ಅಕ್ರಮ ಗಣಿಗಾರಿಕೆ: ಹಿರಿಯ ಐಎಎಸ್ ಅಧಿಕಾರಿ ಗಂಗಾರಾಮ್ ಬಡೇರಿಯಾ ಬಂಧನ

ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಎಎಸ್ ಅಧಿಕಾರಿ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗಂಗಾರಾಮ್....
ಗಂಗಾರಾಮ್ ಬಡೇರಿಯಾ
ಗಂಗಾರಾಮ್ ಬಡೇರಿಯಾ
ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಎಎಸ್ ಅಧಿಕಾರಿ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗಂಗಾರಾಮ್ ಬಡೇರಿಯಾ ಅವರನ್ನು ಸೋಮವಾರ ಬಂಧಿಸಲಾಗಿದೆ.
ಜಂತಕಲ್ ಮೈನಿಂಗ ಕಂಪೆನಿಯ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಇಂದು ವಿಶೇಷ ತನಿಖಾ ತಂಡ(ಎಸ್ಐಟಿ)ದ ಮುಂದೆ ವಿಚಾರಣೆಗೆ ಹಾಜರಾಗಿದ್ದ ಬಡೇರಿಯಾ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.
ಇತ್ತೀಚಿಗೆ ಸುಪ್ರೀಂ ಕೋರ್ಟ್, ಜಂತಕಲ್ ಮೈನಿಂಗ ಕಂಪೆನಿಯ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಮಾಜಿ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಅವರ ವರದಿಯಲ್ಲಿ ಹೆಸರಿಸಿರುವ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ನೀಡುವಂತೆ ಎಸ್‌ಐಟಿಗೆ ನಿರ್ದೇಶನ ನೀಡಿತ್ತು.
ಸಂತೋಷ್‌ ಹೆಗ್ಡೆ ಅವರ ವರದಿಯಲ್ಲಿ ಗಂಗಾರಾಮ್ ಬಡೇರಿಯಾ ಅವರ ಹೆಸರಿದ್ದು, ಎಚ್ ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ನಡೆದ ಅಕ್ರಮ ಗಣಿಗಾರಿಕೆಯ ಐಎಎಸ್ ಅಧಿಕಾರಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.
ಇದೇ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ, ಎಚ್‌.ಡಿ. ಕುಮಾರಸ್ವಾಮಿ ಹಾಗೂ ಧರಂ ಸಿಂಗ್ ಅವರ ಹೆಸರು ಕೂಡ ಇದೆ. ಆದರೆ ಎಸ್‌.ಎಂ. ಕೃಷ್ಣ ಅವರ ವಿರುದ್ಧ ತನಿಖೆಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com