• Tag results for ಕೋರ್ಟ್

ಭೂ ಅಕ್ರಮ ಆರೋಪ: ಡಾ.ವೀರೇಂದ್ರ ಹೆಗ್ಗಡೆಗೆ ಕ್ಲೀನ್ ಚಿಟ್ ನೀಡಿದ ಹೈಕೋರ್ಟ್

ಭೂ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಹೈಕೋರ್ಟ್ ಕ್ಲೀನ್ ಚಿಟ್ ನೀಡಿದೆ.

published on : 13th December 2019

ಡಿ.16ಕ್ಕೆ ನೇಣು ಇಲ್ಲ, 'ಸುಪ್ರೀಂ' ನಿಲುವಿನ ನಂತರ 'ನಿರ್ಭಯ' ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ: ಸೆಷನ್ಸ್ ಕೋರ್ಟ್

ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆದೇಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸತೀಶ್ ಕುಮಾರ್ ಅರೋರಾ...

published on : 13th December 2019

ಪೌರತ್ವ ಕಾಯ್ದೆ ವಿರುದ್ಧ 'ಸುಪ್ರೀಂ' ಮೊರೆ ಹೋದ ಕಾಂಗ್ರೆಸ್

ಪೌರತ್ವ (ತಿದ್ದುಪಡಿ) ಕಾಯ್ದೆ ಸಿಂಧುತ್ವದ ವಿರುದ್ಧ ಕಾಂಗ್ರೆಸ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಇದು ಸಂವಿಧಾನದ 14ನೇ ವಿಧಿಯ ಉಲ್ಲಂಘನೆಯಾಗಿದೆ  ಎಂದು ಕಾಂಗ್ರೆಸ್ ಪಕ್ಷ ನ್ಯಾಯಾಲಯದಲ್ಲಿ ಹೇಳಿದೆ. 

published on : 13th December 2019

ನಿತ್ಯಾನಂದ  ವಿರುದ್ಧದ  ಅತ್ಯಾಚಾರ ಆರೋಪ ವಿಚಾರಣೆಗೆ ಹೈಕೋರ್ಟ್ ತಡೆ

ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ವಿರುದ್ಧದ ಅತ್ಯಾಚಾರ ಪ್ರಕರಣ ಕುರಿತ ರಾಮನಗರ ಸೆಷನ್ಸ್ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಏಕಸದಸ್ಯ ಪೀಠ ತಡೆ ನೀಡಿದೆ.

published on : 13th December 2019

ನಿರ್ಭಯಾ ಕೇಸ್: ಡಿ.18ಕ್ಕೆ ಅರ್ಜಿ ವಿಚಾರಣೆ ಮುಂದೂಡಿದ ದೆಹಲಿ ಕೋರ್ಟ್ 

ನಿರ್ಭಯಾ ಗ್ಯಾಂಗ್ ರೇಪ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಭಯಾ ಪೋಷಕರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಡಿಸೆಂಬರ್ 18ಕ್ಕೆ ಮುಂದೂಡಿದೆ.

published on : 13th December 2019

ಹೈಕೋರ್ಟ್ ಮತ್ತು ಅಧೀನ ನ್ಯಾಯಲಯಗಳಿಗೆ ನಾಲ್ಕನೇ ಶನಿವಾರ ರಜೆ ರದ್ದು

ಕರ್ನಾಟಕ ಹೈಕೋರ್ಟ್ ಹಾಗೂ ರಾಜ್ಯದ ಎಲ್ಲಾ ಅಧೀನ ನ್ಯಾಯಾಲಯಗಳಿಗೆ ಈ ಹಿಂದೆ ಘೋಷಿಸಲಾಗಿದ್ದ ನಾಲ್ಕನೇ ಶನಿವಾರದ ಸಾರ್ವತ್ರಿಕ ರಜೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿ ಆದೇಶಿಸಿದೆ

published on : 13th December 2019

ರಾಮಲಲ್ಲಾಗೆ ರಾಮಜನ್ಮ ಭೂಮಿ, ಮಸೀದಿಗೆ 5 ಎಕರೆ ಫಿಕ್ಸ್: ಅಯೋಧ್ಯೆ ತೀರ್ಪು ಪ್ರಶ್ನಿಸಿದ್ದ 18 ಮರುಪರಿಶೀಲನಾ ಅರ್ಜಿಗಳು ವಜಾ!

ವಿವಾದಿತ ರಾಮಜನ್ಮ ಭೂಮಿ ರಾಮಲಲ್ಲಾಗೆ ನೀಡಿ, ಸುನ್ನಿ ವಕ್ಫ್ ಬೋರ್ಡ್ ಮಸೀದಿ ನಿರ್ಮಾಣಕ್ಕೆ ಬೇರೆಡೆ ಪ್ರತ್ಯೇಕ 5 ಎಕರೆ ಭೂಮಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ನೀಡಿದ್ದ ಐತಿಹಾಸಿಕ ತೀರ್ಪು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಎಲ್ಲ 18 ಮರುಪರಿಶೀಲನ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

published on : 12th December 2019

ಹೈದರಾಬಾದ್ ಎನ್ ಕೌಂಟರ್: ತನಿಖೆಗೆ ವಿಚಾರಣಾ ಆಯೋಗ ನೇಮಿಸಿದ 'ಸುಪ್ರೀಂ'

ಹೈದರಾಬಾದ್ ಪಶುವೈದ್ಯೆ ಅತ್ಯಾಚಾರ ಮತ್ತು ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸಲಾದ ಪೊಲೀಸ್ ಎನ್ ಕೌಂಟರ್ ತನಿಖೆಗಾಗಿ ಸುಪ್ರೀಂ  ಕೋರ್ಟ್ ಮೂವರು ಸದಸ್ಯರ ವಿಚಾರಣಾ ಆಯೋಗ ನೇಮಕ ಮಾಡಿದೆ.

