ಹಫೀಜ್ ಸಯೀದ್ ಜಿಹಾದ್ ಹೆಸರಿನಲ್ಲಿ ಭಯೋತ್ಪಾದನೆ ಹರಡುತ್ತಿದ್ದಾನೆ: ಪಾಕಿಸ್ತಾನ

Published On :
ಲಾಹೋರ್: ಜಮಾತ್-ಉದ್-ದವಾ(ಜೆಯುಡಿ) ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಜಿಹಾದ್ ಹೆಸರಿನಲ್ಲಿ ಭಯೋತ್ಪಾದನೆ ಹರಡುತ್ತಿದ್ದಾನೆ ಎಂದು ಸ್ವತಃ ಪಾಕಿಸ್ತಾನ ಸ್ಪಷ್ಟಪಡಿಸಿದೆ.
ಹಫೀಜ್ ಸಯೀದ್ ಬಂಧನದ ಬಗ್ಗೆ ನ್ಯಾಯಾಂಗ ಸಮಿತಿಯೊಂದಕ್ಕೆ ಸ್ಪಷ್ಟನೆ ನೀಡಿರುವ ಪಾಕಿಸ್ತಾನದ ಆಂತರಿಕ ಸಚಿವಾಲಯ, "ಕಾಶ್ಮೀರಿ ಪ್ರತ್ಯೇಕತಾವಾದಿಗಳ ಪರವಾಗಿ ಮಾತನಾಡಿದ್ದಕ್ಕೆ ನನ್ನನ್ನು ಬಂಧಿಸಲಾಗಿದೆ" ಎಂಬ ಆತನ ವಾದವನ್ನು ತಳ್ಳಿಹಾಕಿದ್ದು, ಆತ ಜಿಹಾದ್ ಹೆಸರಿನಲ್ಲಿ ಭಯೋತ್ಪಾದನೆಯನ್ನು ಹರಡುತ್ತಿದ್ದಾನೆ. ಆದ್ದರಿಂದ ಬಂಧಿಸಲಾಗಿದೆ ಎಂದು ಹೇಳಿದೆ.
ಲಾಹೋರ್ ಹೈಕೋರ್ಟ್ ನ ನ್ಯಾಯಾಧೀಶ ಹಾಗೂ ಬಲೂಚಿಸ್ತಾನ ಹೈಕೋರ್ಟ್ ನ ನ್ಯಾಯಾಧೀಶರಿದ್ದ ನ್ಯಾಯಾಂಗ ಸಮಿತಿ ಹಫೀಜ್ ಸಯೀದ್ ಬಂಧನದ ಬಗ್ಗೆ ಸಂಪೂರ್ಣ ವಿವರಣೆ ನೀಡುವಂತೆ ಪಾಕಿಸ್ತಾನದ ಆಂತರಿಕ ಸಚಿವಾಲಯಕ್ಕೆ ಸೂಚನೆ ನೀಡಿತ್ತು.
ಪಾಕಿಸ್ತಾನದ ಆಂತರಿಕ ಸಚಿವಾಲಯದ ವಿವರಣೆಯನ್ನು ಆಲಿಸಿರುವ ಪಾಕ್ ನ್ಯಾಯಾಂಗ ಸಮಿತಿ ಮುಂದಿನ ವಿಚಾರಣೆಯನ್ನು ಮೇ.15 ಕ್ಕೆ ಮುಂದೂಡಿದ್ದು, ಮುಂದಿನ ವಿಚಾರಣೆಯಲ್ಲಿ ಖುದ್ದು ಹಾಜರಾಗುವಂತೆ ಪಾಕಿಸ್ತಾನದ ಆಟಾರ್ನಿ ಜನರಲ್ ಗೆ ಸೂಚನೆ ನೀಡಿದೆ.
ಪಾಕಿಸ್ತಾನದ ಆರೋಪಗಳನ್ನು ತಳ್ಳಿಹಾಕಿರುವ ಉಗ್ರ ಹಫೀಜ್ ಸಯೀದ್, ನಾನು ಕಾಶ್ಮೀರಿಗಳ ಪರವಾಗಿ ಧ್ವನಿ ಎತ್ತಿರುವುದರಿಂದ ನನ್ನನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


