ಪಿಡಿಒ ಹುದ್ದೆಯನ್ನು 'ಬಿ' ಗ್ರೂಪ್ ಗೆ ಸೇರಿಸಲು ಸರ್ಕಾರ ಚಿಂತನೆ: ಎಚ್.ಕೆ.ಪಾಟೀಲ್

ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಯನ್ನು ಬಿ ಗ್ರೂಪ್ ಹುದ್ದೆಗೆ ಉನ್ನತೀಕರಿಸುವ ಬಗ್ಗೆ ಸರ್ಕಾರ ಪರಿಶೀಲನೆ ನಡೆಸುತ್ತಿದೆ....
ಎಚ್.ಕೆ.ಪಾಟೀಲ್
ಎಚ್.ಕೆ.ಪಾಟೀಲ್
ಬೆಂಗಳೂರು: ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಯನ್ನು ಬಿ ಗ್ರೂಪ್ ಹುದ್ದೆಗೆ ಉನ್ನತೀಕರಿಸುವ ಬಗ್ಗೆ ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹೆಚ್.ಕೆ. ಪಾಟೀಲ್ ಅವರು ಶುಕ್ರವಾರ ವಿಧಾನ ಪರಿಷತ್‌ ಗೆ ತಿಳಿಸಿದ್ದಾರೆ.
ಇಂದು ಪ್ರಶ್ನೋತ್ತರ ಅವಧಿಯಲ್ಲಿ ಎಂ.ಕೆ. ಪ್ರಾಣೇಶ್, ಕೋಟೋ ಶ್ರೀನಿವಾಸಪೂಜಾರಿ ಹಾಗೂ ಇತರ ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪಿಡಿಒ ಹುದ್ದೆಗಳನ್ನು ಗ್ರೂಪ್ ಬಿ ಹುದ್ದೆಗೆ ಉನ್ನತೀಕರಿಸಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಲ್ಲಿಂದ ಅನುಮತಿ ಸಿಕ್ಕ ಕೂಡಲೇ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಇದೇ ವೇಳೆ ಬೆಂಗಳೂರಿನ ಎಂ.ಎಸ್. ಬಿಲ್ಡಿಂಗ್‌ನ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಛೇರಿಯಲ್ಲಿ ದಲಿತ ಮಹಿಳೆ ಮೇಲೆ ಅತ್ಯಾಚಾರ ನಡೆದಿದೆ. ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರಾಣೇಶ್ ಆರೋಪಿಸುತ್ತಿದ್ದಂತೆ ಮಧ್ಯ ಪ್ರವೇಶಿಸಿದ ಸಭಾಪತಿ ಡಿ.ಹೆಚ್. ಶಂಕರಮೂರ್ತಿ ಅವರು, ಇಲಾಖೆ ಬಗ್ಗೆ ಚರ್ಚೆ ಮಾಡಲು ಅವಕಾಶ ಮಾಡಿಕೊಡುವುದಿಲ್ಲ. ಪ್ರಶ್ನೆ ಏನು ಕೇಳಿದ್ದೀರಿ ಅಷ್ಟಕ್ಕೆ ಮಾತ್ರ ಸಚಿವರಿಂದ ಉತ್ತರ ಪಡೆಯಿರಿ. ಅದನ್ನು ಬಿಟ್ಟು ಹೇಳಿದ್ದೆ ಹೇಳಿದರೆ ಮುಂದಿನ ಪ್ರಶ್ನೆಗೆ ಹೋಗಬೇಕಾಗುತ್ತದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com