• Tag results for ಎಚ್ ಡಿ ಕುಮಾರಸ್ವಾಮಿ

ಕೊರೋನಾ ವೈರಸ್: ಜೀವಕ್ಕಿಂತ ಯಾವ ಧರ್ಮವೂ ದೊಡ್ಡದಲ್ಲ: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ

ಜೀವಕ್ಕಿಂತ ಯಾವ ಧರ್ಮವೂ ದೊಡ್ಡದಲ್ಲ.. ಧರ್ಮವನ್ನು ಪಕ್ಕಕ್ಕಿಟ್ಟು ಪರೀಕ್ಷೆಗೆ ಒಳಗಾಗಿ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಿವಿಮಾತು ಹೇಳಿದ್ದಾರೆ.

published on : 2nd April 2020

ರಾಜಕೀಯಕ್ಕಾಗಿ ಕೊರೊನಾ ಟೀಕೆ ಆಗಬಾರದು: ಮಾಜಿ ಸಿಎಂ ಕುಮಾರಸ್ವಾಮಿ

ಕೊರೋನಾ ವಿರುದ್ಧದ ಹೋರಾಟ ತಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಕೇವಲ  ರಾಜಕೀಯ ಟೀಕೆಗೆ ಮಾತ್ರ ಸರ್ವಪಕ್ಷ ಸಭೆ ಆಗಬಾರದು ಎಂದು ಮಾಜಿ ಮುಖ್ಯಮಂತ್ರಿ‌ ಜೆಡಿಎಸ್  ನಾಯಕ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

published on : 29th March 2020

ಕೊರೋನಾ ವೈರಸ್: ಅಧಿವೇಶನ ಮುಂದೂಡುವಂತೆ ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ

ರಾಜ್ಯದಲ್ಲಿ ಕೊರೋನಾ ಭೀತಿ ಹಿನ್ನೆಲೆಯಲ್ಲಿ ಜನತೆ ಸ್ವಯಂ ಪ್ರೇರಿತವಾಗಿ ನಿರ್ಬಂಧಗಳನ್ನು ಪಾಲಿಸುವಂತೆ ಜನತೆಗೆ ಹೇಳುತ್ತಿರುವ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ವಿಧಾನಮಂಡಲ ಅಧಿವೇಶನವನ್ನು ಮುಂದೂಡಬೇಕು...

published on : 21st March 2020

ಭ್ರಷ್ಟಾಚಾರದಿಂದ ಹಣ ಸಂಪಾದಿಸಿದ್ದೇನೆ ಅಂತ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ: ಕುಮಾರಸ್ವಾಮಿ ಸವಾಲು

ಪ್ರತಿ ನಾಗರಿಕನಿಗೂ ರಕ್ಷಣೆ ಕೊಡುವ ಸಂವಿಧಾನ ನಮಗೆ ದೊರೆತಿರುವ ಕಾರಣದಿಂದಲೇ 70 ವರ್ಷಗಳಲ್ಲಿ ಸಾಕಷ್ಟು ಸಾಧನೆ  ಮಾಡಿದ್ದೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕೇವಲ ಟೀಕೆಗಾಗಿ, ಟೀಕೆ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

published on : 16th March 2020

ತೆವಲಿನ ಬಗ್ಗೆ ಕುಮಾರಸ್ವಾಮಿ ಉಪದೇಶ ಮಾಡ್ತಾರಾ: ಕೃಷಿ ಸಚಿವ ಬಿ.ಸಿ.ಪಾಟೀಲ್ ಲೇವಡಿ

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಳಸುವಂತಹ ಹಗುರವಾದ ಪದಗಳನ್ನಾಗಲೀ ಅವರು ಹೇಳಿರುವಂತೆ ತೆವಲು ಭಾಷೆಯನ್ನಾಗಲೀ ತಾವು ಬಳಸುವುದಿಲ್ಲ ಎಂದು ಕೃಷಿ  ಸಚಿವ ಬಿ.ಸಿ‌. ಪಾಟೀಲ್ ಅವರು ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.

