• Tag results for ಕೊವಿಡ್-19

ರಾಜ್ಯದಲ್ಲಿ ಇಂದು ಕೊರೋನಾಗೆ 98 ಬಲಿ, ಬೆಂಗಳೂರಿನಲ್ಲಿ 1497 ಸೇರಿ 4752 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 98 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 2594ಕ್ಕೆ ಏರಿಕೆಯಾಗಿದೆ.

published on : 3rd August 2020

ಬಿಜೆಪಿ ನಾಯಕನ ಅಂತ್ಯಕ್ರಿಯೆ ನೆರವೆರಿಸಿದ ಪಿಎಫ್ಐ, ಸೈದ್ದಾಂತಿಕ ಭಿನ್ನತೆ ಬದಿಗಿಟ್ಟು ಮಾದರಿಯಾದ ಸಂಘಟನೆ

ಪಾಫ್ಯುಲರ್ ಫ್ರಂಟ್ ಅಫ್ ಇಂಡಿಯಾ ಹೇಳಿಕೇಳಿ ಎಡ ಪಂಥಿಯ ಸಂಘಟನೆ. ಬಲ ಪಂಥಿಯ ಬಿಜೆಪಿಗೂ ಪಿಎಫ್ಐಗೂ ಸೈದ್ದಾಂತಿಕವಾಗಿ ಬದ್ಧ ವಿರೋಧಿಗಳು.

published on : 3rd August 2020

ಕೊರೋನಾ ಚಿಕಿತ್ಸೆ: ಸಿಎಂ, ಕೇಂದ್ರ ಸಚಿವರಿಗೆ ಸರ್ಕಾರಿ ಆಸ್ಪತ್ರೆಗಳ ಮೇಲೆ ನಂಬಿಕೆಯಿಲ್ಲವೇ?

ಕೊರೋನಾ ಸೋಂಕು ದೃಢಪಟ್ಟ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಹಿಡಿದು ಕೆಲ ಮುಖ್ಯಮಂತ್ರಿಗಳು ಹಾಗೂ ಸಚಿವರುಗಳು ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಬದಲು ಖಾಸಗಿ....

published on : 3rd August 2020

ಕೊವಿಡ್ -19: ಕಳೆದ ಎರಡು ತಿಂಗಳಲ್ಲಿ ಐಸಿಯು, ವೆಂಟಿಲೇಟರ್‌ಗಳ ಅವಶ್ಯಕತೆ ಗಣನೀಯ ಕುಸಿತ

ದೇಶದಲ್ಲಿ ಮಹಾಮಾರಿ ಕೊರೋನಾ ವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ ದಿನದಿಂದ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಲೇ ಇದೆ. ಆದರೆ ಐಸಿಯು ಬೆಡ್, ವೆಂಟಿಲೇಟರ್‌, ಆಕ್ಸಿಜನ್‌ ಬೆಡ್‌ಗಳ ಅಗತ್ಯತೆ ಕಡಿಮೆಯಾಗುತ್ತಿರುವುದು ಸಮಾಧಾನಕರ ಸಂಗತಿಯಾಗಿದೆ.

published on : 3rd August 2020

ಮಂಡ್ಯ: ಕೊರೋನಾ ಗೆದ್ದ ಕೆರೆ ಕಾಮೇಗೌಡ, ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಂಡ್ಯದಲ್ಲಿ ಹಲವು ಕೆರೆಗಳನ್ನು ನಿರ್ಮಿಸುವ ಮೂಲಕ ಆಧುನಿಕ ಭಗೀರಥ ಎಂದೇ ಖ್ಯಾತಿ ಪಡೆದಿರು ಕೆರೆ ಕಾಮೇಗೌಡರು ಮಹಾಮಾರಿ ಕೊರೋನಾ ವೈರಸ್ ಜಯಿಸಿದ್ದು, ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 

published on : 3rd August 2020

ರಾಜ್ಯದಲ್ಲಿ ಕೊರೋನಾಗೆ ಇಂದು 84 ಬಲಿ, ಬೆಂಗಳೂರಿನಲ್ಲಿ 2220 ಸೇರಿ 5,483 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ ಕಂಡಿದ್ದು, ಶುಕ್ರವಾರ 5483 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,24,115ಕ್ಕೆ ಏರಿಕೆಯಾಗಿದೆ.

