ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ಬೀದರ್ ಗೆ ಕೊನೆ ಸ್ಥಾನ

2016- 2017ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಉಡುಪಿ ಜಿಲ್ಲೆ ಪ್ರಥಮ....
ತನ್ವೀರ್ ಸೇಠ್
ತನ್ವೀರ್ ಸೇಠ್
ಬೆಂಗಳೂರು: 2016- 2017ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಉಡುಪಿ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನ ಪಡೆದರ ಉತ್ತರ ಕನ್ನಡ ಮೂರನೇ ಸ್ಥಾನ ಪಡೆದಿದ್ದು, ಬೀದರ್ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ಇಂದು ಮಧ್ಯಾಹ್ನ ಮಲ್ಲೇಶ್ವರಂನಲ್ಲಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ್ದು, ಪ್ರತಿವರ್ಷದಂತೆ ಈ ವರ್ಷವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಉಡುಪಿ ಜಿಲ್ಲೆಯ ಶೇ.90.1ರಷ್ಟು ವಿದ್ಯಾರ್ಥಿಗಳು, ದಕ್ಷಿಣ ಕನ್ನಡ ಜಿಲ್ಲೆಯ ಶೇ.89.92ರಷ್ಟು ವಿದ್ಯಾರ್ಥಿಗಳು ಹಾಗೂ ಉತ್ತರ ಕನ್ನಡ ಜಿಲ್ಲೆಯ ಶೇ.71.99ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಈ ಬಾರಿ ಒಟ್ಟು ಶೇ.52.38ರಷ್ಟು ಫಲಿತಾಂಶ ಬಂದಿದ್ದು, ಕಳೆದ ಬಾರಿಗಿಂತ ಶೇ.4.82ರಷ್ಟು ಇಳಿಕೆ ಕಂಡಿದೆ. ರಾಜ್ಯದ 132 ಕಾಲೇಜುಗಳು ಶೂನ್ಯ ಫಲಿತಾಂಶ ಪಡೆದಿವೆ.

ವಿಜ್ಞಾನ ವಿಭಾಗದ ಶೇ.60.71 ರಷ್ಟು ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದ ಶೇ.60.09ರಷ್ಟು ವಿದ್ಯಾರ್ಥಿಗಳು ಹಾಗೂ ಕಲಾ ವಿಭಾಗದಲ್ಲಿ ಶೇ.35ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ದ್ವಿತೀಯ ಪಿಯುಸಿಯಲ್ಲಿ ಒಟ್ಟು ಶೇ.60.28ರಷ್ಟು ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದರೆ, ಶೇ.44.47ರಷ್ಟು ಹುಡುಗರು ಪಾಸ್ ಆಗಿದ್ದಾರೆ.
ಫಲಿತಾಂಶಕ್ಕಾಗಿ http://karresults.nic.in, http://pue.kar.nic.inಗೆ ಭೇಟಿ ನೀಡಿ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com