• Tag results for ಕುಮಾರಸ್ವಾಮಿ

ಬೆಂಗಳೂರು ಹಿಂಸಾಚಾರ: ಯಾವುದೇ ಧರ್ಮದ ಸಮುದಾಯ ಕಾನೂನಿಗೆ ಅತೀತರಲ್ಲ - ಎಚ್‌ಡಿ ಕುಮಾರಸ್ವಾಮಿ

ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಅಕ್ಷಮ್ಯ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು. ಯಾವುದೇ ಧರ್ಮದ ಸಮುದಾಯ ಕಾನೂನಿಗೆ ಅತೀತರಲ್ಲ. ನೆಲದ ಕಾನೂನನ್ನು ಗೌರವಿಸದ ಯಾರೊಬ್ಬರೂ ಶಿಕ್ಷೆಗೆ ಅರ್ಹರು.

published on : 12th August 2020

ಸೋದರಿ ಕನಿಮೋಳಿಗೆ ಆದ ಅಪಮಾನದ ವಿರುದ್ಧ ನನ್ನದೂ ಧ್ವನಿ ಇದೆ: ಎಚ್ ಡಿ ಕುಮಾರಸ್ವಾಮಿ

ವಿಮಾನ ನಿಲ್ದಾಣದಲ್ಲಿ ಡಿಎಂಕೆ ನಾಯಕಿ ಕನ್ನಿಮೋಳಿ ಅವರಿಗೆ ಆದ ಅಪಮಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದು, ಸೋದರಿ ಕನಿಮೋಳಿಗೆ ಆದ ಅಪಮಾನದ ವಿರುದ್ಧ ನನ್ನದೂ ಧ್ವನಿ ಇದೆ ಎಂದು ಹೇಳಿದ್ದಾರೆ.

published on : 10th August 2020

ಖಾಸಗಿ ಶಾಲಾ ಶಿಕ್ಷಕರು, ಅತಿಥಿ ಉಪನ್ಯಾಸಕರ ನೆರವಿಗೆ ಧಾವಿಸುವಂತೆ ಸರ್ಕಾರಕ್ಕೆ ಕುಮಾರಸ್ವಾಮಿ ಒತ್ತಾಯ

ವಿದ್ಯಾರ್ಥಿಗಳು ಶುಲ್ಕ ಕಟ್ಟುತ್ತಿಲ್ಲ ಎಂಬ ಕಾರಣ ಹೇಳಿ ಶಿಕ್ಷಕರನ್ನು ಕೆಲಸದಿಂದ ತೆಗೆಯಲು ಆಡಳಿತ ಮಂಡಳಿಗಳು ಮುಂದಾಗುತ್ತಿರುವುದನ್ನು ತಪ್ಪಿಸಲು ಸರ್ಕಾರ ತಡಮಾಡದೆ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

published on : 8th August 2020

ಜಿಲ್ಲಾವಾರು ವಿಶೇಷ ಕಾರ್ಯಪಡೆ ರಚಿಸಿ ನೆರೆ ಪರಿಸ್ಥಿತಿ ನಿಭಾಯಿಸಿ: ಎಚ್.ಡಿ. ಕುಮಾರಸ್ವಾಮಿ

ಮುಂಗಾರು ಮಳೆಗೆ ನಲುಗಿರುವ ರಾಜ್ಯದ ಜನತೆ ಮತ್ತು ಜಾನುವಾರುಗಳ ರಕ್ಷಣೆಗೆ ಸಮರೋಪಾದಿಯಲ್ಲಿ ಸ್ಪಂದಿಸುವ ಪರಿಹಾರ ಕಾಮಗಾರಿಗಳನ್ನು ಅನುಷ್ಠಾನ ಮಾಡುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಆಗ್ರಹಿಸಿದ್ದಾರೆ.

published on : 7th August 2020

ರಾಮಮಂದಿರ ನಿರ್ಮಾಣ ರಾಷ್ಟ್ರೀಯ ಏಕತೆಯ ಪ್ರತಿಬಿಂಬವಾಗಲಿ: ಕುಮಾರಸ್ವಾಮಿ

ರಾಮಮಂದಿರ ನಿರ್ಮಾಣ ಸಾಂಸ್ಕೃತಿಕ ಪರಂಪರೆಯ ಬೆಸುಗೆ ಹಾಗೂ ರಾಷ್ಟ್ರೀಯ ಏಕತೆಯ ಪ್ರತಿಬಿಂಬವಾಗಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಶಯ ವ್ಯಕ್ತಪಡಿಸಿದ್ದಾರೆ.

published on : 5th August 2020

ಈ ಹಿಂದೆ ಅಧಿಕಾರಿಗಳ ಸಾವಿನ ತನಿಖೆಗೆ ಜಾಗಟೆ ಬಾರಿಸಿದ್ದ ಬಿಜೆಪಿ ಈಗ ಏಕೆ ಮೌನವಾಗಿದೆ: ಎಚ್ ಡಿಕೆ

