• Tag results for ಜಾರಿ ನಿರ್ದೇಶನಾಲಯ

ಬ್ಯಾಂಕ್'ಗಳಿಂದ ಕಿಂಗ್'ಫಿಶರ್ ಏರ್'ಲೈನ್ಸ್ ಪಡೆದಿದ್ದ ಶೇ.100ರಷ್ಟು ಸಾಲ ಮರಳಿಸಲು ಸಿದ್ಧ: ಮಲ್ಯ

ಭಾರತೀಯ ಬ್ಯಾಂಕ್ ಗಳಿಂದ ಕಿಂಗ್ ಫಿಶರ್ ಏರ್'ಲೈನ್ಸ್ ಪಡೆದಿದ್ದ ಶೇ.100ರಷ್ಟು ಸಾಲವನ್ನು ಮರುಪಾವತಿ ಮಾಡಲು ಸಿದ್ಧವಿದ್ದೇನೆಂದು ಮದ್ಯದ ದೊರೆ ವಿಜಯ್ ಮಲ್ಯ ಅವರು ಮಂಗಳವಾರ ಹೇಳಿದ್ದಾರೆ. 

published on : 31st March 2020

#ಯೆಸ್_ಬ್ಯಾಂಕ್ ಆರ್ಥಿಕ ಬಿಕ್ಕಟ್ಟು; ಬ್ಯಾಂಕ್ ಸಂಸ್ಥಾಪಕ ರಾಣಾಕಪೂರ್ ಗೆ ಇಡಿ ತೀವ್ರ ವಿಚಾರಣೆ

ಯೆಸ್_ಬ್ಯಾಂಕ್ ಆರ್ಥಿಕ ಬಿಕ್ಕಟ್ಟು ವಿಚಾರಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಸಂಸ್ಥಾಪಕ ಹಾಗೂ ಮಾಜಿ ಸಿಇಒ ರಾಣಾಕಪೂರ್ ರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತೀವ್ರ ವಿಚಾರಣೆಗೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

published on : 7th March 2020

ಐಟಿ, ಇಡಿ ಅಧಿಕಾರಿಗಳಿಂದ ಕಿರುಕುಳ ಆರೋಪ: 'ಹೈ' ಮೆಟ್ಟಿಲೇರಿದ ಡಿಕೆಶಿ ತಾಯಿ

ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಜಾರಿ ನಿರ್ದೇಶಾನಲಯ ಸಮನ್ಸ್ ಜಾರಿಗೊಳಿಸಿರುವುದನ್ನು ಪ್ರಶ್ನಿಸಿ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರ ತಾಯಿ ಗೌರಮ್ಮ ಅವರು, ಹೈಕೋರ್ಟ್ ಮೆಟ್ಟಿಲೇರಿದ್ದಾರೆ. 

published on : 18th December 2019

ಭೂಗತ ಲೋಕದೊಡನೆ ವ್ಯವಹಾರ: ಶಿಲ್ಪಾ ಶೆಟ್ಟಿ ದಂಪತಿಗಳಿಗೆ ಇಡಿ ಸಮನ್ಸ್

ಭೂಗತ ಜಗತ್ತಿನೊಂದಿಗೆ ಆರ್ಥಿಕ ವ್ಯವಹಾರ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ಸೋಮವಾರ ಜಾರಿ ನಿರ್ದೇಶನಾಲಯ ಸೆಲೆಬ್ರೆಟಿ ದಂಪತಿಗಳಾದ ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ ಅವರಿಗೆ ಸಮನ್ಸ್ ಜಾರಿ ಮಾಡಿದೆ.

published on : 28th October 2019

ಐಎನ್‌ಎಕ್ಸ್ ಮೀಡಿಯಾ: ಚಿದಂಬರಂ ಇಡಿ ಕಸ್ಟಡಿ ಅಕ್ಟೋಬರ್ 30ರವರೆಗೆ ವಿಸ್ತರಣೆ

ಐಎನ್‌ಎಕ್ಸ್ ಮೀಡಿಯಾ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರಿಗೆ ಅಕ್ಟೋಬರ್ 30ವರೆಗೆ ಜಾರಿ ನಿರ್ದೇಶನಾಲಯ (ಇಡಿ) ಕಸ್ಟಡಿಗೆ ನೀಡಿದೆ.

published on : 24th October 2019

ಐಎನ್ಎಕ್ಸ್ ಮೀಡಿಯಾ ಹಗರಣ: ಚಿದು ಜಾಮೀನು ಅರ್ಜಿ ಕುರಿತು ಇಡಿ ಪ್ರತಿಕ್ರಿಯೆ ಕೇಳಿದ ದೆಹಲಿ 'ಹೈ'

ಬಹುಕೋಟಿ ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ವಿತ್ತ ಸಚಿವ ಚಿದಂಬರಂ ಜಾಮೀನು ಅರ್ಜಿ ಕುರಿತಂತೆ ದೆಹಲಿ ಹೈಕೋರ್ಟ್ ಗುರುವಾರ ಜಾರಿ ನಿರ್ದೇಶನಾಲಯದ ಪ್ರತಿಕ್ರಿಯೆ ಕೇಳಿದೆ. 

published on : 24th October 2019

ಡಿಕೆ ಶಿವಕುಮಾರ್ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಇ.ಡಿ ಅರ್ಜಿ 

ಡಿ.ಕೆ ಶಿವಕುಮಾರ್ ಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ ಬೆನ್ನಲ್ಲೇ, ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. 

