ಬಿಸಿಸಿಐ ಆಡಳಿತಾತ್ಮಕ ಹುದ್ದೆಗೆ ರಾಮಚಂದ್ರ ಗುಹಾ ರಾಜಿನಾಮೆ!

ಇತ್ತೀಚೆಗಷ್ಟೇ ಬಿಸಿಸಿಐ ಆಡಳಿತಾತ್ಮಕ ಹುದ್ದೆಗೆ ನೇಮಕವಾಗಿದ್ದ ಖ್ಯಾತ ಇತಿಹಾಸ ತಜ್ಞ ರಾಮಚಂದ್ರ ಗುಹಾ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ನವದೆಹಲಿ: ಇತ್ತೀಚೆಗಷ್ಟೇ ಬಿಸಿಸಿಐ ಆಡಳಿತಾತ್ಮಕ ಹುದ್ದೆಗೆ ನೇಮಕವಾಗಿದ್ದ ಖ್ಯಾತ ಇತಿಹಾಸ ತಜ್ಞ ರಾಮಚಂದ್ರ ಗುಹಾ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಗುರುವಾರ ಈ ಬಗ್ಗೆ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿರುವ ರಾಮಚಂದ್ರ ಗುಹಾ ಅವರು, ಬಿಸಿಸಿಐ ಆಡಳಿತಾತ್ಮಕ ಮಂಡಳಿಯಲ್ಲಿನ ನನ್ನ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದೇನೆ. ಸುಪ್ರೀಂಕೋರ್ಟ್ ನೇಮಕ ಮಾಡಿದ್ದ  ಆಡಳಿತಾತ್ಮಕ ಸಮಿತಿಯ ಅಧ್ಯರಾಗಿರುವ ವಿನೋದ್ ರಾಯ್ ಅವರಿಗೆ ತನ್ನ ರಾಜಿನಾಮೆ ಸಲ್ಲಿಸಿರುವುದಾಗಿ ಹೇಳಿದ್ದಾರೆ. ಅಂತೆಯೇ ವೈಯಕ್ತಿಕ ಕಾರಣಗಳಿಂದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ರಾಜಿನಾಮೆ  ಸಲ್ಲಿಸುತ್ತಿರುವುದಾಗಿ ರಾಮಚಂದ್ರ ಗುಹಾ ಹೇಳಿಕೊಂಡಿದ್ದಾರೆ.

ಲೋಧಾ ಸಮಿತಿಯ ಶಿಫಾರಸ್ಸು ಜಾರಿಗೊಳಿಸುವಲ್ಲಿ ಮಾಜಿ ಅಧ್ಯಕ್ಷ ಅನುರಾಗ್ ಠಾಕೂರ್ ಅವರು ವಿಫಲರಾದ ಹಿನ್ನಲೆಯಲ್ಲಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿತ್ತು. ಬಳಿಕ 2017ರಲ್ಲಿ ಸುಪ್ರೀಂ ಕೋರ್ಟ್‌ ವಿನೋದ್  ರಾಯ್ ನೇತೃತ್ವದಲ್ಲಿ  ಬಿಸಿಸಿಐ ಆಡಳಿತ ಮಂಡಳಿ ರಚನೆ ಮಾಡಿತ್ತು. ಈ ಸಮಿತಿಯಲ್ಲಿ ರಾಮಟಂದ್ರ ಗುಹಾ ಅವರೂ ಕೂಡ ಸ್ಥಾನ ಪಡೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com