ಅಕ್ರಮ ಗಣಿಗಾರಿಕೆ: ಮಾಜಿ ಸಿಎಂ ಕುಮಾರಸ್ವಾಮಿ, ಧರಂ ಸಿಂಗ್ ಗೆ ಮತ್ತೆ "ಸುಪ್ರೀಂ" ಕಂಟಕ!

ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಧರಂಸಿಂಗ್ ಸೇರಿ 11 ಜನರ ವಿರುದ್ಧ ಸುಪ್ರೀಂ ಕೋರ್ಟ್ ತನಿಖೆಗೆ ಆದೇಶ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಧರಂಸಿಂಗ್ ಸೇರಿ 11 ಜನರ ವಿರುದ್ಧ ಸುಪ್ರೀಂ ಕೋರ್ಟ್ ತನಿಖೆಗೆ  ಆದೇಶ ನೀಡಿದೆ.

ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಗಳಾದ ಧರಂಸಿಂಗ್ ಹಾಗೂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ತನಿಖೆಗೆ ಸುಪ್ರೀಂಕೋರ್ಟ್‌ನ ದ್ವಿಸದಸ್ಯ  ಪೀಠದಿಂದ ಆದೇಶ ನೀಡಿದ್ದು, ಎಸ್‌ಐಟಿ ಇದರ ತನಿಖೆ ನಡೆಸಲಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದ್ದು, ಅವರ ವಿರುದ್ಧದ ತನಿಖೆಗೆ ಇದ್ದ  ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ಮುಂದುವರಿಸಿದೆ.

ಇನ್ನು ಹಿರಿಯ ಆಧಿಕಾರಿಗಳಾದ ವಿ.ಉಮೇಶ್ ಹಾಗೂ ಗಂಗಾರಾಮ್ ಬಡೇರಿಯಾ, ಎಂ.ರಾಮಪ್ಪ ಸೇರಿ 11 ಅಧಿಕಾರಿಗಳ ವಿರುದ್ಧ ತನಿಖೆ ಮುಂದುವರೆಯಲಿದೆ. ಮೂರು ತಿಂಗಳೊಳಗೆ ತನಿಖೆಯ ವರದಿಯನ್ನು ಸಲ್ಲಿಸಲು  ಎಸ್‌ಐಟಿಗೆ ಸುಪ್ರೀಂ ಸೂಚಿಸಿದೆ ಎಂದು ತಿಳಿದುಬಂದಿದೆ.

ಅಕ್ರಮ ಗಣಿಗಾರಿಕೆ ಸಂಬಂಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಅವರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com