published on : 10th March 2020

ನಿಖಿಲ್ ದುಬಾರಿ ಮದುವೆ: ಹಿತೈಷಿಗಳಿಗೆ ಆತಿಥ್ಯ ಕೊಡುವುದೂ ದುಂದುವೆಚ್ಚವೇ?: ವಿಶ್ವನಾಥ್'ಗೆ ಕುಮಾರಸ್ವಾಮಿ ತಿರುಗೇಟು

ರಾಜ್ಯದಲ್ಲಿ ತಮ್ಮನ್ನು ಹಾಗೂ ತಮ್ಮ ಕುಟುಂಬದವರನ್ನು ಬೆಳೆಸಿದವರಿಗೆ ಹಾಗೂ ಅಭಿಮಾನಿಗಳಿಗೆ, ಹಿತೈಷಿಗಳಿಗೆ ಆತಿಥ್ಯ ಕೊಡುವುದು ದುಂದುವೆಚ್ಚವೇ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

published on : 7th March 2020

ಆರ್ಥಿಕತೆ ಕಾಣಿಸದಂತೆ ಮೋದಿ ಯಾವ ಗೋಡೆ ಕಟ್ಟುತ್ತಾರೆ?: ಕುಮಾರಸ್ವಾಮಿ ಲೇವಡಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೈಗೊಂಡಿರುವ ಭಾರತದ ಪ್ರವಾಸವನ್ನು  ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ  ಲೇವಡಿ ಮಾಡಿದ್ದಾರೆ. 

published on : 18th February 2020

ಬಿಎಸ್‌ವೈಗೆ ಸರ್ಕಾರ ರಚಿಸುವ, ಬೀಳಿಸುವ ಕಲೆ ಚೆನ್ನಾಗಿ ಗೊತ್ತಿದೆ: ಕುಮಾರಸ್ವಾಮಿ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸರ್ಕಾರ ಬೀಳಿಸುವ ಮತ್ತು ಸರ್ಕಾರ ರಚಿಸುವ ಕಲೆ ಚೆನ್ನಾಗಿ ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

published on : 6th February 2020

ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ ಹತ್ತಿಕ್ಕಲು ಯತ್ನ: ಭಾಸ್ಕರ್ ರಾವ್ ವಿರುದ್ಧ ಎಚ್‌ಡಿಕೆ ಕೆಂಡ

ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ ಹತ್ತಿಕ್ಕಲು ಬೆಂಗಳೂರು ಕಮಿಷನರ್ 144 ಸೆಕ್ಷನ್ ಜಾರಿಗೊಳಿಸಿದ ವಿಚಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ, ಪ್ರತಿಭಟನೆ ಮಾಡಬೇಡಿ ಎಂದರೆ ಭೂಮಿ ಇವರಪ್ಪನ ಮನೆ ಆಸ್ತಿನಾ, ಹೊಸ ವ್ಯವಸ್ಥೆ ತರಲು ಇವರಿಗೆ ಅವಕಾಶ ಕೊಟ್ಟಿದ್ದು ಯಾರು? ಎಂದು ಭಾಸ್ಕರ್ ರಾವ್ ವಿರುದ್ಧ ಹರಿಹಾಯ್ದಿದ್ದಾರೆ.

published on : 3rd February 2020

ಕೇಂದ್ರದ ಬಜೆಟ್ ದೇಶದ ಪ್ರಗತಿಗೆ ಮಾರಕ: ಹೆಚ್.ಡಿ.ಕುಮಾರಸ್ವಾಮಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ‌ಸರ್ಕಾರದ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದ್ದು, ದೇಶದ ಪ್ರಗತಿ ಬಗ್ಗೆ ಮುಂದಿನ ದಿನಗಳಲ್ಲಿ ಆಸೆ ಇಟ್ಟುಕೊಳ್ಳದ ಪರಿಸ್ಥಿತಿ ಸೃಷ್ಟಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

published on : 1st February 2020

ಕೆಎಸ್ಆರ್ ಟಿಸಿ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಸರ್ಕಾರಕ್ಕೆ ಕುಮಾರಸ್ವಾಮಿ ಪತ್ರ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ ಆರ್ ಟಿಸಿ)ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರನ್ನು ಪೂರ್ಣ ಪ್ರಮಾಣದ ಸರ್ಕಾರಿ ನೌಕರರೆಂದು ಪರಿಗಣಿಸಿ 2020-21 ಸಾಲಿನ ಆಯವ್ಯಯದಲ್ಲಿ ಸೂಕ್ತ ವೇತನ ನೀಡುವಂತೆ....

