ವಿಷಾನಿಲ ಸೇವಿಸಿ ಆಂದ್ರದಲ್ಲಿ ಐವರ ಸಾವು

ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ವಿಷಾನಿಲ ಸೇವಿಸಿ ಐವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಗುರುವಾರ ಪೊಲೀಸರು ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ವಿಜಯವಾಡ: ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ವಿಷಾನಿಲ ಸೇವಿಸಿ ಐವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಗುರುವಾರ ಪೊಲೀಸರು ಹೇಳಿದ್ದಾರೆ. 
ಮೊಗಾಳ್ಥುರ್ ನಲ್ಲಿ ಆಕ್ವಾ ಆಹಾರ ಸಂಸ್ಕರಣಾ ಘಟಕದಲ್ಲಿ ರಾಸಾಯನಿಕ ಕೊಳವನ್ನು ಸ್ವಚ್ಛಗೊಳಿಸುವಾಗ ಈ ಘಟನೆ ನಡೆದಿದೆ. 
ಈ ಐವರು ವಿಷಾನಿಲ ಸೇವಿಸಿ ಮೃತಪಟ್ಟಿದ್ದಾರೆಯೇ ಅಥವಾ ಆಮ್ಲಜನಕದ ಕೊರತೆಯಿಂದ ಉಸಿರುಗಟ್ಟಿ ಸತ್ತಿದ್ದಾರೆಯೇ ಎಂದು ಪತ್ತೆಹಚ್ಚಲು ತನಿಖೆ ಜಾರಿಯಲ್ಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 
ಘಟಕದ ನಿರ್ವಹಣೆಯಲ್ಲಿನ ನಿರ್ಲಕ್ಷ್ಯದಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಸಂತ್ರಸ್ತರ ಕುಟುಂಬವರ್ಗ ಆರೋಪಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com