• Tag results for ಆರೋಗ್ಯ ಇಲಾಖೆ

ಕೋವಿಡ್-19 ಸೋಂಕು ಪ್ರಸರಣದ ಮಾಹಿತಿ ತಿಳಿಯಲು ಐಸಿಎಂಆರ್ ನಿಂದ ಶೀಘ್ರದಲ್ಲೇ ದೇಶಾದ್ಯಂತ ಸೆರೋ ಸರ್ವೆ: ಆರೋಗ್ಯ ಸಚಿವಾಲಯ

ದೇಶದಲ್ಲಿ ಮಾರಕ ಕೊರೋನಾ ಸೋಂಕಿನ 2ನೇ ಅಲೆಯ ಆರ್ಭಟ ತಗ್ಗಿದೆಯಾದರೂ ಸಾಂಕ್ರಾಮಿಕದ ಪ್ರಸರಣ ಕುರಿತ ಅಧ್ಯಯನಕ್ಕೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹಿಸಲು ಶೀಘ್ರದಲ್ಲೇ ಐಸಿಎಂಆರ್ ಸೆರೋ ಸರ್ವೆ ನಡೆಸಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

published on : 11th June 2021

50ಕ್ಕೂ ಹೆಚ್ಚು ಹಾಸಿಗೆಗಳನ್ನು ಹೊಂದಿರುವ ಖಾಸಗಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಘಟಕ ಅಳವಡಿಕೆ ಕಡ್ಡಾಯ: ಸರ್ಕಾರ

ರಾಜ್ಯದಲ್ಲಿನ 50ಕ್ಕಿಂತ ಹೆಚ್ಚು ಹಾಸಿಗೆಗಳನ್ನು ಹೊಂದಿರುವ ಎಲ್ಲ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ವೈದ್ಯಕೀಯ ಆಮ್ಲಜನಕದ ಘಟಕಗಳನ್ನು ಅಳವಡಿಸಿಕೊಳ್ಳಬೇಕು ಎಂದು ಆರೊಗ್ಯ ಇಲಾಖೆ ಸೂಚಿಸಿದೆ. 

published on : 5th June 2021

ಇಂಗ್ಲೆಂಡ್ ಆರೋಗ್ಯ ಇಲಾಖೆಯಿಂದ ಟೀಂ ಇಂಡಿಯಾಗೆ ಎರಡನೇ ಡೋಸ್ ಕೋವಿಡ್-19 ಲಸಿಕೆ

ಇಂಗ್ಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಹಾಗೂ ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ತೆರಳಲು ಸಿದ್ಧತೆಯಲ್ಲಿ ತೊಡಗಿರುವ ಟೀಂ ಇಂಡಿಯಾ ಆಟಗಾರರು ಈಗಾಗಲೇ ಕೋವಿಡ್-19 ಲಸಿಕೆಯ ಮೊದಲ ಡೋಸ್  ಪಡೆದುಕೊಂಡಿದ್ದು, ಇಂಗ್ಲೆಂಡ್ ಆರೋಗ್ಯ ಇಲಾಖೆಯಿಂದ ಎರಡನೇ ಡೋಸ್ ಹಾಕಲಾಗುತ್ತದೆ.

published on : 18th May 2021

ಈ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರಿಗೆ ಕೊರೋನಾ ಪರೀಕ್ಷಾ ವರದಿ ಅಗತ್ಯವಿಲ್ಲ!

ಮಹಾರಾಷ್ಟ್ರ, ಕೇರಳ, ಪಂಜಾಬ್, ಚಂಡೀಗಢದಿಂದ ವಿಮಾನದ ಮೂಲಕ ರಾಜ್ಯಕ್ಕೆ ಆಗಮಿಸುವ ರೋಗ ಲಕ್ಷಣವುಳ್ಳ ಪ್ರಯಾಣಿಕರು ಮಾತ್ರ ಆರ್'ಟಿ-ಪಿಸಿಆರ್ ನೆಗೆಟಿವ್ ನರದಿ ತರಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. 

published on : 8th May 2021

ಕರ್ನಾಟಕ ಲಾಕ್ ಡೌನ್; ಬಾರ್​ಗಳಲ್ಲಿ ಪಾರ್ಸೆಲ್​ಗೆ ಅವಕಾಶ, ಸಿನಿಮಾ, ಧಾರಾವಾಹಿ ಚಿತ್ರೀಕರಣಕ್ಕಿಲ್ಲ ಅವಕಾಶ; ಇಲ್ಲಿದೆ ಸಂಪೂರ್ಣ ಮಾರ್ಗಸೂಚಿ

ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಸಂಪೂರ್ಣ ಲಾಕ್ ಡೌನ್ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರು ಮಾರ್ಗ ಸೂಚಿ ಬಿಡುಗಡೆ ಮಾಡಿದ್ದಾರೆ.

published on : 7th May 2021

ಕೋವಿಡ್-19: ರಾಜ್ಯದಲ್ಲಿ ಇಂದು ದಾಖಲೆಯ 592 ಮಂದಿ ಸಾವು, 48,781 ಹೊಸ ಸೋಂಕು ಪ್ರಕರಣ ದಾಖಲು!

ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿನ ಮರಣ ಮೃದಂಗ ಮುಂದುವರೆದಿದ್ದು, ಬೆಂಗಳೂರಿನಲ್ಲಿ 346 ಸೇರಿದಂತೆ ರಾಜ್ಯಾದ್ಯಂತ ಮಹಾಮಾರಿಗೆ ಶುಕ್ರವಾರ ಒಂದೇ ದಿನ ದಾಖಲೆಯ 592 ಮಂದಿ ಬಲಿಯಾಗಿದ್ದಾರೆ. 

published on : 7th May 2021

12 ರಾಜ್ಯಗಳಲ್ಲಿ 1 ಲಕ್ಷಕ್ಕೂ ಅಧಿಕ ಸಕ್ರಿಯ ಪ್ರಕರಣಗಳು; ಕೆಲ ರಾಜ್ಯಗಳಲ್ಲಿ ಇಳಿ ಮುಖವಾಗುತ್ತಿದೆ ಸೋಂಕು: ಕೇಂದ್ರ ಆರೋಗ್ಯ ಇಲಾಖೆ

ದೆಹಲಿ, ಮಹಾರಾಷ್ಟ್ರ ಸೇರಿದಂತೆ 13 ರಾಜ್ಯಗಳಲ್ಲಿ 1 ಲಕ್ಷಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿದ್ದು, ಕೆಲ ರಾಜ್ಯಗಳಲ್ಲಿ ಸೋಂಕು ಇಳಿಮುಖವಾಗುತ್ತಿರುವ ಚಿಹ್ನೆ ತೋರುತ್ತಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

published on : 4th May 2021

ಕೋವಿಡ್-19 2ನೇ ಅಲೆ: ಆರೋಗ್ಯ ಕಾರ್ಯಕರ್ತರ ಕೆಲಸದಲ್ಲಿ ಅತೀವ ಒತ್ತಡ, ಗುಣಮಟ್ಟದ ಚಿಕಿತ್ಸೆ ಮೇಲೆ ಪರಿಣಾಮ!

ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ನ ಅಲೆ ಅಬ್ಬರಿಸುತ್ತಿದ್ದು, ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದೇ ಹೊತ್ತಿನಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಆರೋಗ್ಯ ಕಾರ್ಯಕರ್ತರು ಹೆಚ್ಚುವರಿ ಸಮಯದಲ್ಲಿ ಕೆಲಸ ಮಾಡುತ್ತಿದ್ದು, ಇದು ಅವರಲ್ಲಿ ಅತೀವ ಒತ್ತಡ  ಹೆಚ್ಚಾಗುವಂತೆ ಮಾಡುತ್ತಿದೆ.

published on : 3rd May 2021

14 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿದ ಮೊದಲ ರಾಷ್ಟ್ರ ಭಾರತ: ಕೇಂದ್ರ ಸರ್ಕಾರ

14 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಿದ ಮೊದಲ ರಾಷ್ಟ್ರ ಎಂಬ ಖ್ಯಾತಿಗೆ ಭಾರತ ಪಾತ್ರವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಲಸಿಕೆ ವಿತರಣೆ ಪ್ರಕ್ರಿಯೆ ಮತ್ತಷ್ಟು ವೇಗ ಪಡೆಯಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

published on : 25th April 2021

ದೇಶದ ದೈನಂದಿನ ಕೋವಿಡ್ ಸೋಂಕು ಪ್ರಕರಣಗಳ ಪೈಕಿ ಶೇ.80ರಷ್ಟು ಪ್ರಕರಣಗಳು 10 ರಾಜ್ಯಗಳಲ್ಲಿದೆ: ಕೇಂದ್ರ ಆರೋಗ್ಯ ಇಲಾಖೆ

