• Tag results for ಪ್ರಧಾನಿ ಮೋದಿ

ನನ್ನಮ್ಮ ಪ್ರತಿ ಬಾರಿ ಫೋನ್ ಮಾಡಿದಾಗ ಆ ವಿಷಯ ಕೇಳುತ್ತಾರೆ: ಪ್ರಧಾನಿ ಮೋದಿ

‘ಫಿಟ್ ನೆಸ್’ ಗೆ ಐಕಾನ್ ಗಳೆಂದು ಪರಿಗಣಿಸಲಾಗುವ ಕೆಲ ಪ್ರಮುಖ ವ್ಯಕ್ತಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ವಿಡಿಯೋ ಕಾನ್ಫರೆನ್ಸ್ ನಡೆಸಿದರು. 

published on : 24th September 2020

ರಾಜ್ಯದಲ್ಲಿ ಕೊರೋನಾ ಸಾವಿನ ಪ್ರಮಾಣ ಕಡಿಮೆಯಾಗುತ್ತಿದೆ: ಪ್ರಧಾನಿ ಮೋದಿಗೆ ಸಿಎಂ ಯಡಿಯೂರಪ್ಪ ಮಾಹಿತಿ

ರಾಜ್ಯದಲ್ಲಿ ಕೊರೋನಾ ಸಾವಿನ ಪ್ರಮಾಣ ಕಡಿಮೆಯಾಗುತ್ತಿದ್ದು, ಜುಲೈ ತಿಂಗಳಿನಲ್ಲಿ ಶೇ.2.6ರಷ್ಟಿದ್ದ ಸಾವಿನ ಪ್ರಮಾಣ ಇದೀಗ ಶೇ.1.54ಕ್ಕೆ ಇಳಿದಿದೆ ಎಂದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ರಾಜ್ಯ ಕೊರೋನಾ ಪರಿಸ್ಥಿತಿ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಮಾಹಿತಿ ನೀಡಿದ್ದಾರೆ. 

published on : 24th September 2020

ಬಿ ಎಸ್ ಯಡಿಯೂರಪ್ಪ ಸೇರಿ 7 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅತೀ ಹೆಚ್ಚು ಕೇಸು ದಾಖಲಾಗಿರುವ ಕರ್ನಾಟಕ ಸೇರಿದಂತೆ 7 ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರ ಜೊತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಆನ್'ಲೈನ್ ಸಭೆ ನಡೆಸಲಿದ್ದಾರೆ. 

published on : 23rd September 2020

ಕನಿಷ್ಟ ಬೆಂಬಲ ಬೆಲೆ ವ್ಯವಸ್ಥೆ, ಕೃಷಿ ಉತ್ಪನ್ನಗಳ ಖರೀದಿ ಪ್ರಕ್ರಿಯೆ ಮುಂದುವರಿಯಲಿದೆ: ರೈತರಿಗೆ ಪ್ರಧಾನಿ ಮೋದಿ ಭರವಸೆ

ಕೃಷಿ ಬೆಳೆಗಳ ಕನಿಷ್ಟ ಬೆಂಬಲ ಬೆಲೆ ವ್ಯವಸ್ಥೆ, ಕೃಷಿ ಉತ್ಪನ್ನಗಳ ಖರೀದಿ ಪ್ರಕ್ರಿಯೆ ಮುಂದುವರಿಯಲಿದೆ ಎಂದು ಪ್ರಧಾನಿ ಮೋದಿ ರೈತರಿಗೆ ಭರವಸೆ ನೀಡಿದ್ದಾರೆ.

published on : 21st September 2020

ರೈತರ ಸೇವೆಗೆ ಸರ್ಕಾರ ಮುಡಿಪು: ಮೋದಿ ಭರವಸೆ

ರಾಜ್ಯಸಭೆಯಲ್ಲಿ ಎರಡು ಕೃಷಿ ಮಸೂದೆಗಳು ಅಂಗೀಕಾರವಾದ ಹಿನ್ನೆಲೆಯಲ್ಲಿ  ಪ್ರಧಾನಮಂತ್ರಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದು, ಎಂಎಸ್ಪಿ (ಕನಿಷ್ಠ ಬೆಂಬಲ ಬೆಲೆ) ಮುಂದುವರೆಯಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

published on : 20th September 2020

ಬಿಹಾರ: ಕೋಸಿ ರೈಲು ಮಹಾ ಸೇತುವೆ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

ಬಿಹಾರದ ಬಹು ನಿರೀಕ್ಷಿತ ಕೋಸಿ ರೈಲು ಮಹಾ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಲೋಕಾರ್ಪಣೆ ಮಾಡಿದ್ದಾರೆ.

published on : 18th September 2020

ಹಲವು ತಿಂಗಳ ನಂತರ ಪ್ರಧಾನಿ ಭೇಟಿಯಾದ ಮುಖ್ಯಮಂತ್ರಿ ಬಿಎಸ್ ವೈ, ಸಂಪುಟ ವಿಸ್ತರಣೆಗೆ ಅನುಮತಿ ಕೋರಿಕೆ

ಹಲವು ತಿಂಗಳ ವಿಫಲ ಪ್ರಯತ್ನ ಮತ್ತು ಮುಂದೂಡಿಕೆಗಳ ನಂತರ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು.

published on : 18th September 2020

ಅಭಿವೃದ್ಧಿ ಕುರಿತು ಚರ್ಚಿಸಲು ಪ್ರಧಾನಿ ಭೇಟಿ; ಅನಗತ್ಯವಾಗಿ ವಿಜಯೇಂದ್ರ ಹೆಸರು ಎಳೆದುತಂದು ಪಿತೂರಿ: ಸಿಎಂ ಯಡಿಯೂರಪ್ಪ

ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಕುರಿತು ಚರ್ಚಿಸಲು ತಾವು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ಹಲವು ಸಚಿವರನ್ನು ಭೇಟಿ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಇಂದಿಲ್ಲಿ ತಿಳಿಸಿದರು.

published on : 18th September 2020

ನಾನು ವೃತ್ತಿಪರ ಬರಹಗಾರನಲ್ಲ...ಆದರೆ ಭಾವನೆಗಳು ಅರ್ಥವಾಗುತ್ತವೆ: ಲೆಟರ್‌ ಟು ಮದರ್‌ ಪುಸ್ತಕದಲ್ಲಿ ಮೋದಿ

"ನಾನು ವೃತ್ತಿಪರ ಬರಹಗಾರನಲ್ಲ...ಆದರೆ, ನನಗೆ ಭಾವನೆಗಳು ಅರ್ಥವಾಗುತ್ತವೆ. ನಾನು ಬರೆಯುತ್ತೇನೆ ಏಕೆಂದರೆ ನಾನು ಭಾವತೀವ್ರತೆಯನ್ನು ಹೊಂದಿದ್ದೇನೆ"...

published on : 17th September 2020

ಪ್ರಧಾನಿ ಮೋದಿಯ 70ನೇ ಜನ್ಮದಿನವನ್ನು 'ನಿರುದ್ಯೋಗ ದಿನ' ಎಂದು ಟೀಕಿಸಿದ ಪ್ರಿಯಾಂಕಾ ವಾದ್ರಾ

ಪ್ರಧಾನಿ ನರೇಂದ್ರ ಮೋದಿಯವರ 70ನೇ ಜನ್ಮದಿನವನ್ನು 'ನಿರುದ್ಯೋಗ ದಿನ' ಎಂದು ಟೀಕಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ಸರ್ಕಾರ ಇನ್ನೂ ಕಣ್ಣು ಮುಚ್ಚಿ ಕುಳಿತಿದ್ದರೆ, ಯುವಕರು ಸರ್ಕಾರವನ್ನು ಬದಲಾಯಿಸುತ್ತಾರೆ ಎಂದು ಗುರುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

published on : 17th September 2020

ಪ್ರಧಾನಿ ಮೋದಿ ಹುಟ್ಟುಹಬ್ಬ: 'ನಮೋ ಬಗ್ಗೆ ತಿಳಿಯಿರಿ' ರಸಪ್ರಶ್ನೆ ಸ್ಪರ್ಧೆ ಆಯೋಜಿಸಿದ ಬಿಜೆಪಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 70ನೇ ಹುಟ್ಟಹಬ್ಬ ಹಿನ್ನೆಲೆಯಲ್ಲಿ ಬಿಜೆಪಿಯು ‘ನಮೋ ಬಗ್ಗೆ ತಿಳಿಯಿರಿ’ ರಸಪ್ರಶ್ನೆ ಸ್ಪರ್ಧೆಯನ್ನು ಗುರುವಾರ ಆಯೋಜಿಸಿದೆ. 

published on : 17th September 2020

 ನರೇಂದ್ರ ಮೋದಿ ಆಡಳಿತದಲ್ಲಿ ನಿರುದ್ಯೋಗ ಪರ್ವ ನಿರಾಂತಕವಾಗಿ ಮುಂದುವರಿಕೆ: ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ನಿರುದ್ಯೋಗ ಪರ್ವ ನಿರಾಂತಕವಾಗಿ ಮುಂದುವರೆದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

published on : 17th September 2020

ಪ್ರಧಾನಿಗೆ 70ನೇ ಹುಟ್ಟುಹಬ್ಬದ ಸಂಭ್ರಮ: ಗಣ್ಯರಿಂದ ಶುಭ ಹಾರೈಕೆ

 ಪ್ರಧಾನಿ ನರೇಂದ್ರ ಮೋದಿಗೆ 70ನೇ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್,  ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಕೇಂದ್ರ ಸರ್ಕಾರದ ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.

published on : 17th September 2020

70ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಪ್ರಧಾನಿ ಮೋದಿ: ನೇಪಾಳ ಪ್ರಧಾನಿ, ರಷ್ಯಾ ಅಧ್ಯಕ್ಷರು ಸೇರಿದಂತೆ ಗಣ್ಯರಿಂದ ಶುಭಾಶಯ

ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು 70ನೇ ಹುಟ್ಟುಹಬ್ಬದ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ನೇಪಾಳ, ರಷ್ಯಾ ಅಧ್ಯಕ್ಷರು ಸೇರಿದಂತೆ ಬಹುತೇಕ ದೇಶದ ನಾಯಕರು ಶುಭಾಶಯಗಳನ್ನು ಕೋರುತ್ತಿದ್ದಾರೆ.  

published on : 17th September 2020

ಜಪಾನ್‌ನ ಹೊಸ ಪ್ರಧಾನಿಯಾಗಿ ಯೊಶಿಹಿಡೆ ಅಧಿಕೃತ ಆಯ್ಕೆ: ಪ್ರಧಾನಿ ಮೋದಿ ಶುಭಾಶಯ

ಜಪಾನ್‌ನ ಪ್ರಧಾನಮಂತ್ರಿಯಾಗಿ ಯೊಶಿಹಿಡೆ ಸುಗಾ ಅಧಿಕೃತವಾಗಿ ಆಯ್ಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಶುಭಾಶಯಗಳನ್ನು ಕೋರಿದ್ದಾರೆ.

published on : 16th September 2020
1 2 3 4 5 6 >