ನಿಶ್ಯಸ್ತ್ರ ಯೋಧನ ಮೇಲಿನ ದಾಳಿ ಉಗ್ರರ ಹೇಡಿತನದ ಪ್ರತೀಕ: ಅರುಣ್ ಜೇಟ್ಲಿ

ನವದೆಹಲಿ: ಕುಟುಂಬ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸೇನಾಧಿಕಾರಿ ಅಪಹರಿಸಿ ಗುಂಡಿಟ್ಟು ಕೊಲ್ಲುವ ಮೂಲಕ ಉಗ್ರರು ತಮ್ಮ ಹೇಡಿತನವನ್ನು ಪ್ರದರ್ಶಿಸಿದ್ದಾರೆ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ಸೇನಾಧಾರಿಯನ್ನು ಉಗ್ರರು ಅಪಹರಿಸಿ ಅವರನ್ನು ಗುಂಡಿಟ್ಟು ಕೊಂದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅರುಣ್ ಜೇಟ್ಲಿ ಅವರು, ಸೇನಾಧಿಕಾರಿಯ ಮೇಲಿನ ದಾಳಿ ಉಗ್ರ ಹೇಡಿತನದ ಪ್ರತೀಕ ಎಂದು ಜರಿದಿದ್ದಾರೆ. ಈ ಬಗ್ಗೆ ಟ್ವಿಟರ್ ನಲ್ಲಿ ಬರೆದಿರುವ ಅವರು, ದೇವರು ಯೋಧ ಉಮರ್ ಫಯಾಜ್ ಅವರ ಸಾವಿನ ನೋವನ್ನು ಭರಿಸುವ ಶಕ್ತಿ ಅವರ ಕುಟುಂಕ್ಕೆ ಕರುಣಿಸಲಿ. ಅವರ ನೋವಿನಲ್ಲಿ ನಾವೂ ಭಾಗಿಯಾಗುತ್ತೇವೆ. ಲೆಫ್ಟಿನೆಂಟ್ ಉಮರ್ ಫಯಾಜ್ ಕಾಶ್ಮೀರಿ ಯುವಕರಿಗೆ ಮುಂದೆಯೂ ಸ್ಪೂರ್ತಿಯಾಗಿರುತ್ತಾರೆ ಎಂದು ಹೇಳಿದ್ದಾರೆ.
ಅಂತೆಯೇ "ನಿಶಸ್ತ್ರ ಯೋಧನನ್ನು ಅಪಹರಿಸಿ ಅವರನ್ನು ಕೊಂದು ಹಾಕುವ ಮೂಲಕ ಉಗ್ರರು ತಮ್ಮ ಹೇಡಿತನದ ಪ್ರದರ್ಶನ ಮಾಡಿದ್ದಾರೆ. ಲೆಫ್ಟಿನೆಂಟ್ ಉಮರ್ ಫಯಾಜ್ ಅವರ ತ್ಯಾಗ ಎಂದಿಗೂ ವ್ಯರ್ಥವಾಗುವುದಿಲ್ಲ. ಕಣಿವೆ ರಾಜ್ಯದಲ್ಲಿ ಭಯೋತ್ಪಾದನೆಯನ್ನು ಬುಡಸಹಿತ ಕಿತ್ತೊಗೆಯಲು ಯುವಕರಿಗೆ ಸ್ಪೂರ್ತಿಯಾಗುತ್ತದೆ" ಎಂದು ಹೇಳಿದ್ದಾರೆ.
2 ರಜಪೂತನ ರೈಫಲ್ಸ್ ತಂಡ ಸೇನಾಧಿಕಾರಿಯಾಗಿದ್ದ ಉಮರ್ ಫಯಾಜ್ ಅವರು, ಸಂಬಂಧಿಕರೊಬ್ಬರ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದರು. ಈ ವೇಳೆ ಅವರನ್ನು ಅಪಹರಿಸಿದ್ದ ಉಗ್ರರು ಅವರನ್ನು ಗುಂಡಿಟ್ಟು ಹತ್ಯೆಗೈದಿದ್ದರು. ಅವರ ಶವ ಶೋಪಿಯಾನ್ ನಲ್ಲಿ ಪತ್ತೆಯಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


