ಇಂದು ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು, ರಾಜ್ಯದಲ್ಲಿ ಕುಡಿಯುವ ನೀರಿನ ಕೊರತೆ ಇದೆ. ಒಂದು ವೇಳೆ ನಮ್ಮ ಡ್ಯಾಂಗಳಲ್ಲಿ ನೀರಿದ್ದರೆ ಖಂಡಿತ ನಾವು ನೀರು ಬಿಡುತ್ತಿದ್ದೇವು. ಆದರೆ ಬೆಂಗಳೂರು, ಮೈಸೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ 3ರಿಂದ 4 ಟಿಎಂಸಿ ಕುಡಿಯುವ ನೀರಿನ ಕೊರತೆ ಇದೆ. ಹೀಗಾಗಿ ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.