಹದೇವ ಪ್ರಸಾದ್‌ ಅವರು ಜನವರಿ 3ರಂದು ಚಿಕ್ಕಮಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com