ಲೋಕಸಭೆಯಲ್ಲಿ ಜಯಾ ಸಾವಿನ ಬಗ್ಗೆ ಸಿಬಿಐ ತನಿಖೆಗೆ ಎಐಎಡಿಎಂಕೆ ಸಂಸದರ ಒತ್ತಾಯ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಶುಕ್ರವಾರ....
ಜಯಲಲಿತಾ
ಜಯಲಲಿತಾ
ನವದೆಹಲಿ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಶುಕ್ರವಾರ ಕೆಲವು ಎಐಎಡಿಎಂಕೆ ಸಂಸದರು ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದ್ದರಿಂದ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಕಲಾಪವನ್ನು ಕೆಲಕಾಲ ಮುಂದೂಡಿದರು.
ಇಂದು ಲೋಕಸಭೆ ಕಲಾ ಆರಂಭವಾಗುತ್ತಿದ್ದಂತೆ ಎಐಎಡಿಎಂಕೆಯ ಆರು ಸಂಸದರು ಸದನದ ಬಾವಿಗೆ ನುಗ್ಗಿ, ಜಯಲಲಿತಾ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಎಐಎಡಿಎಂಕೆ ಸಂಸದರು ಜಯಲಲಿತಾ ಅವರ ಫಲಕ ಹಿಡಿದು ಘೋಷಣೆ ಕೂಗುತ್ತಿದ್ದರಿಂದ ಸ್ಪೀಕರ್ 10 ನಿಮಿಷಗಳ ಕಾಲ ಕಲಾಪವನ್ನು ಮುಂದೂಡಿದರು. 
ಎಐಎಡಿಎಂಕೆಯ ಕೆಲವು ಸಂಸದರು ಜೈಲು ಪಾಲಾಗಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಅವರನ್ನು ಬೆಂಬಲಿಸುತ್ತಿದ್ದು, ಇನ್ನು ಕೆಲವು ಸಂಸದರು ಮಾಜಿ ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಅವರ ಬೆಂಬಲಕ್ಕೆ ನಿಂತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com