ಉ.ಪ್ರದೇಶದಲ್ಲಿ ಬಿಜೆಪಿಗೆ ಅವಕಾಶ ಕೊಡಲ್ಲ, ಬಿಎಸ್ಪಿ ಜೊತೆ ಮೈತ್ರಿಗೆ ಸಿದ್ಧ: ಅಖಿಲೇಶ್ ಯಾದವ್

ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳಿಗೆ ಅತ್ಯಂತ ಪ್ರತಿಷ್ಠೆಯ ಕಣವಾಗಿದ್ದ ಉತ್ತರ ಪ್ರದೇಶದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗುವ ಸಾಧ್ಯತೆ...
ಅಖಿಲೇಶ್ ಯಾದವ್
ಅಖಿಲೇಶ್ ಯಾದವ್
Updated on: 
ಲಕ್ನೋ: ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳಿಗೆ ಅತ್ಯಂತ ಪ್ರತಿಷ್ಠೆಯ ಕಣವಾಗಿದ್ದ ಉತ್ತರ ಪ್ರದೇಶದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಬಿಎಸ್ಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಇಚ್ಚೆ ವ್ಯಕ್ತಪಡಿಸಿದ್ದಾರೆ.
ಚುನಾವಣೋತ್ತರ ಸಮೀಕ್ಷೆ ಬಹಿರಂಗವಾದ ಬಳಿಕ ಖಾಸಗಿ ಸುದ್ದಿ ವಾಹಿನಿಗೆ ಪ್ರತಿಕ್ರಿಯಿಸಿರುವ ಅಖಿಲೇಶ್ ಯಾದವ್ ಅವರು, ಯಾವುದೇ ಕಾರಣಕ್ಕೂ ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರದಂತೆ ತಡೆಯುವುದೇ ನಮ್ಮ ಉದ್ದೇಶವಾಗಿದೆ ಮತ್ತು ಯಾರೊಬ್ಬರಿಗೆ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಬೇಕಾಗಿಲ್ಲ. ಹೀಗಾಗಿ ನಾವು ಮಾಯಾವತಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧ ಎಂದಿದ್ದಾರೆ.
ಉತ್ತರ ಪ್ರದೇಶದಲ್ಲಿ ಎಸ್ಪಿ, ಕಾಂಗ್ರೆಸ್ ಮೈತ್ರಿಕೂಟಕ್ಕೆ ಬಹುಮತ ಅಸಾಧ್ಯ ಎಂದಿರುವ ಸಮೀಕ್ಷೆಗಳು, ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದೆ ಅತಂತ್ರ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ. ಆದರೆ ಉತ್ತರ ಪ್ರದೇಶದಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ ಎಂದು ಹಲವು ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com