• Tag results for ಪುನರಾರಂಭ

ನಿಯಮ ಮೀರಿ 1-5ನೇ ತರಗತಿ ತೆರೆದ ಶಾಲೆಗಳು: ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸರ್ಕಾರ ಆದೇಶ

ಸರ್ಕಾರದ ಆದೇಶ ಮೀರಿ 1ರಿಂದ 5ನೇ ತರಗತಿವರೆಗಿನ ಮಕ್ಕಳಿಗೂ ತರಗತಿ ಭೋದನೆ ನಡೆಸುತ್ತಿರುವ ಶಾಲೆಗಳ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ರಾಜ್ಯದ ಎಲ್ಲಾ ಜಿಲ್ಲಾ ಉಪನಿರ್ದೇಶಕರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. 

published on : 12th March 2021

ಕೆಲವೇ ದಿನಗಳಲ್ಲಿ ವಿಸ್ಟ್ರಾನ್ ಕಂಪನಿ ಪುನರಾರಂಭ: ಜಗದೀಶ್ ಶೆಟ್ಟರ್

ಕೋಲಾರದ ನರಸಾಪುರದಲ್ಲಿರುವ ವಿಸ್ಟ್ರಾನ್ ಕಂಪನಿಯು ಇನ್ನು ಕೆಲವೇ ದಿನಗಳಲ್ಲಿ ತನ್ನ ಕಾರ್ಯವನ್ನು ಪುನರಾರಂಭಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ.

published on : 19th February 2021

ತಮಿಳುನಾಡಿನಲ್ಲಿ 9 ತಿಂಗಳ ನಂತರ ಜ. 19 ರಿಂದ 10, 12 ತರಗತಿಗಳಿಗೆ ಶಾಲೆ ಪುನರಾರಂಭ

ಮಹಾಮಾರಿ ಕೊರೋನಾ ವೈರಸ್ ಹಿನ್ನಲೆಯಲ್ಲಿ ತಮಿಳುನಾಡಿನಲ್ಲಿ 9 ತಿಂಗಳ ನಂತರ ಜನವರಿ 19ರಿಂದ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಆಫ್ ಲೈನ್ ತರಗತಿಗಳು ಪುನರಾರಂಭವಾಗುತ್ತಿವೆ.

published on : 12th January 2021

ಪಂಜಾಬ್ ನಲ್ಲಿ ನಾಳೆಯಿಂದ 5 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆ ಆರಂಭ

ರಾಜ್ಯದಲ್ಲಿ 5 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಜನವರಿ 7 ರಿಂದ ಎಲ್ಲಾ ಶಾಲೆಗಳನ್ನು ಪುನರಾರಂಭಿಸಲು ಪಂಜಾಬ್ ಸರ್ಕಾರ ಬುಧವಾರ ನಿರ್ಧರಿಸಿದೆ.

published on : 6th January 2021

ಶಾಲಾ, ಕಾಲೇಜು ಪುನರಾರಂಭ; ಕಡ್ಡಾಯ ಮಾಸ್ಕ್ ಧರಿಸಿ, ಸ್ವಚ್ಛತೆ ಪಾಲಿಸಿ ಸರ್ಕಾರದೊಂದಿಗೆ ಸಹಕರಿಸಿ: ಸಿಎಂ ಮನವಿ

ರೂಪಾಂತರಿ ಕೊರೋನಾ ಆತಂಕದ ನಡುವಲ್ಲೇ ರಾಜ್ಯದಲ್ಲಿ ಶಾಲಾ, ಕಾಲೇಜುಗಳು ಪುನರಾರಂಭಗೊಂಡಿದ್ದು, ಈ ಹಿನ್ನೆಲೆಯಲ್ಲಿ ಕಡ್ಡಾಯ ಮಾಸ್ಕ್ ಧರಿಸಿ, ಭೌತಿಕ ಅಂತರ, ಸ್ವಚ್ಛತೆ ಪಾಲಿಸಿ ಸರ್ಕಾರದೊಂದಿಗೆ ಸಹಕರಿಸಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮನವಿ ಮಾಡಿಕೊಂಡಿದ್ದಾರೆ. 

