ಮೇ 11ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

2016- 2017ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಮೇ 11ರಂದು ಪ್ರಕಟವಾಗಲಿದೆ ಎಂದು...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: 2016- 2017ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಮೇ 11ರಂದು ಪ್ರಕಟವಾಗಲಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ ಶಿಖಾ ಅವರು ಮಂಗಳವಾರ ಹೇಳಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶಕ್ಕೆ ಸಂಬಂಧಿಸಿದಂತೆ ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರೊಂದಿಗೆ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಿಖಾ ಅವರು, ಮೇ 11ರಂದು ಮಧ್ಯಾಹ್ನ 3ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಇಲಾಖೆಯ ಅಧಿಕೃತ ವೆಬ್‍ಸೈಟ್ (www.pue.kar.nic.in ) ನಲ್ಲಿ ಪ್ರಕಟಿಸಲಾಗುವುದು ಮತ್ತು ಮೇ 12 ರಂದು ಆಯಾ ಕಾಲೇಜುಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದರು.
ಕಳೆದ ಮಾರ್ಚ್ 9ರಿಂದ 27 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಗಿತ್ತು. ಈ ವರ್ಷ 6,84,490 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದು, ಈ ಪೈಕಿ 3,48,562 ವಿದ್ಯಾರ್ಥಿಗಳು ಹಾಗೂ 3,35,909 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com