published on : 23rd October 2019

ರೋಸ್ ವ್ಯಾಲಿ ಚಿಟ್ ಫಂಡ್ ಹಗರಣ: ಇಡಿಯಿಂದ ಕೆಕೆಆರ್ ಸಿಇಒ ವೆಂಕಿ ಮೈಸೂರು ವಿಚಾರಣೆ

ಐಪಿಎಲ್ ತಂಡವಾದ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಸಿಇಒ ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಮಾಲೀಕರನ್ನು  ಜಾರಿ ನಿರ್ದೇಶನಾಲಯ ಶುಕ್ರವಾರ ವಿಚಾರಣೆಗೆ ಒಳಪಡಿಸಿದೆ.ಐಪಿಎಲ್ ತಂಡವನ್ನು ಪ್ರಾಯೋಜಿಸಿದ ರೋಸ್ ವ್ಯಾಲಿ ಗ್ರೂಪ್ ಒಳಗೊಂಡ ಮನಿ ಲಾಂಡರಿಂಗ್ ಪ್ರಕರಣದ ಸಂಬಂಧ ಇವರನ್ನು ಪ್ರಶ್ನಿಸಲಾಗಿದೆ.

published on : 19th October 2019

ಅಕ್ರಮ ಹಣ ವರ್ಗಾವಣೆ ಕೇಸ್: ಇಡಿಯಿಂದ ಪ್ರಫುಲ್‌ ಪಟೇಲ್ ವಿಚಾರಣೆ

ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಬಂಟ ಇಕ್ಬಾಲ್‌ ಮಿರ್ಚಿ ಜತೆ ಅಕ್ರಮ ಹಣ ವಹಿವಾಟು ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಹಾಗೂ ಎನ್ ಸಿಪಿ ಮುಖಂಡ ಪ್ರಫುಲ್‌ ಪಟೇಲ್‌ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಶುಕ್ರವಾರ ತೀವ್ರ ವಿಚಾರಣೆಗೆ ಒಳಪಡಿಸಿದೆ.

published on : 18th October 2019

ಐಎನ್ಎಕ್ಸ್ ಮೀಡಿಯಾ ಹಗರಣ: ವಿಚಾರಣೆ ಬಳಿಕ ಚಿದಂಬರಂ ಬಂಧನ

ಐಎನ್ಎಕ್ಸ್ ಮೀಡಿಯಾ ಹಗರಣ ಸಂಬಂಧ ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ತಿಹಾರ್ ಜೈಲಿನಲ್ಲಿ ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. 

published on : 16th October 2019

ದಾವೂದ್‌ ಬಂಟನ ಜತೆ ಭೂ ನಂಟು: ಪ್ರಫುಲ್‌ ಪಟೇಲ್ ಗೆ ಇಡಿ ಸಮನ್ಸ್

ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಬಂಟ ಇಕ್ಬಾಲ್‌ ಮಿರ್ಚಿ ಜತೆ ಅಕ್ರಮ ಭೂ ವಹಿವಾಟು ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಮಾಜಿ ಕೇಂದ್ರ ಸಚಿವ ಹಾಗೂ ಎನ್ ಸಿಪಿ ಮುಖಂಡ ಪ್ರಫುಲ್‌ ಪಟೇಲ್‌ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಮಂಗಳವಾರ ಸಮನ್ಸ್ ಜಾರಿ ಮಾಡಿದೆ.

published on : 15th October 2019

ಐಎನ್ಎಕ್ಸ್ ಮೀಡಿಯಾ ಪ್ರಕರಣ: ಚಿದಂಬರಂ ವಿಚಾರಣೆ ಮಾಡಿ, ಅಗತ್ಯವಾದರೆ ಬಂಧಿಸಿ-ಇಡಿಗೆ ದೆಹಲಿ ಕೋರ್ಟ್

ಐಎನ್‌ಎಕ್ಸ್ ಮೀಡಿಯಾ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಕೋರ್ಟ್ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ವಿಚಾರಣೆ ನಡೆಸಲು ಇಡಿಗೆ ಅನುಮತಿ ನೀಡಿದೆ.

published on : 15th October 2019

ಡಿಕೆಶಿ ವಿಚಾರಣೆಗೆ ರಾಜ್ಯ ಸರ್ಕಾರದಿಂದ ಗ್ರೀನ್ ಸಿಗ್ನಲ್: ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ

ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ)ಯಿಂದ ಬಂಧನಕ್ಕೊಳಗಾಗಿ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಮತ್ತಷ್ಟು ವಿಚಾರಣೆ ನಡೆಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ ನೀಡಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

published on : 2nd October 2019

338 ಕೋಟಿ ರೂ. ಆಸ್ತಿ ಘೋಷಣೆ, ಡಿಕೆಶಿ ಸಹೋದರ ಡಿಕೆ ಸುರೇಶ್ ಗೆ ಇ.ಡಿ. ಸಮನ್ಸ್ ಜಾರಿ

ಅಕ್ರಮ ಹಣ ವರ್ಗಾವಣೆಯಲ್ಲಿ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದು, ಏತನ್ಮಧ್ಯೆ ಸಹೋದರ, ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಗೂ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. 

published on : 30th September 2019

ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಚೇರಿಗೆ ತೆರಳದಿರಲು ಶರದ್ ಪವಾರ್ ನಿರ್ಧಾರ

ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಹೆಸರು ಕೇಳಿಬಂದಿತ್ತು. 

published on : 27th September 2019
1 2 3 4 5 >