ಬೆಂಗಳೂರಿನ ಸ್ಟೀಲ್ ಬ್ರಿಡ್ಜ್ ಯೋಜನೆ ರದ್ದುಗೊಳಿಸಿದ್ದೇವೆ: ಸಚಿವ ಕೆ.ಜೆ.ಜಾರ್ಜ್

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ವಿವಾದಿತ ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಗುರುವಾರ ರದ್ದುಗೊಳಿಸಿದೆ....
ಕೆ.ಜೆ.ಜಾರ್ಜ್
ಕೆ.ಜೆ.ಜಾರ್ಜ್
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ವಿವಾದಿತ ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಗುರುವಾರ ರದ್ದುಗೊಳಿಸಿದೆ.
ಈ ಸಂಬಂಧ ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು, ತೀವ್ರ ನೋವಿನಿಂದ ಈ ವಿಚಾರವನ್ನು ಪ್ರಸ್ತಾಪಿಸುತ್ತಿದ್ದೇನೆ. ತೀವ್ರ ವಿರೋಧದ ಹಿನ್ನೆಲೆಯಲ್ಲಿ ಸುಮಾರು 1800 ಕೋಟಿ ರುಪಾಯಿ ವೆಚ್ಚದ ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ ಬಳಿಕ ಸ್ಟೀಲ್ ಬ್ರಿಡ್ಜ್ ಯೋಜನೆ ರದ್ದುಗೊಳಿಸುವ ತೀರ್ಮಾನ ತೆಗೆದುಕೊಂಡಿದ್ದು, ಇದರಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದರು.
ಇದೇ ವೇಳೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಜಾರ್ಜ್, ಬಿಜೆಪಿ ಅಭಿವೃದ್ಧಿ ವಿರೋಧಿಯಾಗಿದ್ದ ರಾಜ್ಯದ ಹಿತಕ್ಕೆ ವಿರುದ್ಧವಾಗಿ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಕೆಲಸ ಮಾಡುತ್ತಿವೆ ಮತ್ತು ಈ ಸಂಬಂಧ ಬಿಜೆಪಿ ಸಂಸದ ರಾಜೀವ್ ಚಂದ್ರಶೇಖರ್ ಅವರು ಅನಗತ್ಯ ಆರೋಪ ಮಾಡುತ್ತಿದ್ದಾರೆ ಎಂದರು. ಅಲ್ಲದೆ ಕೆಲವು ಎನ್ ಜಿಒಗಳು ಸಹ ಬೆಂಗಳೂರು ಅಭಿವೃದ್ಧಿ ಸಹಿಸುತ್ತಿಲ್ಲ ಎಂದು ಸಚಿವರು ಆರೋಪಿಸಿದ್ದಾರೆ.
ಬೆಂಗಳೂರಿನ ಚಾಲುಕ್ಯ ವೃತ್ತದಿಂದ ಹೆಬ್ಬಾಳದ ವರೆಗಿನ 6.7 ಕಿ.ಮೀ ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೆ ಹಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಅಲ್ಲದೆ ಯೋಜನೆಯಲ್ಲಿ ಜಾರ್ಜ್ ಹಾಗೂ ಕಾಂಗ್ರೆಸ್ ನಾಯಕರು ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶಾಸಕ ಗೋವಿಂದರಾಜು ಅವರ ಡೈರಿಯನ್ನು ಉಲ್ಲೇಖಿಸಿ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸ್ಟೀಲ್ ಬ್ರಿಡ್ಜ್ ಯೋಜನೆಯನ್ನು ರದ್ದುಗೊಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com