ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ; ಯೋಧರಿಗೆ ಪ್ರಶಸ್ತಿ ಪ್ರದಾನ

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ ಆರಂಭವಾಗಿದ್ದು, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಧ್ವಜಾರೋಹಣ ಮಾಡುವ ಮೂಲಕ 68ನೇ ಗಣರಾಜ್ಯೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಿದರು.
ಅಶೋಕ ಚಕ್ರ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ
ಅಶೋಕ ಚಕ್ರ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ ಆರಂಭವಾಗಿದ್ದು, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಧ್ವಜಾರೋಹಣ ಮಾಡುವ ಮೂಲಕ 68ನೇ ಗಣರಾಜ್ಯೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಿದರು.

ದೆಹಲಿ ರಾಜ್ ಪಥ್ ನಿರ್ಮಿಸಲಾಗಿರುವ ವಿಶೇಷ ವೇದಿಕೆಗೆ ಆಗಮಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು, ತ್ರಿವರ್ಣ ಧ್ವಜಾರೋಹಣ ಮಾಡಿದರು. ಈ ವೇಳೆ ಗಡಿಯಲ್ಲಿ ತಮ್ಮ ಶೌರ್ಯ ಪ್ರದರ್ಶನ ಮಾಡಿ 3 ಉಗ್ರರನ್ನು ಹತ್ಯೈಗೈದಿದ್ದ  ಹುತಾತ್ಮ ಯೋಧ ಹವಾಲ್ದಾರ್  ಹಂಗಪನ್ ದಾದಾ ಅವರಿಗೆ ಅಶೋಕ ಚಕ್ರ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಹಂಗಪನ್ ದಾದಾ ಅವರ ಪತ್ನಿ ಅವರಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಬಳಿಕ ಭಾರತೀಯ ಸೇನೆಯ ಶಕ್ತಿ ಪ್ರದರ್ಶನ ಮೆರವಣಿಗೆ ಆರಂಭವಾಯಿತು. ಈ ವೇಳೆ ಭಾರತೀಯ ಸೇನೆಯ ಎಂಐ-17 ಹೆಲಿಕಾಪ್ಟರ್ ಗಳು ಆಗಸದಲ್ಲಿ ತ್ರಿವರ್ಣ ಧ್ವಜವನ್ನು ಹೊತ್ತು ಸಾಗುವ ಮೂಲಕ ಮೆರವಣಿಗೆಗೆ ವಿದ್ಯುಕ್ತ ಚಾಲನೆ ನೀಡಿದವು. ಭಾರತೀಯ ಸೇನೆ ಪ್ರಮುಖ ಅಸ್ತ್ರ ಎಂದೇ ಹೇಳಲಾಗುತ್ತಿರುವ ಟಿ-90 ಭೀಷ್ಮ ಟ್ಯಾಂಕರ್ ಗಳು ಪರೇಡ್ ನಡೆಸುವ ಮೂಲಕ ತಮ್ಮ ಸಾಮರ್ಥ್ಯ ಪ್ರದರ್ಶನ ಮಾಡಿದವು. ಭಾರತೀಯ ವಾಯು ಸೇನೆಯ 27 ಯುದ್ಧ ವಿಮಾನಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದು, ಆಗಸದಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶನ ಮಾಡಲಿವೆ.

ಗಣರಾಜ್ಯೋತ್ಸವ ನೇರಪ್ರಸಾರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com