published on : 31st July 2020

ಕೋವಿಡ್ ಹೋರಾಟಕ್ಕೆ ಸಹಕರಿಸದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮಕ್ಕೆ ಸಚಿವ ಸುಧಾಕರ್ ಸೂಚನೆ

ರಾಜ್ಯದಲ್ಲಿ ಸರ್ಕಾರದ ಕೋವಿಡ್ ವಿರುದ್ಧದ ಹೋರಾಟಕ್ಕೆ ಸಹಕರಿಸದ ಖಾಸಗಿ ಆಸ್ಪತ್ರೆಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಸೂಚಿಸಿದ್ದಾರೆ.

published on : 30th July 2020

ರಾಜ್ಯದಲ್ಲಿ ಕೊರೋನಾ ಅಟ್ಟಹಾಸ: ಮಹಾಮಾರಿಗೆ ಇಂದು 83 ಬಲಿ, 6128 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ‌ ಅಟ್ಟಹಾಸ ಮುಂದುವರೆದಿದ್ದು, ಗುರುವಾರ ಒಂದೇ ದಿನ ಬರೋಬ್ಬರಿ 83 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಕೊರೋನಾ ಸಾವಿನ ಸಂಖ್ಯೆ 2230ಕ್ಕೆ ಏರಿಕೆಯಾಗಿದೆ.

published on : 30th July 2020

ಕೊರೋನಾ ಸಾವಿನ ಪ್ರಮಾಣ ಕ್ರಮೇಣ ಕುಸಿಯುತ್ತಿದೆ, ದೇಶಾದ್ಯಂತ 9.88 ಲಕ್ಷ ಮಂದಿ ಗುಣಮುಖ: ಕೇಂದ್ರ

ದೇಶದಲ್ಲಿ ಕೊರೋನಾ ವೈರಸ್ ಸಾವಿನ ಪ್ರಮಾಣ ಕ್ರಮೇಣ ಕಡಿಮೆಯಾಗುತ್ತಿದ್ದು, ಬುಧವಾರ ಶೇಕಡಾ 2.23ಕ್ಕೆ ಇಳಿದಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

published on : 29th July 2020

ಅನ್ ಲಾಕ್ 3: ಆ. 5ರಿಂದ ಜಿಮ್, ಯೋಗ ಕೇಂದ್ರ ತೆರೆಯಲು ಅನುಮತಿ, ರಾತ್ರಿ ಕರ್ಫ್ಯೂ ತೆರವು

ಕೇಂದ್ರ ಸರ್ಕಾರ ಬುಧವಾರ ಅನ್ ಲಾಕ್-3 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಕಂಟೈನ್​ಮೆಂಟ್​ ಜೋನ್​ಗಳನ್ನು ಹೊರತುಪಡಿಸಿ, ಉಳಿದ ಪ್ರದೇಶಗಳಲ್ಲಿ ಆಗಸ್ಟ್ 5ರಿಂದ ಜಿಮ್, ಯೋಗ ಕೇಂದ್ರ ತೆರೆಯಲು ಅನುಮತಿ ನೀಡಲಾಗಿದೆ. ಅಲ್ಲದೆ ರಾತ್ರಿ ಕರ್ಫ್ಯೂ ಅನ್ನು ಸಹ ತೆರವುಗೊಳಿಸಲಾಗಿದೆ.

