ಬ್ರಾಡ್ ವೇ ಆಸ್ಪತ್ರೆ

ಬ್ರಾಡ್ ವೇ ಕೋವಿಡ್ ಆಸ್ಪತ್ರೆ 2 ವಾರದೊಳಗೆ ಕಾರ್ಯಾರಂಭ- ಡಾ.ಸುಧಾಕರ್
ಶಿವಾಜಿನಗರದ ಬ್ರಾಡ್ ವೇ ಆಸ್ಪತ್ರೆಯನ್ನು 200 ಹಾಸಿಗೆಗಳ ಕೋವಿಡ್ ಆಸ್ಪತ್ರೆಯಾಗಿ ಸಜ್ಜುಗೊಳಿಸಲಾಗುತ್ತಿದೆ. ಇದರ ಸಮರ್ಪಕ ನಿರ್ವಹಣೆಗೆ ಅಗತ್ಯವಿರುವ ವೈದ್ಯರು, ನರ್ಸ್ ಪಾರಾ ಮೆಡಿಕಲ್ ಮತ್ತು ಇತರೆ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು ಇನ್ನು 2 ವಾರದೊಳಗೆ ಕಾರ್ಯಾರಂಭ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಸುಸಜ್ಜಿತ ಕೋವಿಡ್ ಆಸ್ಪತ್ರೆಯಾಗಿ ರೂಪುಗೊಳ್ಳುತ್ತಿದೆ ಬೆಂಗಳೂರಿನ ಬ್ರಾಡ್ ವೇ ಆಸ್ಪತ್ರೆ: ಅಗತ್ಯ ಸಿಬ್ಬಂದಿ ನೇಮಿಸಲು ಸೂಚನೆ
ಶಿವಾಜಿನಗರದ ಬ್ರಾಡ್ ವೇ ರಸ್ತೆಯಲ್ಲಿರುವ ಬಿಬಿಎಂಪಿಗೆ ಸೇರಿದ ಕಟ್ಟಡವನ್ನು ಸುಸಜ್ಜಿತ ಕೋವಿಡ್ ಆಸ್ಪತ್ರೆಯಾಗಿ ಸಜ್ಜುಗೊಳಿಸಲಾಗುತ್ತಿದೆ. ಇಲ್ಲಿಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಸುಧಾಕರ್ ಅವರು, ಆಸ್ಪತ್ರೆಗೆ ಅಗತ್ಯವಿರುವ 30 ಕೋಟಿ ವೆಚ್ಚದ ಮೂಲಸೌಕರ್ಯವನ್ನು ಪ್ರತಿಷ್ಠಿತ ಇನ್ಫೋಸಿಸ್ ಫೌಂಡೇಷನ್ನಿನಿಂದ ಒದಗಿಸಲಾಗುತ್ತಿದ್ದು ಶೀಘ್ರದಲ್ಲೇ ಪೂರ್ಣ ಪ್ರಮಾಣದ ಕೋವಿಡ್ ಆಸ್ಪತ್ರೆಯಾಗಿ ರೂಪುಗೊಳ್ಳಲಿದೆ ಎಂದು ತಿಳಿಸಿದರು.

