• Tag results for ದೆಹಲಿ ಕೋರ್ಟ್

ಶಹೀನ್ ಬಾಗ್ ಶೂಟರ್ ಗೆ ದೆಹಲಿ ನ್ಯಾಯಾಲಯ ಜಾಮೀನು 

ದೆಹಲಿಯ ಶಹೀನ್ ಬಾಗ್ ಪ್ರತಿಭಟನೆ ವೇಳೆ ಗುಂಡು ಹಾರಿಸಿದ್ದ ಶೂಟರ್ ಬೈಸಾಲಾ ಗೆ ದೆಹಲಿ ನ್ಯಾಯಾಲಯ ಜಾಮೀನು ನೀಡಿದೆ. ಬೈಸಾಲಾ ಪರ ವಕೀಲರು ಮತ್ತು ಪೊಲೀಸರ ಪರ ವಾದಗಳನ್ನು ಆಲಿಸಿದನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

published on : 7th March 2020

ನಿರ್ಭಯಾ ಹತ್ಯಾಚಾರಿಗಳಿಗೆ ನಾಳೆ ಗಲ್ಲು ಫಿಕ್ಸ್..?; ಶಿಕ್ಷೆಗೆ ತಡೆ ನೀಡುವಂತೆ ಸಲ್ಲಿಸಿದ್ದ ಅರ್ಜಿ ವಜಾ!

ಕಳೆದ 8 ವರ್ಷಗಳಿಂದ ಕುತೂಹಲ ಕೆರಳಿಸಿದ್ದ ನಿರ್ಭಯಾ ಹತ್ಯಾಚಾರಿಗಳ ಗಲ್ಲು ಶಿಕ್ಷೆ ನಾಳೆ ಜಾರಿಯಾಗುವುದೇ..? ಇಂತಹುದೊಂದು ಆಸೆ ಇದೀಗ ಎಲ್ಲ ಭಾರತೀಯರಲ್ಲೂ ಹುಟ್ಟಿದ್ದು, ಗಲ್ಲು ಶಿಕ್ಷೆಗೆ ತಡೆ ನೀಡುವಂತೆ ಅಪರಾಧಿ ಸಲ್ಲಿಸಿದ್ದ ಅರ್ಜಿಯನ್ನೂ ದೆಹಲಿ ಕೋರ್ಟ್ ವಜಾಗೊಳಿಸಿದೆ.

published on : 2nd March 2020

ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣ: ವಸ್ತುಸ್ಥಿತಿ ವರದಿ ಸಲ್ಲಿಸಿದ ಸಿಬಿಐ, ಇಡಿ, ವಿಚಾರಣೆ ಫೆ.20ಕ್ಕೆ ಮುಂದೂಡಿಕೆ 

ಮಾಜಿ ಸಚಿವ ಪಿ ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಭಾಗಿಯಾಗಿದ್ದಾರೆ ಎನ್ನಲಾಗುವ ಏರ್ ಸೆಲ್ -ಮ್ಯಾಕ್ಸಿಸ್ ಕೇಸಿನ ವಸ್ತುಸ್ಥಿತಿ ವರದಿಯನ್ನು ಶುಕ್ರವಾರ ದೆಹಲಿ ಕೋರ್ಟ್ ಮುಂದೆ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಸಲ್ಲಿಸಿವೆ.

published on : 14th February 2020

ಮ್ಯಾಚ್ ಫಿಕ್ಸಿಂಗ್: ಪ್ರಮುಖ ಬುಕ್ಕಿ ಸಂಜೀವ್ ಚಾವ್ಲಾ ಭಾರತಕ್ಕೆ ಹಸ್ತಾಂತರ, 12 ದಿನ ಪೊಲೀಸ್ ಕಸ್ಟಡಿ!

