ದೇಶಸಂಸತ್ ಅಧಿವೇಶನ: ಜಿಎಸ್ ಟಿ, ಬೆಲೆ ಏರಿಕೆ ವಿರುದ್ಧ ಪ್ರತಿಪಕ್ಷಗಳ ಗದ್ದಲ; ಉಭಯ ಸದನಗಳ ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ
ಮುಂಗಾರು ಅಧಿವೇಶನದ ಎರಡನೇ ದಿನವಾದ ಇಂದು ಕೂಡಾ ಕೆಲವು ಹೊಸ ಉತ್ಪನ್ನಗಳ ಮೇಲೆ ಜಿಎಸ್ ಟಿ ವಿಧಿಸಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳಾದ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಡಿಎಂಕೆ ಮತ್ತಿತರ ಪಕ್ಷಗಳ ಸದಸ್ಯರು ಭಿತ್ತಿಪತ್ರ ಹಿಡಿದು, ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.