published on : 29th July 2020

ಬೆಂಗಳೂರಿನಲ್ಲಿ 50 ಸಾವಿರ ಗಡಿ ದಾಟಿದ ಕೊರೋನಾ, ರಾಜ್ಯದಲ್ಲಿ ಇಂದು 5503 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ‌ ಪ್ರಕರಣಗಳು ಏರಿಮುಖವಾಗಿಯೇ ಸಾಗಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬುಧವಾರ 2270 ಮಂದಿಗೆ ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ 50 ಸಾವಿರದ ಗಡಿ ದಾಟಿದೆ.

published on : 29th July 2020

ಕೊರೋನಾದಿಂದ ಸಾಯ್ತೀರಿ ಎಂದವರಿಗೆ ಅಮಿತಾಭ್ ಬಚ್ಚನ್ ಕ್ಲಾಸ್

ನೀವು ಮಹಾಮಾರಿ ಕೊರೋನಾ ವೈರಸ್ ನಿಂದ ಸಾಯ್ತೀರಿ ಎಂಬ ಅನಾಮಧೇಯ ಟ್ರೋಲ್‌ ನಿಂದ ತಾಳ್ಮೆ ಕಳೆದುಕೊಂಡ ಬಾಲಿವುಡ್ ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಅವರು, ನಿಮ್ಮ ಕಿಚ್ಚಿನಲ್ಲಿ ನೀವೇ ಸಾಯುತ್ತೀರಿ ಎಂದು ತಿರುಗೇಟು ನೀಡಿದ್ದಾರೆ.

published on : 28th July 2020

ದೇಶದಲ್ಲಿ ಕೊರೋನಾ ಸಾವಿನ ಪ್ರಮಾಣ ಶೇ.2.25ಕ್ಕೆ ಕುಸಿತ: ಕೇಂದ್ರ

ದೇಶದಲ್ಲಿ ಕೊರೋನಾ ಸಾಂಕ್ರಾಮಿಕ ರೋಗ ಹರಡುವುದನ್ನು ನಿಯಂತ್ರಿಸಲು ತೆಗೆದುಕೊಂಡ ಮುಂಜಾಗೃತಾ ಮತ್ತು ಪೂರ್ವಭಾವಿ ಕ್ರಮಗಳಿಂದಾಗಿ ಕೊರೋನಾ ವೈರಸ್ ಸಾವಿನ ಪ್ರಮಾಣ ಶೇಕಡಾ 2.25ಕ್ಕೆ ಇಳಿದಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ.

published on : 28th July 2020

ಮೈಸೂರಿನಲ್ಲಿ ಕೊರೋನಾ ಹೆಚ್ಚಳ: ಲೌಡ್ ಸ್ಪೀಕರ್ ಮೂಲಕ ಜಾಗೃತಿಗೆ ಮುಂದಾದ ಮಹಾನಗರ ಪಾಲಿಕೆ

ಮೈಸೂರಿನಲ್ಲಿ ಸಾರ್ವಜನಿಕ ಪ್ರಕಟಣೆಗಳಿಗಾಗಿ ಕಸದ ಮಿನಿ ಲಾರಿಯ ಮೇಲೆ ಫಿಕ್ಸ್ ಮಾಡಲಾಗಿರುವ ಲೌಡ್ ಸ್ಪೀಕರ್ ಗಳು ಈಗ ಅರಮನೆ ನಗರಿಯ ನಿವಾಸಿಗಳ ಗಮನ ಸೆಳೆಯುತ್ತಿವೆ.

published on : 28th July 2020

ರಾಜ್ಯದಲ್ಲಿ 1 ಲಕ್ಷ ದಾಟಿದ ಕೊರೋನಾ ಸಂಖ್ಯೆ, ಇಂದು ಬೆಂಗಳೂರಿನಲ್ಲಿ 1470 ಸೇರಿ 5324 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಆರ್ಭಟ ಮುಂದುವರಿದಿದೆ. ಕಳೆದ ಐದು ದಿನಗಳಿಂದ ದಿನವೊಂದರಲ್ಲಿ ಐದು ಸಾವಿರಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ದಾಟಿದೆ.

published on : 27th July 2020
1 2 3 4 5 6 >