ಅಲಂಗನಲ್ಲೂರಿನಲ್ಲಿ ಜಲ್ಲಿಕಟ್ಟು ಆಯೋಜನೆಗೆ ಎಲ್ಲಾ ಸಿದ್ಧತೆ, ನಾಳೆ ಸಿಎಂ ಪನ್ನೀರ್ ಸೆಲ್ವಂ ಚಾಲನೆ

ಕೇಂದ್ರ ಸರ್ಕಾರ ಜಲ್ಲಿಕಟ್ಟು ನಿಷೇಧ ತೆರವುಗೊಳಿಸುವ ಸಂಬಂಧ ಸುಗ್ರೀವಾಜ್ಞೆಗೆ ಗ್ರೀನ್ ಸಿಗ್ನಲ್ ನೀಡಿರುವ ಬೆನ್ನಲ್ಲೇ ತಮಿಳುನಾಡಿನ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಮಧುರೈ: ಕೇಂದ್ರ ಸರ್ಕಾರ ಜಲ್ಲಿಕಟ್ಟು ನಿಷೇಧ ತೆರವುಗೊಳಿಸುವ ಸಂಬಂಧ ಸುಗ್ರೀವಾಜ್ಞೆಗೆ ಗ್ರೀನ್ ಸಿಗ್ನಲ್ ನೀಡಿರುವ ಬೆನ್ನಲ್ಲೇ ತಮಿಳುನಾಡಿನ ಮಧುರೈ ಜಿಲ್ಲೆಯ ಅಲಂಗನಲ್ಲೂರಿನಲ್ಲಿ ಸಾಂಪ್ರದಾಯಿಕ ವಿವಾದಿತ ಕ್ರೀಡೆ ಆಯೋಜನೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶನಿವಾರ ಜಿಲ್ಲಾಡಳಿತ ತಿಳಿಸಿದೆ.
ಜಲ್ಲಿಕಟ್ಟು ಆಯೋಜನೆಗೆ ಅಲಂಗನಲ್ಲೂರು ಖ್ಯಾತಿಯಾಗಿದೆ. ಕ್ರೀಡೆ ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ರಾಜ್ಯ ಸರ್ಕಾರದ ಸೂಚನೆಗಾಗಿ ಕಾಯುತ್ತಿರುವುದಾಗಿ ಮಧುರೈ ಜಿಲ್ಲಾಧಿಕಾರಿ ಕೆ.ವೀರರಾಘವ್ ರಾವ್ ಅವರು ಹೇಳಿದ್ದಾರೆ.
ಈ ಮಧ್ಯೆ ಜಲ್ಲಿಕಟ್ಟು ಆಯೋಜನೆ ಸಂಬಂಧ ತಮಿಳುನಾಡು ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರು ಸುಗ್ರೀವಾಜ್ಞೆಯನ್ನು ಜಾರಿಗೊಳಿಸಿದ್ದು. ನಾಳೆ ಬೆಳಗ್ಗೆ 10ಗಂಟೆಗೆ ಅಲಂಗನಲ್ಲೂರಿನಲ್ಲಿ ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಅವರು ಜಲ್ಲಿಕಟ್ಟು ಕ್ರೀಡೆಗೆ ಚಾಲನೆ ನೀಡಲಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಅಲಂಗನಲ್ಲೂರಿನಲ್ಲಿ ಸಿಎಂ ಚಾಲನೆ ನೀಡಿದ ನಂತರ ಉಳಿದ ಜಿಲ್ಲೆಗಳಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಬೆಳಗ್ಗೆ 11 ಗಂಟೆಗೆ ಜಲ್ಲಿಕಟ್ಟು ಕ್ರೀಡೆಗೆ ಚಾಲನೆ ನೀಡಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com