• Tag results for ಏಮ್ಸ್

ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೋವಿಡ್-19ನಿಂದ ಅಸುನೀಗಿದ ರೋಗಿಗಳ ಮೃತದೇಹ ಅದಲು ಬದಲು!

ಕೋವಿಡ್-19 ಸಂಕಷ್ಟದ ನಡುವೆಯೂ ಬೇಜವಾಬ್ದಾರಿ, ನಿರ್ಲಕ್ಷ್ಯತನ, ಭ್ರಷ್ಟಾಚಾರ ಯಾವ ರೀತಿ ತಾಂಡವವಾಡುತ್ತಿದೆ ಎಂಬುದಕ್ಕೆ ಇದು ಉತ್ತಮ ಉದಾಹರಣೆಯಿದು. ಕೋವಿಡ್-19 ರೋಗದಿಂದ ಮೃತಪಟ್ಟ ಎರಡು ಮೃತದೇಹಗಳನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸುವ ಸಂದರ್ಭದಲ್ಲಿ ಅದಲು ಬದಲು ಮಾಡಿದ ಘಟನೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

published on : 9th July 2020

ಆರು ವಾರಗಳಲ್ಲಿ 'ಕೋವ್ಯಾಕ್ಸಿನ್' ಲಸಿಕೆ ಅಸಾಧ್ಯ: ಏಮ್ಸ್ ನಿರ್ದೇಶಕ ಗುಲೇರಿಯಾ

ಕೊರೊನಾ ರೋಗಕ್ಕೆ ಚಿಕಿತ್ಸೆ ಕಲ್ಪಿಸಲು ಅಭಿವೃದ್ದಿಪಡಿಸಲಾಗುತ್ತಿರುವ ಲಸಿಕೆ ಆಗಸ್ಟ್ ೧೫ರೊಳಗೆ ದೇಶದಲ್ಲಿ ಲಭಿಸುವುದು ಅಸಾಧ್ಯ ಎಂದು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ- ಏಮ್ಸ್ ನಿರ್ದೇಶಕ ರಣ್ ದೀಪ್ ಸಿಂಗ್ ಗುಲೇರಿಯಾ ಹೇಳಿದ್ದಾರೆ.

published on : 6th July 2020

ದೆಹಲಿ ಏಮ್ಸ್ ನಲ್ಲಿ ಮತ್ತೆ ಇಬ್ಬರು ವೈದ್ಯರು ಸೇರಿದಂತೆ 11 ವೈದ್ಯಕೀಯ ಸಿಬ್ಬಂದಿಗೆ ಕೊರೋನಾ ಸೋಂಕು!

ರಾಷ್ಟ್ರ ರಾಜಧಾನಿ ದೆಹಲಿಯ ಪ್ರತಿಷ್ಠಿತ ಆಸ್ಪತ್ರೆ ಏಮ್ಸ್ ನಲ್ಲಿ ಇಬ್ಬರು ವೈದ್ಯರು ಸೇರಿದಂತೆ ಮತ್ತೆ 11 ವೈದ್ಯಕೀಯ ಸಿಬ್ಬಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು ಆ ಮೂಲಕ ಏಮ್ಸ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿಗೆ ತುತ್ತಾದ ವೈದ್ಯಕೀಯ ಸಿಬ್ಬಂದಿಗಳ ಸಂಖ್ಯೆ  206ಕ್ಕೆ ಏರಿಕೆಯಾಗಿದೆ.

published on : 30th May 2020

ಪ್ರಜ್ಞಾ ಸಿಂಗ್ ಠಾಕೂರ್ ಕ್ಯಾನ್ಸರ್ ಗೆ ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ನಾಪತ್ತೆ ಪೋಸ್ಟರ್‌ಗಳಿಗೆ ಬಿಜೆಪಿ ಪ್ರತಿಕ್ರಿಯೆ

ಭೋಪಾಲ್ ಲೋಕಸಭಾ ಸಂಸದೆ  ಪ್ರಜ್ಞಾ ಸಿಂಗ್ ಠಾಕೂರ್ "ಕಾಣೆಯಾಗಿದ್ದಾರೆ" ಎಂದು ಹಲವೆಡೆಗಳಲ್ಲಿ ಪೋಸ್ಟರ್ ಗಳು, ಬ್ಯಾನರ್ ಗಳು ರಾರಾಜಿಸಿದ್ದ ಬೆನ್ನಲ್ಲೇ ಪ್ರಜ್ಞಾ ಸಿಂಗ್ ಅನಾರೋಗ್ಯದ ಕಾರಣ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.  

