ಲಾಲೂ ಪ್ರಸಾದ್ ಬಹುಕೋಟಿ ಮೇವು ಹಗರಣ: ಎಲ್ಲಾ ಪ್ರಕರಣಗಳ ಪ್ರತ್ಯೇಕ ವಿಚಾರಣೆಗೆ ಸುಪ್ರೀಂಕೋರ್ಟ್ ಆದೇಶ

ಆರ್ ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಬಹುಕೋಟಿ ಮೇವು ಹಗರಣ ಸಂಬಂಧ ಜಾರ್ಖಂಡ್ ಹೈಕೋರ್ಟ್ ನೀಡಿದ್ದ ತೀರ್ಪನ್...
ಲಾಲು ಪ್ರಸಾದ್ ಯಾದವ್
ಲಾಲು ಪ್ರಸಾದ್ ಯಾದವ್
ನವದೆಹಲಿ: ಆರ್ ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಬಹುಕೋಟಿ ಮೇವು ಹಗರಣ ಸಂಬಂಧ ಜಾರ್ಖಂಡ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಬದಿಗೊತ್ತಿರುವ ಸುಪ್ರೀಂ ಕೋರ್ಟ್ ಎಲ್ಲಾ ಕೇಸುಗಳ ಪ್ರತ್ಯೇಕ ವಿಚಾರಣೆ ನಡೆಸುವಂತೆ ಸೂಚಿಸಿದೆ. 
ಮೇವು ಹಗರಣ ಸಂಬಂಧ ಲಾಲು ಪ್ರಸಾದ್ ಯಾದವ್ ಪ್ರತ್ಯೇಕ ವಿಚಾರಣೆ ಎದುರಿಸುವ ಅವಶ್ಯಕತೆಯಿಲ್ಲ, ಒಂದೇ ಅಪರಾಧದಡಿ ಎಲ್ಲಾ ಕೇಸುಗಳು ವಿಚಾರಣೆ ನಡೆಯಲಿ ಎಂದು ಜಾರ್ಖಂಡ್ ಹೈಕೋರ್ಟ್ ತೀರ್ಪು ನೀಡಿತ್ತು.
ಬಹು ಕೋಟಿ ಮೊತ್ತದ ಮೇವು ಹಗರಣ ಪ್ರಕರಣದಿಂದ ಲಾಲೂ ಪ್ರಸಾದ್‌ ಯಾದವ್‌ ಅವರನ್ನು ಮುಕ್ತಗೊಳಿಸಿ  ಜಾರ್ಖಂಡ್‌ ಹೈಕೋರ್ಟ್ ನ 2014ರ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಿಬಿಐ ಮನವಿ ಸಲ್ಲಿಸಿತ್ತು.

ಸಿಬಿಐ ಮನವಿ ಪರಿಗಣಿಸಿರುವ ಸುಪ್ರೀಂ ಕೋರ್ಟ್‌  ಕ್ರಿಮಿನಲ್‌ ಸಂಚು ಆರೋಪದಿಂದ ಮುಕ್ತಗೊಳಿಸಲು ಸಾಧ್ಯವಿಲ್ಲ ಎಂದಿದ್ದು, ಸಿಬಿಐ ವಿಚಾರಣೆ ಮುಂದುವರಿಸಲು ಸೂಚಿಸಿದೆ. ಜೊತೆಗೆ ಲಾಲೂ ವಿರುದ್ಧದ ಕ್ರಿಮಿನಲ್ ಸಂಚು ಆರೋಪ ಕೈ ಬಿಡಲು ಸಾಧ್ಯವಿಲ್ಲ. ಎಲ್ಲಾ ಆರೋಪಗಳ ತನಿಖೆಯನ್ನು ಪ್ರತ್ಯೇಕವಾಗಿ ಕೈಗೆತ್ತಿಕೊಳ್ಳುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.

ಲಾಲೂ ಪ್ರಸಾದ್ ಯಾದವ್ ಸೇರಿದಂತೆ ಉಳಿದ ಎಲ್ಲಾ ಆರೋಪಿಗಳು 900 ಕೋಟಿ ರು. ಮೇವು ಹಗರಣದ ಪ್ರತ್ಯೇಕ ವಿಚಾರಣೆ ಎದುರಿಸಬೇಕೆಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಹಾಗೂ 9 ತಿಂಗಳೊಳಗೆ ಪ್ರಕರಣದ ವಿಚಾರಣೆ ಮುಗಿಸಬೇಕು ಎಂದು ಹೇಳಿದೆ.
ಬಹುಕೋಟಿ ಮೇವು ಹಗರಣದಲ್ಲಿ ಅಪರಾಧಿಯಾಗಿ ಜೈಲುವಾಸಿಯಾಗಿದ್ದ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರಿಗೆ ಸುಪ್ರೀಂಕೋರ್ಟ್ 2013ರಲ್ಲಿ ಜಾಮೀನು ನೀಡಿತ್ತು. ಆರ್ ಜೆಡಿ ಮುಖ್ಯಸ್ಥ ಲಾಲೂ ಅವರಿಗೆ ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯ ಲಾಲು 5 ವರ್ಷ ಕಾಲ ಜೈಲುಶಿಕ್ಷೆ ವಿಧಿಸಿತ್ತು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com