ಬೆಂಗಳೂರು: ಸರ್ಕಾರದ ಆರೋಗ್ಯ ವಿಮೆ ಸ್ಥಗಿತಗೊಳಿಸಿದ ರಾಜ್ಯದ 26 ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರ ನೋಟಿಸ್ ಜಾರಿ ಮಾಡಿದೆ.
ಬಿಪಿಎಲ್ ಕಾರ್ಡ್ ಸೇರಿದಂತೆ ರಾಜ್ಯ ಸರ್ಕಾರ ಮೂರು ವೈದ್ಯಕೀಯ ವಿಮೆ ಯೋಜನೆಯಡಿ ಚಿಕಿತ್ಸಾ ಸೇವೆಯನ್ನು ಸ್ಥಗಿತಗೊಳಿಸಿದ 26 ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆಯ ಸುವರ್ಣ ಆರೋಗ್ಯ ಸುರಕ್ಷಾ(ಎಸ್ಎಎಸ್ ಟಿ) ಟ್ರಸ್ಟ್ ನೋಟಿಸ್ ಜಾರಿ ಮಾಡಿದೆ.
ಸರ್ಕಾರದ ವಿಮೆ ಯೋಜನೆಯಡಿ ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸುತ್ತಿರುವ ಈ ಆಸ್ಪತ್ರೆಗಳ ಪರವಾನಗಿಯನ್ನು ಅಮಾನತುಗೊಳಿಸುವ ಸಾಧ್ಯತೆ ಇದೆ ಎಂದು ಎಸ್ಎಎಸ್ ಟಿ
ಅಧಿಕಾರಿಗಳು ತಿಳಿಸಿದ್ದಾರೆ.
ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಆರೋಗ್ಯ ಇಲಾಖೆ ಅಡಿಯಲ್ಲಿ ಬರುವ ಒಂದು ಪ್ರತ್ಯೇಕ ಸಂಸ್ಥೆಯಾಗಿದ್ದು, ವಾಜಪೇಯಿ ಆರೋಗ್ಯ ಶ್ರೀ, ರಾಜೀವ್ ಅರೋಗ್ಯ ಭಾಗ್ಯ ಹಾಗೂ ಜೋತಿ ಸಂಜೀವಿನಿ ವಿಮೆ ಯೋಜನೆಯನ್ನು ಜಾರಿಗೊಳಿಸುತ್ತಿದೆ.