published on : 30th May 2020

ದೆಹಲಿ: ಏಮ್ಸ್ ನ 195 ಆರೋಗ್ಯ ಸಿಬ್ಬಂದಿಗೆ ಕೊರೋನಾ ಸೋಂಕು

ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್‌ ಸಂಸ್ಥೆಯಲ್ಲಿ (ಏಮ್ಸ್‌) ಕಾರ್ಯನಿರ್ವಹಿಸುತ್ತಿದ್ದ 195 ಆರೋಗ್ಯ ಸಿಬ್ಬಂದಿಯಲ್ಲಿ ಕೋವಿಡ್‌-19 ಇರುವುದು ದೃಢಪಟ್ಟಿದೆ. 

published on : 28th May 2020

ದೆಹಲಿ: ಏಮ್ಸ್ ಹಿರಿಯ ವೈದ್ಯ ಮಹಾಮಾರಿ ಕೊರೋನಾಗೆ ಬಲಿ

ಕೊರೋನಾ ವೈರಸ್ ಸೋಂಕಿನಿಂದ ಬಳಲುತ್ತಿದ್ದ ದೆಹಲಿಯ ಆಲ್ ಇಂಡಿಯಾ ಇನ್'ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್'ನ ಹಿರಿಯ ವೈದ್ಯರೊಬ್ಬರು ಬಲಿಯಾಗಿದ್ದಾರೆಂದು ತಿಳಿದುಬಂದಿದೆ. 

published on : 24th May 2020

ದೆಹಲಿ ಏಮ್ಸ್ ಆಸ್ಪತ್ರೆಯ ಮೆಸ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಕೊರೋನಾದಿಂದ ಸಾವು

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್)ಯ ಮೆಸ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕೊರೋನಾ ವೈರಸ್ ನಿಂದ ಮೃತಪಟ್ಟಿದ್ದಾರೆ ಎಂದು ರೆಸಿಡೆಂಟ್ ವೈದ್ಯರ ಸಂಘ(ಆರ್ ಡಿಎ) ತಿಳಿಸಿದೆ.

published on : 22nd May 2020

ಮೃತದೇಹಗಳಲ್ಲಿ ಕೊರೋನಾ ವೈರಸ್ ಎಷ್ಟು ದಿನಗಳ ಕಾಲ ಬದುಕಬಲ್ಲದು?: ಅಧ್ಯಯನ ನಡೆಸಲು ಏಮ್ಸ್ ವೈದ್ಯರ ಚಿಂತನೆ

ಇಡೀ ಮನುಕುಲಕ್ಕೆ ಕೊರೋನಾ ವೈರಸ್ ಮಾರಕವಾಗಿ ಪರಿಣಮಿಸಿದ್ದು, ಮಹಾಮಾರಿ ವೈರಸ್'ಗೆ ಈವರೆಗೂ ಯಾವುದೇ ಔಷಧಿಗಳೂ ಲಭ್ಯವಾಗಿಲ್ಲ. ಈ ನಡುವಲ್ಲೇ ಹೆಮ್ಮಾರಿ ವೈರಸ್ ಕೊರೋನಾ ವ್ಯಕ್ತಿಯ ಮೃತದೇಹದಲ್ಲಿ ಎಷ್ಟು ದಿನಗಳ ಕಾಲ ಬದುಕಬಲ್ಲದು ಎಂಬುದರ ಕುರಿತು ಅಧ್ಯಯನ ನಡೆಸಲು ಏಮ್ಸ್ ವೈದ್ಯರು ಚಿಂತನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. 

published on : 22nd May 2020

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಯಿಂದ ಡಿಸ್ಚಾರ್ಜ್

 ಮಾಜಿ ಪ್ರಧಾನಿ ಡಾ. ಡಾ.ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ನಿಂದ ಡಿಸ್ಚಾರ್ಜ್ ಆಗಿದ್ದಾರೆ. 

published on : 12th May 2020

ತನ್ನ ಸುರಕ್ಷತೆಯನ್ನು ಲೆಕ್ಕಿಸದೆ ಪಿಪಿಇ ಕಿಟ್ ತೆಗೆದು ಕೊರೋನಾ ರೋಗಿಯ ಪ್ರಾಣ ಉಳಿಸಿದ ಏಮ್ಸ್ ಆಸ್ಪತ್ರೆ ವೈದ್ಯ, 14 ದಿನಗಳ ಕ್ವಾರಂಟೈನ್ ಗೆ!

