ಅನುರಾಗ್ ತಿವಾರಿ
ಪ್ರಧಾನ ಸುದ್ದಿ
ಐಎಎಸ್ ಅಧಿಕಾರಿ ತಿವಾರಿ ಸಾವಿನ ಕುರಿತು ಸೂಕ್ತ ತನಿಖೆ ನಡೆಸಿ: ಉ. ಪ್ರದೇಶ ಸಿಎಂಗೆ ಸಿದ್ದರಾಮಯ್ಯ ಪತ್ರ
ಕರ್ನಾಟಕ ವೃಂದದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ(36) ನಿಗೂಢ ಸಾವಿನ ಕುರಿತು ಸೂಕ್ತ ತನಿಖೆ ನಡೆಸುವಂತೆ....
ಬೆಂಗಳೂರು: ಕರ್ನಾಟಕ ವೃಂದದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ(36) ನಿಗೂಢ ಸಾವಿನ ಕುರಿತು ಸೂಕ್ತ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ.
ಅನುರಾಗ್ ತಿವಾರಿ ಸಾವಿನ ಕುರಿತು ಹಲವು ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪ್ರಕರಣದ ಕುರಿತು ದಕ್ಷ್ಯ ಅಧಿಕಾರಿಗಳಿಂದ ತನಿಖೆ ನಡೆಸುವಂತೆ ಉತ್ತರ ಪ್ರದೇಶ ಸಿಎಂಗೆ ಮನವಿ ಮಾಡಿದ್ದಾರೆ.
ಈ ಮಧ್ಯೆ ಅನುರಾಗ್ ತಿವಾರಿ ಸಾವಿನ ಕುರಿತು ವಿಶೇಷ ತನಿಖಾ ತಂಡ(ಎಸ್ಐಟಿ) ತನಿಖೆ ನಡೆಸಲಿದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ.
ನಿಗೂಢವಾಗಿ ಸಾವನ್ನಪ್ಪಿದ ಅನುರಾಗ್ ತಿವಾರಿ ಅವರು ರಾಜ್ಯ ಸರ್ಕಾರದ ಸಾವಿರಾರು ಕೋಟಿ ರುಪಾಯಿ ಹಗರಣ ಬಯಲಿಗೆಳೆಯಲು ಸಜ್ಜಾಗಿದ್ದರು ಎಂದು ಉತ್ತರ ಪ್ರದೇಶ ಸಚಿವ ಸುರೇಶ್ ಕುಮಾರ್ ಖನ್ನಾ ಅವರು ನಿನ್ನೆಯಷ್ಟೇ ವಿಧಾನಸಭೆಗೆ ತಿಳಿಸಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಅನುರಾಗ್ ತಿವಾರಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದು, ಈ ಕುರಿತು ಯಾವುದೇ ತನಿಖೆಗೂ ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