published on : 12th December 2019

ಪೌರತ್ವ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಮುಸ್ಲಿಂ ಸಂಘಟನೆಯಿಂದ 'ಸುಪ್ರೀಂ'ಗೆ ಅರ್ಜಿ

ಭಾರಿ ಚರ್ಚೆಗೆ ಗ್ರಾಸವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಮುಸ್ಲಿಂ ಸಂಘಟನೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವುದಾಗಿ ಹೇಳಿದೆ.

published on : 12th December 2019

ಪೌರತ್ವ ಮಸೂದೆ: 'ಸುಪ್ರೀಂ'ಗೆ ದೂರು ನೀಡಲು ವಿಪಕ್ಷಗಳ ಚಿಂತನೆ

ರಾಜ್ಯಸಭೆಯಲ್ಲಿ ನಿನ್ನೆ ಅಂಗೀಕಾರಗೊಂಡಿರುವ ಪೌರತ್ವ ( ತಿದ್ದುಪಡಿ) ಕಾಯ್ದೆ ವಿರುದ್ಧ ಸುಪ್ರೀಂಕೋರ್ಟ್ ಗೆ ದೂರು ನೀಡಲು ಪ್ರತಿಪಕ್ಷಗಳು ಚಿಂತನೆ ನಡೆಸಿವೆ.

published on : 12th December 2019

ಬೆಂಗಳೂರಿನಲ್ಲಿ ದಾಳಿಗೆ ಸಂಚು: ಉಗ್ರ ಇಮ್ರಾನ್ ಜೀವಾವಧಿ ಶಿಕ್ಷೆ ಎತ್ತಿ ಹಿಡಿದ ಹೈಕೋರ್ಟ್

ವಿಧಾನ ಸೌಧ, ಎಚ್​ಎಎಲ್, ವಿಪ್ರೋ, ಇನ್ಪೋಸಿಸ್ ಸೇರಿ ನಗರದ ಪ್ರಮುಖ ಐಟಿ ಕಂಪನಿಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆ ಸದಸ್ಯ ಇಮ್ರಾನ್ ಜಲಾಲ್​ಗೆ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

published on : 11th December 2019

ಸ್ತನ ಕ್ಯಾನ್ಸರ್ ಪರೀಕ್ಷೆ ನೆಪದಲ್ಲಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಕಿಲಾಡಿ ಡಾಕ್ಟರ್!

ತನ್ನ ಬಳಿಗೆ ಬರುತ್ತಿದ್ದ ಕ್ಯಾನ್ಸರ್ ಪೀಡಿತ ಮಹಿಳಾ ರೋಗಿಗಳಿಗೆ ಕ್ಯಾನ್ಸರ್ ಬಗೆಗಿರುವ ಅವರ ಭಯವನ್ನೇ ಬಂಡವಾಳವನ್ನಾಗಿಸಿಕೊಂಡು ಲೈಣ್ಗಿಕ ಕಿರುಕುಳ ನೀಡುತ್ತಿದ್ದ ಭಾರತೀಯ ಮೂಲದ ವೈದ್ಯನೊಬ್ಬ ಇದೀಗ ಯುಕೆ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿದ್ದಾನೆ.  

published on : 11th December 2019

15 ದಿನಗಳಲ್ಲಿ ಕಲಬುರಗಿ ಕೋಟೆ ಪ್ರದೇಶ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಿ: ಹೈಕೋರ್ಟ್

ಕಲಬುರಗಿಯ ಐತಿಹಾಸಿಕ ಕೋಟೆ  ವ್ಯಾಪ್ತಿಯಲ್ಲಿನ ಒತ್ತುವರಿ ತೆರವುಗೊಳಿಸಲು 15 ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗೆ ಹೈಕೋರ್ಟ್‌ ಆದೇಶಿಸಿದೆ. 

published on : 11th December 2019

ಗ್ಯಾಸ್ ಚೇಂಬರ್ ದೆಹಲಿಯಲ್ಲಿ ಹೆಚ್ಚು ದಿನ ಬದಕಲು ಸಾಧ್ಯವಿಲ್ಲ, ಇನ್ನು ಗಲ್ಲು ಶಿಕ್ಷೆ ಏಕೆ?; ನಿರ್ಭಯಾ ಅತ್ಯಾಚಾರಿ ಪ್ರಶ್ನೆ

ದೆಹಲಿ ವಾಯು ಮಾಲಿನ್ಯ ಮತ್ತೆ ಸುದ್ದಿಗೆ ಬಂದಿದ್ದು, ಈ ಬಾರಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ನಿರ್ಭಯಾ ಅತ್ಯಾಚಾರ ಪ್ರಕರಣ ಅಪರಾಧಿ ತನ್ನ ಗಲ್ಲು ಶಿಕ್ಷೆಯನ್ನು ವಿನೂತನವಾಗಿ ಪ್ರಶ್ನಿಸಿದ್ದಾನೆ.

published on : 11th December 2019

ಎಚ್ .ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್:  ಮೂರು ಕೇಸ್ ರದ್ದುಗೊಳಿಸಿದ ಹೈಕೋರ್ಟ್  

2014ರ ಲೋಕಸಭಾ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರು ರಸ್ತೆ ಬಂದ್‌ ಮಾಡಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯುಂಟು ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧದ ಮೂರು ಪ್ರತ್ಯೇಕ ಕ್ರಿಮಿನಲ್‌ ಪ್ರಕರಣಗಳನ್ನು ಹೈಕೋರ್ಟ್‌ ರದ್ದುಗೊಳಿಸಿದೆ.

published on : 11th December 2019
1 2 3 4 5 6 >