ಚನ್ನರಾಯಪಟ್ಟಣ ಸ ಇನ್‌ಸ್ಪೆಕ್ಟರ್‌ ಕಿರಣ್‌ಕುಮಾರ್ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕೆಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

published on : 1st August 2020

ಬಿಜೆಪಿ ಸರ್ಕಾರಕ್ಕೆ ಎಚ್.ಡಿ ಕುಮಾರಸ್ವಾಮಿ ಬೆಂಬಲ: ಸಿಪಿ ಯೋಗೀಶ್ವರ್ ಸ್ಫೋಟಕ ಹೇಳಿಕೆ

ಬಿಜೆಪಿ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಂಬಲ ನೀಡುತ್ತಿದ್ದಾರೆ. ರಾಮನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರು ಕುಮಾರಸ್ವಾಮಿ ಅವರ ಬುಡಕ್ಕೆ ಬೆಂಕಿ ಹಚ್ಚಿದ್ದಾರೆ ಹೀಗಾಗಿ ಅವರು ಕಾಂಗ್ರೆಸ್ ನಾಯಕರ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.

published on : 30th July 2020

ನನ್ನದೇನಿದ್ದರೂ ಕಾಂಗ್ರೆಸ್ ವಿರುದ್ಧದ ಹೋರಾಟ ಮಾತ್ರ: ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ

ಜೆಡಿಎಸ್ ಪಕ್ಷವನ್ನು ಮುಗಿಸಬೇಕೆಂಬ ಉದ್ದೇಶ ಕಾಂಗ್ರೆಸ್‌ ನಾಯಕರಿಗಿದೆ. ನನ್ನ ಹೋರಾಟ ಏನಿದ್ದರೂ ಕಾಂಗ್ರೆಸ್ ವಿರುದ್ಧವೇ ಹೊರತು ಬಿಜೆಪಿಯ ವಿರುದ್ಧವಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

published on : 30th July 2020

2018ರಲ್ಲಿ ಖರ್ಗೆ ಮುಖ್ಯಮಂತ್ರಿಯಾಗುವುದನ್ನು ಕಾಂಗ್ರೆಸ್ ಒಳಗಿನ ನಾಯಕರೇ ತಡೆದಿದ್ದರು: ಹೆಚ್.ಡಿ.ಕುಮಾರಸ್ವಾಮಿ

2018ರಲ್ಲಿ ಖರ್ಗೆ ಮುಖ್ಯಮಂತ್ರಿಯಾಗುವುದನ್ನು ಕಾಂಗ್ರೆಸ್'ನ ಒಳಗಿನ ನಾಯಕರೇ ತಡೆದಿದ್ದರು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ. 

published on : 30th July 2020

ಮೈತ್ರಿ ಹಳಸಿದರೂ ಮುಗಿಯದ ಕಾಂಗ್ರೆಸ್-ಜೆಡಿಎಸ್ ಜಂಗಿಕುಸ್ತಿ

ಮಳೆ ನಿಂತರೂ ಮಳೆ ಹನಿ ನಿಲ್ಲುತ್ತಿಲ್ಲ ಎಂಬ ಮಾತಿನಂತೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಹಳಸಿ ಸರ್ಕಾರ ಪತನಗೊಂಡು ಒಂದು ವರ್ಷವಾದರೂ ಎರಡೂ ಪಕ್ಷಗಳ ನಡುವಿನ ಕಿತ್ತಾಟ ಮಾತ್ರ ಇನ್ನೂ ನಿಲ್ಲುವಂತೆ ಕಾಣುತ್ತಿಲ್ಲ. 

published on : 29th July 2020

ಎಸ್.ಎಂ. ಕೃಷ್ಣ ಅವರ ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಅವಧಿಯಲ್ಲಿ ನಮ್ಮ ಶಾಸಕರನ್ನು ಖರೀದಿ ಮಾಡಿರಲಿಲ್ಲವೇ?

ಶಾಸಕರನ್ನು ಖರೀದಿಸಿ, ಸರ್ಕಾರಗಳನ್ನು ಉರುಳಿಸುತ್ತಿರುವ ಬಿಜೆಪಿ ವಿರುದ್ಧ ಕಾಂಗ್ರೆಸ್ ದೇಶಾದ್ಯಂತ "ಪ್ರಜಾಪ್ರಭುತ್ವ ಉಳಿಸಿ" ಎಂದು ಹೋರಾಟ ನಡೆಸುತ್ತಿದೆ. ಇದೇ ಕಾಂಗ್ರೆಸ್ ರಾಜಸ್ಥಾನದಲ್ಲಿ ಏನು ಮಾಡಿದೆ? ಸರ್ಕಾರ ರಚಿಸಲು ಬೆಂಬಲ ನೀಡಿದ ಬಿಎಸ್‌ಪಿಯ ಎಲ್ಲ ಶಾಸಕರನ್ನೂ ಕಾಂಗ್ರೆಸ್ ಸೆಳೆದಿಲ್ಲವೇ? ಇದು ಖರೀದಿಯಲ್ಲವೇ?

