ರಾಜ್ಯಉಡುಪಿಯಲ್ಲಿ ಕೊರೋನಾಗೆ ಮೊದಲ ಬಲಿ! ಮಹಾರಾಷ್ಟ್ರದಿಂದ ಬಂದು ಕ್ವಾರಂಟೈನ್ನಲ್ಲಿದ್ದ ವ್ಯಕ್ತಿ ನಿಧನ
ಕ್ವಾರಂಟೈನ್ನಲ್ಲಿದ್ದ 54 ವರ್ಷದ ವ್ಯಕ್ತಿಯೊಬ್ಬರುಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದ್ದು, ಅವರ ಗಂಟಲು ದ್ರವದ ಮಾದರಿಯನ್ನು ಕೋವಿಡ್ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳಿಸಿ ವರದಿ ಪರಿಶೀಲಿಸಲಾಗಿ ಮೃತ ವ್ಯಕ್ತಿಗೆ ಕೊರೋನಾ ಪಾಸಿಟಿವ್ ಆಗಿರುವುದು ಪತ್ತೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಇದು ಮೊದಲ ಕೊರೋನಾ ಸಾವಿನ ಪ್ರಕರಣವಾಗಿದೆ.