ಮಾರಕ ಕೊರೋನಾ ರೋಗಿಯ ಪ್ರಾಣ ಉಳಿಸಲು ತನ್ನ ರಕ್ಷಣೆಗೆ ಹಾಕಿಕೊಂಡಿದ್ದ ಪಿಪಿಇ ಕಿಟ್ ತೆಗೆದು ರೋಗಿಯ ಪ್ರಾಣ ಉಳಿಸಿದ ಏಮ್ಸ್ ಆಸ್ಪತ್ರೆಯ ವೈದ್ಯನನ್ನು 14 ದಿನಗಳ ಕ್ವಾರಂಟೈನ್ ಮಾಡಲಾಗಿದೆ.

published on : 11th May 2020

ಮಾಜಿ ಪ್ರಧಾನಿ ಡಾ. ಸಿಂಗ್ ಏಮ್ಸ್ ಆಸ್ಪತ್ರೆಗೆ ದಾಖಲು 

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 

published on : 10th May 2020

ದೇಶದಲ್ಲಿ ಕೊರೋನಾ ಜೂನ್-ಜುಲೈನಲ್ಲಿ ಪೀಕ್ ಗೆ ಹೋಗುವ ಸಾಧ್ಯತೆ: ಏಮ್ಸ್ ನಿರ್ದೇಶಕ

ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಬರುವ ಜೂನ್-ಜುಲೈನಲ್ಲಿ ಗರಿಷ್ಠ ಮಟ್ಟಕ್ಕೆ ಹೋಗಲಿದೆ ಎಂದು ಏಮ್ಸ್ ನಿರ್ದೇಶಕ ಡಾ. ರಂದೀಪ್ ಗುಲೇರಿಯಾ ಅವರು ಗುರುವಾರ ಹೇಳಿದ್ದಾರೆ.

published on : 7th May 2020

ದೆಹಲಿ ಏಮ್ಸ್ ಆಸ್ಪತ್ರೆಯ ನರ್ಸ್ ಗೆ ಕೊರೋನಾ ಸೋಂಕು; ವೈದ್ಯರು ಸೇರಿ 40 ಸಿಬ್ಬಂದಿ ಕ್ವಾರಂಟೈನ್ ಗೆ

ಕರ್ತವ್ಯದಲ್ಲಿದ್ದ ನರ್ಸ್ ಒಬ್ಬರಲ್ಲಿ ಕೊರೋನಾ ವೈರಸ್ ಸೋಂಕು ಕಂಡುಬಂದ ಹಿನ್ನಲೆಯಲ್ಲಿ ದೆಹಲಿ ಏಮ್ಸ್ ಆಸ್ಪತ್ರೆಯ ವೈದ್ಯರು, ನರ್ಸಿಂಗ್ ವಿದ್ಯಾರ್ಥಿಗಳು, ಇತರೆ ನರ್ಸ್ ಗಳು ಮತ್ತು ವೈದ್ಯಕೀಯ ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿದೆ.

published on : 24th April 2020

ಕೋವಿಡ್-19: ಕ್ವಾರಂಟೈನ್ ನಲ್ಲಿರುವವರ ಮೇಲೆ ನಿಗಾ ವಹಿಸಲು ಉಪಕರಣ, ಆಪ್ ತಯಾರಿಸಿದ ಬಿಇಎಲ್!

ಬೆಂಗಳೂರು ಮೂಲದ ಸರ್ಕಾರಿ ಸ್ವಾಮ್ಯದ ಸಂಸ್ಥೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ಕೋವಿಡ್-19 ಗೆ ಸಂಬಂಧಿಸಿದಂತೆ ವಿನೂತನ ಉಪಕರಣ ತಯಾರಿಸಿದ್ದು, ದೇಶದ ಗಮನ ಸೆಳೆದಿದೆ. 

published on : 18th April 2020

ದೆಹಲಿ: ಕೊರೋನಾ ಶಂಕಿತ ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೋನಾ ಶಂಕಿತ ವ್ಯಕ್ತಿಯೊಬ್ಬ ಆಸ್ಪತ್ರೆಯ ಮಹಡಿಯಿಂದ ಬಿದ್ದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. 

published on : 5th April 2020
1 2 3 4 >