published on : 1st January 2021

ರೂಪಾಂತರಿ ಕೊರೋನಾ ಆತಂಕದ ನಡುವಲ್ಲೇ ರಾಜ್ಯಾದ್ಯಂತ ಎಸ್ಎಸ್ಎಲ್'ಸಿ, ದ್ವಿತೀಯ ಪಿಯುಸಿ ತರಗತಿ ಆರಂಭ

ರೂಪಾಂತರಿ ಕೊರೋನಾ ಆತಂಕದ ನಡುವಲ್ಲೇ ರಾಜ್ಯಾದ್ಯಂತ ಇಂದಿನಿಂದ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಿವೆ. ವಿದ್ಯಾರ್ಥಿಗಳು ಉತ್ಸಾಹ ಮತ್ತು ಆತಂಕದಿಂದಲೇ ತರಗತಿಗಳಿಗೆ ಹಾಜರಾಗುತ್ತಿದ್ದ ದೃಶ್ಯ ಎಲ್ಲೆಡೆ ಕಂಡುಬಂತು.

published on : 1st January 2021

ಕೊರೋನಾ ಓಡಿಸೋಣ, ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ: ಸಚಿವ ಸುಧಾಕರ್

ಬರೋಬ್ಬರಿ 9 ತಿಂಗಳ ಬಳಿಕ ಶುಕ್ರವಾರದಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಪುನರಾರಂಭಗೊಂಡಿದ್ದು, ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಸಚಿವ ಸುಧಾಕರ್ ಅವರು ಕಿವಿಮಾತು ಹೇಳಿದ್ದಾರೆ.

published on : 1st January 2021

ನಿಗದಿಯಂತೆ ಜನವರಿ 1ರಿಂದ 10, 12ನೇ ತರಗತಿ ಆರಂಭ: ಸಂಪುಟ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಸ್ಪಷ್ಟನೆ

ನಿಗದಿಯಂತೆಯೇ ಜನವರಿ 1 ರಿಂದ 10 ಮತ್ತು 12ನೇ ತರಗತಿಗಳನ್ನು ಆರಂಭ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ತಿಳಿಸಿದ್ದಾರೆ. 

published on : 28th December 2020

ಜನವರಿಯಿಂದ ಶಾಲೆಗಳು ಆರಂಭವಾದರೂ ಹಿಂದಿನಂತೆ ಮಕ್ಕಳಿಗಿಲ್ಲ ಬಿಸಿಯೂಟ!

ರಾಜ್ಯದಲ್ಲಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿದ್ದು ಈ ನಡುವಲ್ಲೇ ಜನವರಿ 1 ರಿಂದ ಶಾಲೆಗಳನ್ನು ಪುನರಾರಂಭಿಸಲು ಸರ್ಕಾರ ಸಿದ್ಧತೆಗಳನ್ನು ನಡೆಸುತ್ತಿದೆ. ಆದರೆ, ಶಾಲೆಗಳು ಪುನರಾರಂಭವಾದರೂ ಹಿಂದಿನಂತೆಯೇ ಮಕ್ಕಳಿಗೆ ಬಿಸಿಯೂಟ ಇರುವುದಿಲ್ಲ ಎಂದು ಹೇಳಲಾಗುತ್ತಿದೆ. 

published on : 20th December 2020

ಡಿಸೆಂಬರ್ ಅಂತ್ಯದವರೆಗೆ ಶಾಲಾ ಕಾಲೇಜು ಆರಂಭ ಇಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ

ಆರೋಗ್ಯ ಇಲಾಖೆ ಮತ್ತು ತಾಂತ್ರಿಕ ಸಲಹಾ ಸಮಿತಿ ವರದಿಯನ್ನು ಆಧರಿಸಿದ ಡಿಸೆಂಬರ್ ಅಂತ್ಯದವರೆಗೆ ಶಾಲಾ ಕಾಲೇಜುಗಳನ್ನು ಆರಂಭಿಸುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂ ರಪ್ಪ ತಿಳಿಸಿದ್ದಾರೆ.