2000ರ ಕ್ರಿಕೆಟ್ ಮ್ಯಾಚ್ ಫಿಕ್ಸಿಂಗ್ ಪ್ರಕರಣದ ಪ್ರಮುಖ ಆರೋಪಿ ಸಂಜೀವ್ ಚಾವ್ಲಾ ಅವರನ್ನು ಇಂಗ್ಲೆಂಡ್‍ನಿಂದ ಹಸ್ತಾಂತರಿಸಿದ್ದು, ಗುರುವಾರ ಬಂಧಿಸಿ ಭಾರತಕ್ಕೆ ಕರೆತರಲಾಯಿತು.

published on : 13th February 2020

ಮುಜಾಫರಪುರ್ ಸೆಕ್ಸ್ ಹಗರಣ: ಮಾಜಿ ಶಾಸಕ ಬ್ರಜೇಶ್ ಥಾಕೂರ್ ಗೆ ಜೀವಿತಾವಧಿ ಶಿಕ್ಷೆ

ದೇಶವನ್ನೇ ಬೆಚ್ಚಿ ಬೀಳಿಸಿದ್ದ ಬಿಹಾರದ ಮುಜಾಫರಪುರ್ ಶೆಲ್ಟರ್ ಹೋಮ್ ಸೆಕ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಬ್ರಜೇಶ್ ಥಾಕೂರ್ ಗೆ ಜೀವಿತಾವಧಿ ಶಿಕ್ಷೆ ವಿಧಿಸಿ ದೆಹಲಿ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ.

published on : 11th February 2020

ನಿರ್ಭಯಾ ಪ್ರಕರಣ: ನಾಲ್ವರು ಅಪರಾಧಿಗಳ ಗಲ್ಲು ಶಿಕ್ಷೆ ಜಾರಿಗೆ ತಡೆಯಾಜ್ಞೆ

ಮುಂದಿನ ಆದೇಶದವರೆಗೆ ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿಗೊಳಿಸದಂತೆ ದೆಹಲಿ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.

published on : 31st January 2020

ಆಜಾದ್ ಜಾಮೀನು ಷರತ್ತು ಸಡಿಲಿಸಿದ ಕೋರ್ಟ್, ಚುನಾವಣೆ, ವೈದ್ಯಕೀಯ ಚಿಕಿತ್ಸೆಗಾಗಿ ದೆಹಲಿ ಭೇಟಿಗೆ ಅಸ್ತು

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ವೇಳೆ ಪ್ರಚೋದನಾತ್ಮಕ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರಿಗೆ ದೆಹಲಿ ಕೋರ್ಟ್....

published on : 21st January 2020

ಮುಜಾಫರಪುರ್ ಸೆಕ್ಸ್ ಹಗರಣ: ಮಾಜಿ ಶಾಸಕ ಬ್ರಜೇಶ್ ಥಾಕೂರ್ ಸೇರಿ 19 ಮಂದಿ ತಪ್ಪಿತಸ್ಥರು

ದೇಶವನ್ನೇ ಬೆಚ್ಚಿ ಬೀಳಿಸಿದ್ದ ಬಿಹಾರದ ಮುಜಾಫರಪುರ್ ಶೆಲ್ಟರ್ ಹೋಮ್ ಸೆಕ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಬ್ರಜೇಶ್ ಥಾಕೂರ್ ಹಾಗೂ ಇತರೆ 18 ಮಂದಿ ತಪ್ಪಿತಸ್ಥರು ಎಂದು ದೆಹಲಿ ಕೋರ್ಟ್ ಸೋಮವಾರ ತೀರ್ಪು ನೀಡಿದೆ.

published on : 20th January 2020

ಬಂಧಿತ ಭೀಮ್ ಆರ್ಮಿ ಮುಖ್ಯಸ್ಥನಿಗೆ ತುರ್ತು ವೈದ್ಯಕೀಯ ಚಿಕಿತ್ಸೆಗೆ ಕೋರ್ಟ್ ಆದೇಶ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯ ದರ್ಯಾಗಂಜ್ ಪ್ರದೇಶದಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರಿಗೆ....

