ಶ್ರೀನಗರ: ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಮೆಹರಿಶಿ ಗುರುವಾರ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರನ್ನು ಭೇಟಿ ಮಾಡಿ ಶಾಂತಿ ಕದಡಿರುವ ಕಣಿವೆ ರಾಜ್ಯದ ಪರಿಸ್ಥಿತಿಯನ್ನು ಚರ್ಚಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
"ಗೃಹ ಕಾರ್ಯದರ್ಶಿ ರಾಜ್ಯಪಾಲ ಎನ್ ಎನ್ ವೋಹ್ರಾ ಅವರನ್ನು ಕೂಡ ಇಂದು ರಾಜಭವನದಲ್ಲಿ ಭೇಟಿ ಮಾಡಲಿದ್ದಾರೆ" ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ತಿಂಗಳು ಮುಫ್ತಿ ನವದೆಹಲಿಯಲ್ಲಿ ಪ್ರಧಾನಿ ಮತ್ತು ಗೃಹ ಸಚಿವರನ್ನು ಭೇಟಿ ಮಾಡಿದ ನಂತರ ಕಣಿವೆ ರಾಜ್ಯಕ್ಕೆ ರಾಜೀವ್ ಮೆಹರಿಶಿ ಅವರ ಮೊದಲ ಭೇಟಿ ಇದಾಗಿದೆ.
ಲೋಕಸಭಾ ಚುನಾವಣಾ ನಂತರ ಏಪ್ರಿಲ್ ನಲ್ಲಿ ನಡೆದ ನಾಗರಿಕರ ಹತ್ಯೆಯ ನಂತರ ಕಣಿವೆ ಅಶಾಂತಿಯಿಂದ ಕುದಿಯುತ್ತಿದೆ.