• Tag results for ಕೃಷಿ ಮಸೂದೆ

ನೂತನ ಕೃಷಿ ಕಾಯ್ದೆಗೆ ವಿರೋಧ: ರಾಜಭವನದ ಮುಂದೆ ಜೂನ್ 26ಕ್ಕೆ ರೈತರ ಪ್ರತಿಭಟನೆ

ಕೇಂದ್ರ ಸರ್ಕಾರ ಜಾರಿಗೆ ರಂದಿರುವ ನೂತನ ಕೃಷಿ ಮಸೂದೆಗಳಿಗೆ ವಿರೋಧ ವ್ಯಕ್ತಪಡಿಸಿ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ರಾಜಭವನದ ಎದುರು ಜೂ.26ರಂದು ರೈತರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. 

published on : 25th June 2021

ರೈತರ ಹೋರಾಟಕ್ಕಿಂದು 4 ತಿಂಗಳು: ಕೃಷಿ ಮಸೂದೆ ರದ್ದತಿಗೆ ಆಗ್ರಹಿಸಿ ಭಾರತ್ ಬಂದ್, ಘಾಜಿಪುರ ಗಡಿಯಲ್ಲಿ ಸಾರಿಗೆ ಸಂಚಾರ ಸ್ಥಗಿತ

ಕೇಂದ್ರ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಜಧಾನಿ ದೆಹಲಿಯಲ್ಲಿ ವಿವಿಧ ರಾಜ್ಯಗಳ ರೈತರು ನಡೆಸುತ್ತಿರುವ ಪ್ರತಿಭಟನೆ ಶುಕ್ರವಾರ 4 ತಿಂಗಳನ್ನು ಪೂರೈಸಲಿದೆ. ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಭಾರತ್ ಬಂದ್'ಗೆ ಕರೆ ಕೊಟ್ಟಿರುವ ಬೆನ್ನಲ್ಲೇ ದೇಶದ ಹಲವೆಡೆ ಪ್ರತಿಭಟನೆಗಳು ಆರಂಭಗೊಂಡಿವೆ. 

published on : 26th March 2021

ಪ್ರಕರಣ ದಾಖಲಿಸಿರುವುದಕ್ಕೆ ಹೆದರುವುದಿಲ್ಲ, ಮಸೂದೆ ಹಿಂಪಡೆಯದ ಹೊರತು ಪ್ರತಿಭಟನೆ ಕೈಬಿಡುವುದಿಲ್ಲ: ರಾಕೇಶ್ ಟಿಕಾಯತ್

ನನ್ನ ವಿರುದ್ಧ ಪ್ರಕರಣ ದಾಖಲಿಸುವುದಕ್ಕೆ ಹೆದರುವುದಿಲ್ಲ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಮಸೂದೆಗಳನ್ನು ರದ್ದುಪಡಿಸಿದರೆ ಮಾತ್ರ ಪ್ರತಿಭಟನೆ ಕೈಬಿಡುತ್ತೇವೆಂದು ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ರಾಕೇಶ್ ಸಿಂಗ್ ಟಿಕಾಯತ್ ಹೇಳಿದ್ದಾರೆ.

published on : 25th March 2021

ರಾಕೇಶ್ ಟಿಕೈಟ್ ಕರ್ನಾಟಕ ಭೇಟಿ: ಕೃಷಿ ಕಾನೂನುಗಳ ವಿರುದ್ಧ ಹೋರಾಟ ನಡೆಸಲು ರೈತ ಬಣಗಳು ಒಂದಾಗಲು ಕರೆ

ಕೃಷಿ ಕಾನೂನುಗಳ ವಿರುದ್ಧ ಹೋರಾಟ ನಡೆಸಲು ಸಂಯುಕ್ತ ಕಿಸಾನ್ ಮೋರ್ಚಾ ನಾಯಕ್ ರಾಕೇಶ್ ಟಿಕೈಟ್ ಮಾರ್ಚ್ ತಿಂಗಳಿನಲ್ಲಿ ಕರ್ನಾಟಕ ಪ್ರವಾಸಕ್ಕೆ ಆಗಮಿಸಲಿದ್ದಾರೆ

published on : 19th February 2021

ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಕೃಷಿ ಮಸೂದೆಯನ್ನು ವಿರೋಧಿಸುತ್ತಿದೆ: ಅರುಣ್ ಸಿಂಗ್

ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಕೃಷಿ ಮಸೂದೆಯನ್ನು ವಿರೋಧಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಗುರುವಾರ ತೀವ್ರವಾಗಿ ಕಿಡಿಕಾರಿದ್ದಾರೆ.