published on : 28th July 2020

'ವರ್ಷ ಪೂರೈಸುತ್ತಿರೋ ರಾಜ್ಯ ಬಿಜೆಪಿ ಸರ್ಕಾರಕ್ಕೆ ಕಣ್ಣು, ಕಿವಿಗಳೇ ಇಲ್ಲ': ಅಂಗೈ ಹುಣ್ಣಿಗೆ ಕನ್ನಡಿ ಬೇಕೆ?

ಸವಾಲುಗಳ ವರ್ಷ, ಪರಿಹಾರದ ಸ್ಪರ್ಶ ಎಂಬ ಬೀಜ ಮಂತ್ರ ಪಠಿಸುತ್ತಿರುವ ಬಿಜೆಪಿ ಸರ್ಕಾರದ ಬಡವರ ವಿರೋಧಿ ನೀತಿಗೆ ಪಿಂಚಣಿ ಹಣಕ್ಕಾಗಿ ಕಳೆದ 5 ತಿಂಗಳಿಂದ ಫಲಾನುಭವಿಗಳೂ ಅಲೆದಾಡುತ್ತಿರುವುದೇ ಸಾಕ್ಷಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ನಾಯಕ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. 

published on : 27th July 2020

ಕೋವಿಡ್‌ ಹಗರಣ: ಕಾಂಗ್ರೆಸ್‌–ಬಿಜೆಪಿಗೆ ಮಾಜಿ ಸಿಎಂ ಕುಮಾರಸ್ವಾಮಿ ಪಂಚ ಪ್ರಶ್ನೆಗಳು

ಕೊರೋನಾ ವೈರಸ್‌ನಿಂದ ಜನ ಮತ್ತು ಅವರ ಜೀವನ ಸಂಕಷ್ಟದಲ್ಲಿದೆ. ಇಂಥ ಸಂದಿಗ್ಧ ಸನ್ನಿವೇಶದಲ್ಲೂ ಕೋವಿಡ್‌ ಭ್ರಷ್ಟಾಚಾರ ದಂಥ ಗಂಭೀರ ಆರೋಪ ಕೇಳಿ ಬಂದಿರುವುದು ರಾಜ್ಯದ ದುರ್ದೈವ.

published on : 26th July 2020

'ಬದುಕನ್ನೇ ಕಸಿಯುತ್ತಿರುವ ಸಮಯದಲ್ಲಿ ಅಕ್ರಮ ನಡೆದಿದ್ದರೆ, ಅದು ಮನುಷ್ಯ ಹೀನ ಕೃತ್ಯವೇ ಸರಿ'

ಕೊರೋನಾದಿಂದಾಗಿ ಜನ, ಜೀವನಕ್ಕೆ ಬೆದರಿಕೆ ಎದುರಾಗಿರುವ ಹೊತ್ತಿನಲ್ಲಿ ಹಳೇ ಪಕ್ಷ ಮತ್ತು ಆಡಳಿತಾರೂಢ ಪಕ್ಷ ಕೆಸರೆರಚಾಟದಲ್ಲಿ ತೊಡಗಿರುವುದು ಬೇಸರ ತರಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಹೆಸರು ಹೇಳದೇ ಕಾಂಗ್ರೆಸ್‌ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

published on : 24th July 2020

ಮೇಲ್ಮನೆಯಲ್ಲಿ ಜೆಡಿಎಸ್ ಮತ್ತು ಪಕ್ಷೇತರ ಸದಸ್ಯರೇ ನಿರ್ಣಾಯಕ: ಸಭಾಪತಿ ಸ್ಥಾನದ ಭವಿಷ್ಯ ಜೆಡಿಎಸ್ ಕೈಯಲ್ಲಿ!

ಮೇಲ್ಮನೆಯಲ್ಲಿ ಐದು ನಾಮನಿರ್ದೇಶನ ಸ್ಥಾನಗಳ ಮೂಲಕ ಬಿಜೆಪಿ ಸಂಖ್ಯಾಬಲ ಹೆಚ್ಚಿಸಿಕೊಂಡಿದೆ. ಐವರ ನಾಮಕರಣದ ನಂತರವೂ ಸಹ ವಿಧಾನ ಪರಿಷತ್ತಿನಲ್ಲಿ ಸದ್ಯಕ್ಕೆ ಬಿಜೆಪಿಗೆ ಬಹುಮತವಿಲ್ಲದಂತಾಗಿದೆ. 

published on : 23rd July 2020
1 2 3 4 5 6 >