ದೇಶದಲ್ಲಿ ಇಂದು ಪತ್ತೆಯಾಗಿರುವ 2 ಲಕ್ಷಕ್ಕೂ ಅಧಿಕ ಸೋಂಕು ಪ್ರಕರಣಗಳ ಪೈಕಿ ಶೇ.80ರಷ್ಟು ಸೋಂಕು ಪ್ರಕರಣಗಳು ಕೇವಲ 10 ರಾಜ್ಯಗಳಿಂದ ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

published on : 16th April 2021

ಕೋವಿಡ್-19: ಮಹಾರಾಷ್ಟ್ರದಲ್ಲಿ ಒಂದೇ ದಿನ 63,294 ಪ್ರಕರಣ ದಾಖಲು

ಮಹಾರಾಷ್ಟ್ರದಲ್ಲಿ ಭಾನುವಾರ ಒಂದೇ ದಿನ 63,294 ಹೊಸ ಕೊರೋನಾವೈರಸ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 34,07,245ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.

published on : 11th April 2021

ಕೋವಿಡ್-19: ದೇಶದ ದೈನಂದಿನ ಪ್ರಕರಣಗಳ ಪೈಕಿ 8 ರಾಜ್ಯಗಳ ಪಾಲು ಶೇ.81.42ರಷ್ಟು; ಆರೋಗ್ಯ ಇಲಾಖೆ ಆತಂಕ

ದೇಶದಲ್ಲಿ 6 ತಿಂಗಳ ಬಳಿಕ ಅತ್ಯಧಿಕ ದಾಖಲೆ ಪ್ರಮಾಣದಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ 8 ರಾಜ್ಯಗಳಲ್ಲಿ ಶೇಕಡ 81.42ರಷ್ಟು ಪ್ರಮಾಣ ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

published on : 3rd April 2021

ಕೋವಿಡ್-19 ಎರಡನೇ ಅಲೆ: ಯುವಕರೇ ಟಾರ್ಗೆಟ್; ಬೆಂಗಳೂರಿನಲ್ಲಿ 20 ರಿಂದ 39 ವಯೋಮಾನದ ಸೋಂಕಿತರ ಸಂಖ್ಯೆ ಹೆಚ್ಚಳ

ರಾಜಧಾನಿ ಬೆಂಗಳೂರಿನಲ್ಲಿ ಮಾರಕ ಕೊರೋನಾ ವೈರಸ್ ನ ಎರಡನೇ ಆರಂಭವಾಗಿರುವ ಶಂಕೆಗಳು ಮೂಡುತ್ತಿದ್ದು, ಬೆಂಗಳೂರಿನಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ.

published on : 30th March 2021

ರಕ್ತಹೀನತೆಯಿಂದ ಆಶಾ ಕಾರ್ಯಕರ್ತೆ ಸಾವು, ಚಿಕಿತ್ಸೆ ಕುರಿತು ಆರೋಗ್ಯ ಇಲಾಖೆ ನಿರ್ಲಕ್ಷಿಸಿತ್ತು: ಕುಟುಂಬಸ್ಥರು

ಮೈಸೂರಿನ ಹುಲ್ಲಹಳ್ಳಿಯ ನಲವತ್ತಮೂರು ವರ್ಷದ ಚೆಲುವಮ್ಮ ಸಾಂಕ್ರಾಮಿಕ ರೋಗ ಕೋವಿಡ್ ಮಾಹಿತಿ ಸಂಗ್ರಹಣೆಗಾಗಿ ಮನೆ ಮನೆ ಬಾಗಿಲು ಬಡಿಯುತ್ತಿದ್ದರು. ದುರದೃಷ್ಟವಶಾತ್, ಆಶಾ ಕಾರ್ಯಕರ್ತೆ ರಕ್ತಹೀನತೆ ಮತ್ತು ಗರ್ಭಾಶಯಕ್ಕೆ ಸಂಬಂಧಿಸಿದ ತೊಂದರೆಗಳಿಗೆ ಬಲಿಯಾದರು ಎಂದು ಕುಟುಂಬಸ್ಥರು ಹೇಳಿದ್ದಾರೆ.

published on : 29th March 2021

ಮಹಾರಾಷ್ಟ್ರ: ಒಂದೇ ತಿಂಗಳಲ್ಲಿ ಸೋಂಕು ಪ್ರಕರಣಗಳ ಪ್ರಮಾಣ ಮೂರು ಪಟ್ಟು ಹೆಚ್ಚಳ!

ಕೊರೋನಾ ಹಾಟ್ ಸ್ಪಾಟ್ ಮಹಾರಾಷ್ಟ್ರದಲ್ಲಿ ಕಳೆದ ಒಂದೇ ಒಂದು ತಿಂಗಳಲ್ಲಿಯೇ ಕೋವಿಡ್ ಸೋಂಕಿತರ ಪ್ರಮಾಣ ಮೂರು ಪಟ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

published on : 24th March 2021
1 2 3 4 >