ಇಂದು ಲಖನೌನ ಲೋಕಭವನದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು, ನಾಳೆ ಮಧ್ಯಾಹ್ನ 2.15ಕ್ಕೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಯೋಗಿ ಆದಿತ್ಯನಾಥ್ ಅವರೊಂದಿಗೆ, ಕೇಶವ್ ಪ್ರಸಾದ್ ಮೌರ್ಯ ಪ್ರಕಾಶ್ ಪಂತ್, ಮದನ್ ಕೌಶಿಕ್, ಯಶ್ಪಾಲ್ ಆರ್ಯ, ಸುಬೋಧ್ ಉನಿಯಾಲ್, ರೇಖಾ ಆರ್ಯ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
ಬಿಎಸ್ಪಿ ಪದವಿಧರರಾಗಿರುವ ಯೋಗಿ ಆದಿತ್ಯನಾಥ್ ಅವರು 1998ರಿಂದ ಸತತ ಐದು ಬಾರಿ ಲೋಕಸಭೆ ಸದಸ್ಯರಾಗಿ ಆಯ್ಕೆಯಾಗಿದ್ದು, ಈಗ ದೇಶದ ಅತಿ ದೊಡ್ಡ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ.
ಕೇಂದ್ರ ಸಚಿವ ಮನೋಜ್ ಸಿನ್ಹಾ, ಬಿಜೆಪಿ ರಾಜ್ಯಾಧ್ಯಕ್ಷ ಕೇಶವ್ ಪ್ರಸಾದ್ ಮೌರ್ಯ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿಯ ರೇಸ್ ನಲ್ಲಿದ್ದರು. ಆದರೆ ಅಂತಿಮವಾಗಿ ಯೋಗಿ ಆದಿತ್ಯನಾಥ್ ಅವರನ್ನು ಆಯ್ಕೆ ಮಾಡಲಾಗಿದೆ.