published on : 23rd November 2020

ರಾಜ್ಯದಲ್ಲಿ ಶಾಲೆಗಳ ಪುನರಾರಂಭ: ಮುಖ್ಯಮಂತ್ರಿ ನೇತೃತ್ವದಲ್ಲಿ ನಾಳೆ ಮಹತ್ವದ ಸಭೆ

ರಾಜ್ಯದಲ್ಲಿ ಶಾಲೆಗಳ ಪುನರಾರಂಭ ಸಂಬಂಧ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಾಳೆ ಮಹತ್ವದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಶಾಲೆಗಳ ಆರಂಭದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

published on : 22nd November 2020

ಮಹಾರಾಷ್ಟ್ರದಲ್ಲಿ ಸೋಮವಾರದಿಂದ ದೇವಸ್ಥಾನ, ಮಸೀದಿ, ಚರ್ಚ್ ಗಳು ಪುನರಾರಂಭ

ಮಹಾಮಾರಿ ಕೊರೋನಾ ವೈರಸ್ ಹರಡುವುದನ್ನು ತಡೆಯಲು ಕಳೆದ ಮಾರ್ಚ್‌ನಲ್ಲಿ ಲಾಕ್‌ಡೌನ್‌ ಜಾರಿಗೊಳಿಸಿದ ನಂತರ ಬಂದ್ ಆಗಿದ್ದ ಧಾರ್ಮಿಕ ಪೂಜಾ ಸ್ಥಳಗಳನ್ನು ಸೋಮವಾರದಿಂದ ರಾಜ್ಯಾದ್ಯಂತ ಮತ್ತೆ ತೆರೆಯಲಿವೆ...

published on : 14th November 2020

ಮುಂದಿನ ವಾರ ಶಾಲೆ ಪುನರಾರಂಭ ದಿನಾಂಕ ಪ್ರಕಟ

ಶಾಲೆ ಪುನರಾರಂಭ ಕುರಿತು ತರಾತುರಿಯ ನಿರ್ಧಾರ ಕೈಗೊಳ್ಳುವುದಿಲ್ಲ. ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ನಾಲ್ಕೈದು ದಿನಗಳಲ್ಲಿ ಮಾತುಕತೆ ನಡೆಸಲಾಗುವುದು. ನಂತರ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. 

published on : 5th November 2020

ಶಾಲೆ ಪುನರಾರಂಭ ಕುರಿತು ಅಧಿಕಾರಿಗಳೊಂದಿಗೆ ಸುರೇಶ್‌ ಕುಮಾರ್‌ ಸಭೆ, ನ. 6ಕ್ಕೆ ಅಂತಿಮ ನಿರ್ಧಾರ

ರಾಜ್ಯದಲ್ಲಿ ಶಾಲೆಗಳ ಪುನಾರಂಭ ಕುರಿತು ಪೋಷಕರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲ ಉಪನಿರ್ದೇಶಕರ ಜೊತೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್‌ ನ.4ರಿಂದ 6ರವರೆಗೆ ಸಭೆ ನಡೆಸಲಿದ್ದು, 6 ರಂದು ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.

published on : 3rd November 2020

ಮುಂಬೈ- ಮಂಗಳೂರು- ಮುಂಬೈ ಏರ್ ಇಂಡಿಯಾ ವಿಮಾನ ಸೇವೆ ಅ.12 ರಿಂದ ಪುನರಾರಂಭ

ಮುಂಬೈ-ಮಂಗಳೂರು ಮತ್ತು ಮಂಗಳೂರು-ಮುಂಬೈ ನಡುವೆ ಸಾರ್ವಜನಿಕ ಸ್ವಾಮ್ಯದ ಏರ್ ಇಂಡಿಯಾ ತನ್ನ ನೇರ ವಿಮಾನ ಸೇವೆಯನ್ನು ಬರುವ ಸೋಮವಾರದಿಂದ (ಅ.12) ರಿಂದ ಪುನರಾರಂಭಿಸಲಿದೆ.

published on : 10th October 2020
1 2 >