published on : 8th January 2020

ಉನ್ನಾವೋ ಅತ್ಯಾಚಾರ ಪ್ರಕರಣ: ಡಿ.16ಕ್ಕೆ ತೀರ್ಪು ಕಾಯ್ದಿರಿಸಿದ ದೆಹಲಿ ಕೋರ್ಟ್

ಉತ್ತರ ಪ್ರದೇಶದ ಬಿಜೆಪಿ ಉಚ್ಛಾಟಿತ ಶಾಸಕ ಕುಲ್ದೀಪ್ ಸಿಂಗ್ ಸೇಂಗಾರ್ ವಿರುದ್ಧದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ ವಿಚಾರಣೆಯನ್ನು ಮಂಗಳವಾರ ಪೂರ್ಣಗೊಳಿಸಿದ ದೆಹಲಿ ಕೋರ್ಟ್, ತೀರ್ಪು ಕಾಯ್ದಿರಿಸಿದೆ.

published on : 10th December 2019

ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

2016ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಕೋರ್ಟ್ ಶನಿವಾರ ವಜಾಗೊಳಿಸಿದೆ.

published on : 23rd November 2019

ಐಎನ್ಎಕ್ಸ್ ಮೀಡಿಯಾ ಹಗರಣ: ತಿಹಾರ್ ಜೈಲಿನಲ್ಲಿ ಚಿದಂಬರಂ ವಿಚಾರಣೆಗೆ ದೆಹಲಿ ಕೋರ್ಟ್ ಅಸ್ತು

ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಮಾಜಿ ವಿತ್ತ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರನ್ನು ತಿಹಾರ್ ಜೈಲಿನಲ್ಲಿಯೇ ವಿಚಾರಣೆಗೆ ಒಳಪಡಿಸಲು ದೆಹಲಿ ಕೋರ್ಟ್ ಗುರುವಾರ ಜಾರಿ ನಿರ್ದೇಶನಾಲಯ(ಇಡಿ)ಕ್ಕೆ ಅನುಮತಿ ನೀಡಿದೆ.

published on : 21st November 2019

ಐಎನ್ಎಕ್ಸ್ ಮೀಡಿಯಾ ಹಗರಣ: ಚಿದಂಬರಂ ನ್ಯಾಯಾಂಗ ಬಂಧನ ಅವಧಿ ನ. 27ರ ವರೆಗೆ ವಿಸ್ತರಣೆ

ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಬಂಧಿತರಾಗಿರುವ ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯ ನವೆಂಬರ್ 27ರ ವರೆಗೆ ವಿಸ್ತರಿಸಿದೆ.

published on : 13th November 2019

ದೆಹಲಿ ಕೋರ್ಟ್​ ನಲ್ಲಿ ಪೊಲೀಸ್​​​-ವಕೀಲರ ನಡುವೆ ಘರ್ಷಣೆ: ಲಾಯರ್​ ಗಳಿಗೆ​ ಗಾಯ, ವಾಹನಕ್ಕೆ ಬೆಂಕಿ

ದೆಹಲಿಯ ತೀಸ್ ಹಜಾರಿ ಕೋರ್ಟ್ ಆವರಣದಲ್ಲಿ ಶನಿವಾರ ಪೊಲೀಸರು ಹಾಗೂ ವಕೀಲರ ನಡುವೆ ನಡೆದ ಘರ್ಷಣೆಯಲ್ಲಿ ಇಬ್ಬರು ವಕೀಲರು ಗಾಯಗೊಂಡಿದ್ದು, ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿಲಾಗಿದೆ...

published on : 2nd November 2019

ಐಎನ್‌ಎಕ್ಸ್ ಮೀಡಿಯಾ ಹಗರಣ: ಚಿದಂಬರಂ ನ್ಯಾಯಾಂಗ ಬಂಧನ ಅವಧಿ ನವೆಂಬರ್ 13ರ ವರೆಗೆ ವಿಸ್ತರಣೆ

ಐಎನ್‌ಎಕ್ಸ್ ಮೀಡಿಯಾ ಹಗರಣ ಸಂಬಂಧ ಬಂಧನಕ್ಕೊಳಗಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ನವೆಂಬರ್ 13ರ ವರೆಗೆ ವಿಸ್ತರಿಸಿ ದೆಹಲಿ ಕೋರ್ಟ್ ಬುಧವಾರ ಆದೇಶಿಸಿದೆ.

published on : 30th October 2019
1 2 3 >