ಹಿಂದಿ ಅಥವಾ ಇನ್ನಾವುದೇ ಭಾಷೆಯನ್ನು ಕಲಿಯುವ ವ್ಯಕ್ತಿಗಳನ್ನು ತಮಿಳುನಾಡು ಎಂದಿಗೂ ವಿರೋಧಿಸಿಲ್ಲ ಆದರೆ ತನ್ನ ಜನರ ಮೇಲೆ ಹಿಂದಿ ಅಥವಾ ಯಾವುದೇ ಭಾಷೆಯನ್ನು ಹೇರುವುದನ್ನು ವಿರೋಧಿಸುತ್ತದೆ ಎಂದರು.
ಜನ ಸೇನಾ ಪಕ್ಷದ 12ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಷಣ ಮಾಡಿದ್ದ ಪವನ್ ಕಲ್ಯಾಣ್, ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಸಂಬಂಧಿಸಿದಂತೆ ತಮಿಳುನಾಡು ರಾಜಕಾರಣಿಗಳದ್ದು 'ಬೂಟಾಟಿಕೆ' ಎಂದು ಕರೆದಿದ್ದರು.
ಮತ್ತಷ್ಟು ಅಹಿತಕರ ಘಟನೆಗಳನ್ನು ತಡೆಗಟ್ಟುವ ಸಲುವಾಗಿ, ರಾಜ್ಯ ಸರ್ಕಾರ, ಸೈಂಥಿಯಾ ಪಟ್ಟಣ ಮತ್ತು ಪಕ್ಕದ ಐದು ಪಂಚಾಯತ್ ಪ್ರದೇಶಗಳಲ್ಲಿ ಮಾರ್ಚ್ 17 ರವರೆಗೆ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಿದೆ.
ಶುಕ್ರವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮಕ್ಕಳ ಶೈಕ್ಷಣಿಕ ಸಾಧನೆಯಿಂದ ನಿರಾಸೆಗೊಂಡಿದ್ದ ತಂದೆ ವಿ. ಚಂದ್ರ ಕಿಶೋರ್ ಬಕೆಟ್ ನೀರಿನಲ್ಲಿ ಮುಳುಗಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಬಿಜೆಪಿ ನಾಯಕನನ್ನು ಮುಂಡ್ಲಾನಾ ಮಂಡಲ ಅಧ್ಯಕ್ಷ ಸುರೇಂದ್ರ ಜವಾಹರ್ ಎಂದು ಗುರ್ತಿಸಲಾಗಿದೆ. ಕಳೆದ ರಾತ್ರಿ ಸುರೇಂದ್ರ ಜವಾಹರ್ ಬೆನ್ನಟ್ಟಿರುವ ದುಷ್ಕರ್ಮಿಗಳು, ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.
ಸ್ಪರ್ಧಾತ್ಮಕ ಜಗತ್ತಿನ ಒತ್ತಡವನ್ನು ತನ್ನ ಮಕ್ಕಳು ನಿಭಾಯಿಸಲು ಸಾಧ್ಯವಾಗುವುದಿಲ್ಲ ಎಂದು ನಂಬಿದ್ದ ತಂದೆಯೊಬ್ಬರು, ಅವರನ್ನು ಕೊಂದು ನಂತರ ತಾವೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.