published on : 19th February 2021

ನೂತನ ಕೃಷಿ ಮಸೂದೆ ಕುರಿತು ಕಾಂಗ್ರೆಸ್ ಸುಳ್ಳು ಹರಡುತ್ತಿದೆ: ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್

ನೂತನ ಕೃಷಿ ಮಸೂದೆ ಕುರಿತು ಕಾಂಗ್ರೆಸ್ ಸುಳ್ಳು ಹರಡುತ್ತಿದ್ದು, ಜನರನ್ನು ತಪ್ಪು ಹಾದಿಗೆಳೆಯುತ್ತಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಕಿಡಿಕಾರಿದ್ದಾರೆ.

published on : 10th February 2021

ಕೃಷಿ ಕಾಯ್ದೆ ವಿರುದ್ಧ ರೈತರ ಪ್ರತಿಭಟನೆ: ಗಾಜಿಪುರ್ ಗಡಿಯತ್ತ ಹೊರಟಿದ್ದ ವಿರೋಧ ಪಕ್ಷಗಳ 15 ಸಂಸದರಿಗೆ ದೆಹಲಿ ಪೊಲೀಸರ ತಡೆ

ದೆಹಲಿಯ ಗಾಜಿಪುರ್ ಗಡಿಭಾಗ ತಲುಪಲು ಗುರುವಾರ ಬೆಳಗ್ಗೆ ಹೊರಟಿದ್ದ ಡಿಎಂಕೆ, ಶಿರೋಮಣಿ ಅಕಾಲಿ ದಳ, ಎನ್ ಸಿಪಿ, ತೃಣಮೂಲ ಕಾಂಗ್ರೆಸ್ ಸೇರಿದಂತೆ 10 ವಿರೋಧ ಪಕ್ಷಗಳ 15 ಸಂಸದರನ್ನು ಪೊಲೀಸರು ತಡೆದ ಪ್ರಸಂಗ ನಡೆದಿದೆ.

published on : 4th February 2021

ಸಿಲಿಕಾನ್ ಸಿಟಿಯಲ್ಲಿಂದು ಹಸಿರು ಕ್ರಾಂತಿ: ಕೃಷಿ ಕಾಯ್ದೆ ರದ್ದು ಆಗ್ರಹಿಸಿ ರೈತರಿಂದ ಟ್ರ್ಯಾಕ್ಟರ್ ಪರೇಡ್

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತ ಸಂಘಟನೆಗಳು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಮಂಗಳವಾರ ರಾಜಧಾನಿ ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಪರೇಡ್ ನಡೆಸಲು ನಿರ್ಧರಿಸಿದ್ದು...

published on : 26th January 2021

ಸರ್ಕಾರದ ಪ್ರಸ್ತಾಪ ತಿರಸ್ಕರಿದ ರೈತರು, ಇಂದು 11ನೇ ಸುತ್ತಿನ ಮಾತುಕತೆ

ಕೃಷಿ ಮಸೂದೆ ವಾಪಸ್ ಪಡೆಯುವಂತೆ ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದ್ದು, ಇಂದು 11ನೇ ಸುತ್ತಿನ ಮಾತುಕತೆ ನಡೆಯಲಿದ್ದರೂ ಬಿಕ್ಕಟು ಪರಿಹಾರವಾಗುವ ಯಾವ ಲಕ್ಷಣಗಳು ಕಾಣಿಸುತ್ತಿಲ್ಲ.

published on : 22nd January 2021

ಕೃಷಿ ಕಾಯ್ದೆ ವಿರುದ್ಧ ರೈತರ ಹೋರಾಟಕ್ಕೆ ಬೆಂಬಲ: ಇಂದು ಕಾಂಗ್ರೆಸ್ಸಿನಿಂದ ರಾಜಭಾವನ ಚಲೋ ರ್ಯಾಲಿ

ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ರೈತ ಸಮೂಹ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷ ಬುಧವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ, ಸಮಾವೇಶ ಹಾಗೂ ರಾಜಭವನ ಚಲೋ ಹಮ್ಮಿಕೊಂಡಿದೆ. 

published on : 20th January 2021

ಮೂರು ವಿವಾದಿತ ಕೃಷಿ ಕಾಯ್ದೆಗಳಿಗೆ ಸುಪ್ರೀಂ ಕೋರ್ಟ್ ತಡೆ, ಮಾತುಕತೆ ನಡೆಸಲು ಸಮಿತಿ ರಚನೆ!

