'ಪಕ್ಷ ತೊರೆದ ಮತ್ತೊಬ್ಬ ಗೋವಾ ಕಾಂಗ್ರೆಸ್ ನಾಯಕ, ರಾಹುಲ್ ಗಾಂಧಿ ನಾಯಕ ಅಂತ ಒಪ್ಪಿಕೊಳ್ಳಲು ಸಾಧ್ಯವಿಲ್ಲ'

ಇತ್ತೀಚಿಗೆ ಮುಕ್ತಾಯಗೊಂಡ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗಿಂತ ಹೆಚ್ಚು ಸ್ಥಾನ ಪಡೆದರೂ ಸರ್ಕಾರ ರಚಿಸುವಲ್ಲಿ ವಿಫಲವಾಗಿರುವ ಗೋವಾ...
ಸವಿಯೋ ರೋಡ್ರಿಗಾಸ್
ಸವಿಯೋ ರೋಡ್ರಿಗಾಸ್
ನವದೆಹಲಿ: ಇತ್ತೀಚಿಗೆ ಮುಕ್ತಾಯಗೊಂಡ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗಿಂತ ಹೆಚ್ಚು ಸ್ಥಾನ ಪಡೆದರೂ ಸರ್ಕಾರ ರಚಿಸುವಲ್ಲಿ ವಿಫಲವಾಗಿರುವ ಗೋವಾ ಕಾಂಗ್ರೆಸ್ ನಲ್ಲಿ ಈಗ ಭಿನ್ನಾಭಿಪ್ರಾಯ ಸ್ಫೋಟಗೊಂಡಿದ್ದು, ವಿಶ್ವಜೀತ್ ರಾಣೆ ಅವರು ಪಕ್ಷ ಹಾಗೂ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ ಬೆನ್ನಲ್ಲೇ ಶುಕ್ರವಾರ ಮತ್ತೊಬ್ಬ ನಾಯಕ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದಾರೆ.
ಗೋವಾ ಕಾಂಗ್ರೆಸ್ ನಾಯಕ ಸವಿಯೋ ರೋಡ್ರಿಗಾಸ್ ಅವರು ಪಕ್ಷಕ್ಕೆ ರಾಜಿನಾಮೆ ನೀಡಿದ್ದು, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ನನ್ನ ನಾಯಕ ಎಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಅವರು ಯಾವುದೇ ಜವಾಬ್ದಾರಿಗಳನ್ನು ವಹಿಸಿಕೊಳ್ಳುವುದಿಲ್ಲ. ಹೀಗಾಗಿ ಗೋವಾ ಸೋಲಿಗೆ ದಿಗ್ವಿಜಯ್ ಸಿಂಗ್ ಹೊಣೆಗಾರ ಎಂದಿದ್ದಾರೆ. ಅಲ್ಲದೆ ಕಾಂಗ್ರೆಸ್ ಗೋವಾದಲ್ಲಿ ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೂ ಅಗತ್ಯ ಬೆಂಬಲ ಪಡೆಯುವಲ್ಲಿ ವಿಫಲವಾಗಿದೆ ಎಂದು ದೂರಿದ್ದಾರೆ.
ನಿನ್ನೆಯಷ್ಟೆ ಕಾಂಗ್ರೆಸ್ ಪಕ್ಷ ಹಾಗೂ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ವಿಶ್ವಜೀತ್ ರಾಣೆ ಅವರು ಸಹ ಕಾಂಗ್ರೆಸ್ ಕೇಂದ್ರ ನಾಯಕರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com