ಪ್ರಧಾನ ಸುದ್ದಿ

ರಾಜ್ಯಕ್ಕೆ ಕೇಂದ್ರದಿಂದ 1,782 ಕೋಟಿ ರು. ಬರ ಪರಿಹಾರ ಬಿಡುಗಡೆ

ತೀವ್ರ ಬರಗಾಲ ಎದುರಿಸುತ್ತಿರುವ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಶನಿವಾರ 1,782 ಕೋಟಿ ರುಪಾಯಿ....

ರಾಜ್ಯಕ್ಕೆ ಕೇಂದ್ರದಿಂದ 1,782 ಕೋಟಿ ರು. ಬರ ಪರಿಹಾರ ಬಿಡುಗಡೆ
ರಾಜನಾಥ್ ಸಿಂಗ್
Published On :
ನವದೆಹಲಿ: ತೀವ್ರ ಬರಗಾಲ ಎದುರಿಸುತ್ತಿರುವ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಶನಿವಾರ 1,782 ಕೋಟಿ ರುಪಾಯಿ ಬರ ಪರಿಹಾರ ಬಿಡುಗಡೆ ಮಾಡಿದೆ.
ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಇಂದು ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಕರ್ನಾಟಕಕ್ಕೆ 1,782 ಕೋಟಿ, ತಮಿಳುನಾಡಿಗೆ 2014 ಕೋಟಿ ಹಾಗೂ ಉತ್ತರಾಖಂಡ್ ಗೆ 209 ಕೋಟಿ ರುಪಾಯಿ ಬಿಡುಗಡೆ ಮಾಡಲಾಗಿದೆ.
ಈ ಹಿಂದೆ ಪ್ರಧಾನಿ ಮೋದಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿದ್ದ ಸಂದರ್ಭದಲ್ಲಿ ಬರ ಪರಿಹಾರ ರೂಪದಲ್ಲಿ 4,702 ಕೋಟಿ ರೂ ಬಿಡುಗಡೆಗೆ ಮನವಿ ಮಾಡಿದ್ದರು. 
ಕರ್ನಾಟಕ ಹಾಗೂ ಉತ್ತರಾಖಂಡದಲ್ಲಿ ಸಂಭವಿಸಿದ್ದ ಭೀಕರ ಬರ ಹಾಗೂ ಪ್ರವಾಹ ಕುರಿತಂತೆ ಆಂತರಿಕ ಸಚಿವಾಲಯದ ತಂಡ ಸಲ್ಲಿಸಿದ್ದ ವರದಿಯನ್ನು ಪರಿಶೀಲಿಸಿ ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ಪಡೆ ನಿಧಿ ಹಾಗೂ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಪರಿಹಾರ ಬಿಡುಗಡೆ ಮಾಡಲಾಗಿದೆ ಎಂದು ಗೃಹ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಕ್ಕೆ 4,702 ಕೋಟಿ ರುಪಾಯಿ ಬರ ಪರಿಹಾರ ನೀಡುವಂತೆ ಮನವಿ ಮಾಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.