published on : 30th January 2020

ಒಳ ಒಪ್ಪಂದ ರಾಜಕಾರಣ ಬಹಳ ಕಾಲ ನಡೆಯಲ್ಲ: ಕುಮಾರಸ್ವಾಮಿ

ಒಳ ಒಪ್ಪಂದದ, ಕುತಂತ್ರದ ರಾಜಕಾರಣ ಬಹಳ ದಿನ ನಡೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಸೂಚ್ಯವಾಗಿ ಹೇಳಿದ್ದಾರೆ.

published on : 28th January 2020

ನಿಖಿಲ್ ಎಲ್ಲಿದ್ದೀಯಪ್ಪಾ'ಆಯ್ತು ಈಗ ಮಿಣಿ ಮಿಣಿ ಟ್ರೋಲ್ : ಹೆಚ್. ಡಿ. ಕುಮಾರಸ್ವಾಮಿ ಕಿಡಿ

ನಿಖಿಲ್ ಎಲ್ಲಿದ್ದೀಯಪ್ಪಾ" ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಟ್ರೋಲ್ ವ್ಯಂಗ್ಯಕ್ಕೂ ಕಾರಣವಾದಂತೆ ಮಂಗಳೂರಿನಲ್ಲಿ ಆದಿತ್ಯರಾವ್ ಇಟ್ಟಿದ್ದು ಮಿಣಿ ಮಿಣಿ ಪೌಡರ್ ಎಂಬ ಹೇಳಿಕೆಯೂ ಅಷ್ಟೇ ಟ್ರೋಲ್ ಮತ್ತು ವ್ಯಂಗ್ಯಕ್ಕೆ ಕಾರಣವಾಗಿದೆ.ಯಾರದ್ದೇ ವಾಟ್ಸಪ್ ನೋಡಲೀ ಸಾಮಾಜಿಕ ಜಾಲತಾಣಗಳಲ್ಲಾಗಲೀ ಇತ್ತೀಚೆಗೆ ಮಿಣಿ ಮಿಣಿಯದ್ದೇ ಸದ್ದು.

published on : 28th January 2020

'ಮಿಣಿ ಮಿಣಿ ಪೌಡರ್' ಟ್ರೋಲ್ ವಿಡಿಯೋ ವೈರಲ್: ಬಿಜೆಪಿ ಕಾರ್ಯಕರ್ತರ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಮಂಗಳೂರಿನ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮಿಣಿ ಮಿಣಿ ಪೌಡರ್ ಉಲ್ಲೇಖ ಮಾಡಿದ್ದ ವಿಡಿಯೋವನ್ನು ಟ್ರೋಲ್ ಮಾಡಿ ವೈರಲ್ ಮಾಡಿರುವುದಕ್ಕೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

published on : 28th January 2020

ಒಕ್ಕಲಿಗರು ಅಧಿಕಾರಕ್ಕೆ ಬರುವುದನ್ನು, ಹೋರಾಟ ಮಾಡುವುದನ್ನು ಬಿಜೆಪಿ ಸಹಿಸುವುದಿಲ್ಲ: ಕುಮಾರಸ್ವಾಮಿ ತಿರುಗೇಟು

ಒಕ್ಕಲಿಗ ಎಂಬ ಹೆಸರನ್ನು ಕುಮಾರಸ್ವಾಮಿ ಬಳಸಬಾರದು. ಸಮಾಜವನ್ನು ಒಡೆಯುವ, ಕೆಲಸವನ್ನು ಎಚ್‌ಡಿಕೆ ಮಾಡುತ್ತಿದ್ದಾರೆ ಎಂಬ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

published on : 26th January 2020
1 2 3 4 5 6 >