ಕೇಂದ್ರ ಸರ್ಕಾರ ಅಂಗೀಕರಿಸಿರುವ 3 ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಕಳೆದ 48 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ವಿವಾದಿತ 3 ಕಾಯ್ದೆಗಳಿಗೆ ತಡೆ ನೀಡಿರುವ ಸುಪ್ರೀಂ ಕೋರ್ಟ್, ಸಮಸ್ಯೆ ಬಗೆಹರಿಕೆಗೆ ಸಮಿತಿಯೊಂದನ್ನು ಮಂಗಳವಾರ ರಚನೆ ಮಾಡಿದೆ. 

published on : 12th January 2021

ಕೃಷಿ ಕಾಯ್ದೆಯನ್ನು ನೀವೇ ತಡೆಹಿಡಿಯಿರಿ, ಅಥವಾ ನಾವೇ ಮಾಡುತ್ತೇವೆ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಕೃಷಿ ಕಾಯ್ದೆಗಳನ್ನು ನೀವಾಗಿಯೇ ತಡೆಹಿಡಿಯುತ್ತೀರೋ... ಅಥವಾ ನಾವದನ್ನು ಮಾಡಬೇಕೇ? ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೋಮವಾರ ಪ್ರಶ್ನಿಸಿದೆ. 

published on : 11th January 2021

ರಾಹುಲ್ ಗಾಂಧಿ ಹೊಲ ಉತ್ತಿದ್ದಾರಾ, ಬಿತ್ತಿದ್ದಾರಾ? ಅವರ ಅಜ್ಜಿ-ತಾತಾ ರೈತರಾ?: ಆರ್.ಅಶೋಕ್

ಪ್ರಧಾನಿ ನರೇಂದ್ರಮೋದಿ ಅವರಿಗೆ ರೈತರ ಕಷ್ಟ ಗೊತ್ತಿಲ್ಲ ಎಂದು ಹೇಳುವ ರಾಹುಲ್‌ ಗಾಂಧಿ ಹೊಲ ಉತ್ತಿದ್ದಾರಾ, ಬಿತ್ತಿದ್ದಾರಾ? ಅವರ ತಂದೆ, ತಾಯಿ, ಅಜ್ಜ– ಅಜ್ಜಿ ಯಾರೂ ರೈತರಲ್ಲ ಎಂದು ಕಂದಾಯ ಸಚಿವ ಆರ್‌. ಅಶೋಕ ವಾಗ್ದಾಳಿ ನಡೆಸಿದ್ದಾರೆ.

published on : 19th December 2020

'ರೈತರ ಜೀವನ ಉದ್ಧಾರವಾಗಬೇಕೆಂಬುದು ನನ್ನ ಆಶಯ, ನಿಮ್ಮನ್ನು ಕೈಮುಗಿದು ಕೇಳಿಕೊಳ್ಳುತ್ತೇನೆ, ರಾಜಕೀಯ ಮಾಡಬೇಡಿ': ಪ್ರಧಾನಿ ಮೋದಿ 

ನೂತನ ಕೃಷಿ ಮಸೂದೆಯನ್ನು ರಾತ್ರಿ-ಹಗಲಾಗುವುದರ ಒಳಗೆ ತರಾತುರಿಯಲ್ಲಿ ಜಾರಿಗೆ ತಂದಿಲ್ಲ, ಈ ಸುಧಾರಣೆಯ ಮಸೂದೆ ಬಗ್ಗೆ ಕಳೆದ 20-30 ವರ್ಷಗಳಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಸ್ತ್ರೃತವಾಗಿ ಚರ್ಚೆ ನಡೆಸುತ್ತಾ ಬಂದಿವೆ.

published on : 18th December 2020

ರೈತರ ಪ್ರತಿಭಟನೆ 22ನೇ ದಿನಕ್ಕೆ: ಗಡಿಭಾಗಗಳಲ್ಲಿ ಸಾವಿರಾರು ಮಂದಿ ಬೀಡು, ದೆಹಲಿಯ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ

ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಗಳನ್ನು ವಿರೋಧಿಸಿ ರೈತರು ದೆಹಲಿಯ ಗಡಿಭಾಗಗಳಲ್ಲಿ ನಡೆಸುತ್ತಿರುವ ಪ್ರತಿಭಟನೆ ನಾಲ್ಕನೇ ವಾರಕ್ಕೆ ಕಾಲಿಟ್ಟಿದ್ದು, ಸರ್ಕಾರ ಮತ್ತು ರೈತರ ಮಧ್ಯೆ ಬಿಕ್ಕಟ್ಟು ನಿವಾರಣೆಗೆ ಸಮಿತಿಯನ್ನು ರಚಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

published on : 17th December 2020
1 2 3 >