ರಾಜ್ಯಚಾಮರಾಜನಗರ: ಬಂಡೀಪುರ ಅರಣ್ಯ ರಸ್ತೆಯಲ್ಲಿ ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಪಲ್ಟಿ; 24 ಮಂದಿಗೆ ಗಾಯ
ಚಾಮರಾಜನಗರ ಜಿಲ್ಲೆಯ ಬಂಡೀಪುರ ಅರಣ್ಯ ರಸ್ತೆಯಲ್ಲಿ ಪಶ್ಚಿಮ ಬಂಗಾಳದ ಪ್ರವಾಸಿ ಬಸ್ ಪಲ್ಟಿ ಹೊಡೆದ ಪರಿಣಾಮ 24 ಜನರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ತಮಿಳುನಾಡಿನ ಊಟಿ ಗಿರಿಧಾಮದಿಂದ ಬರುತ್ತಿದ್ದ ಬಸ್ಸು ಕರ್ನಾಟಕದ ಮೈಸೂರಿಗೆ ತೆರಳುತ್ತಿತ್ತು.