• Tag results for ಯಡಿಯೂರಪ್ಪ

ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾ, ಕಾವೇರಿ ನಿವಾಸ ಸಿಬ್ಬಂದಿಗೆ ಕೊರೋನಾ: ಕಾವೇರಿಯಲ್ಲಿ ಸಿಎಂ ಕ್ವಾರಂಟೈನ್!

ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರಿಗೂ ಕೊರೋನಾ ಆತಂಕ ತಟ್ಟಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಯಡಿಯೂರಪ್ಪ ಭಾಗವಹಿಸಬೇಕಾಗಿದ್ದ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ. 

published on : 10th July 2020

ಕೆಪಿಎಸ್ ಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಪ್ರತಿ ನೀಡುವಂತೆ ಸಿಎಂಗೆ ಸಿದ್ದರಾಮಯ್ಯ ಒತ್ತಾಯ

ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮುಖ್ಯ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳಿಗೆ ಉತ್ತರ ಪತ್ರಿಕೆಗಳ ದೃಢೀಕೃತ ಪ್ರತಿ ನೀಡಲು ನಿರಾಕರಿಸುತ್ತಿರುವ ಕೆಪಿಎಸ್‌ಸಿ (ಕರ್ನಾಟಕ ಲೋಕಸೇವಾ ಆಯೋಗ) ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

published on : 10th July 2020

ದೇಶದಲ್ಲೇ ಅತೀದೊಡ್ಡ ಕೋವಿಡ್ ಆಸ್ಪತ್ರೆ ಬೆಂಗಳೂರಿನಲ್ಲಿ: 10,100 ಹಾಸಿಗೆಯುಳ್ಳ ಆರೈಕೆ ಕೇಂದ್ರ ವಾರದಲ್ಲಿ ಕಾರ್ಯಾರಂಭ

ಬೆಂಗಳೂರು ತುಮಕೂರು ರಸ್ತೆಯಲ್ಲಿರುವ ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ನಿರ್ಮಾಣಗೊಂಡಿರುವ 10,100 ಹಾಸಿಗೆ ಸಾಮರ್ಥ್ಯದ ದೇಶದ ಅತೀ ದೊಡ್ಡ ಕೋವಿಡ್ ಆರೈಕೆ ಕೇಂದ್ರವನ್ನು ವಾರದಲ್ಲಿ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ. 

published on : 10th July 2020

ತಹಸೀಲ್ದಾರ್ ಹತ್ಯೆ: 25 ಲಕ್ಷ ರೂ. ಪರಿಹಾರ, ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ನೀಡಲು ಮುಖ್ಯಮಂತ್ರಿ ಆದೇಶ

ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರ್ ಬಿ.ಕೆ.ಚಂದ್ರಮೌಳೇಶ್ವರ ಅವರು ಕರ್ತವ್ಯ ನಿರತ ಸಂದರ್ಭದಲ್ಲಿ ಹತ್ಯೆಯಾಗಿದ್ದು, ಈ ಸಂಬಂಧ  ಸರ್ಕಾರಿ ನೌಕರರಿಗೆ ಅಗತ್ಯ ರಕ್ಷಣಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ.

published on : 10th July 2020

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕೊರೋನಾ ಪರಿಸ್ಥಿತಿ ನಿಯಂತ್ರಣ ತಪ್ಪಿದೆ: ಕಡೆಗೂ ಸತ್ಯ ಒಪ್ಪಿಕೊಂಡ ಸಿಎಂ ಯಡಿಯೂರಪ್ಪ 

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕೊರೋನಾ ಹಾವಳಿ ನಿಯಂತ್ರಣ ತಪ್ಪುತ್ತಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಒಪ್ಪಿಕೊಂಡಿದ್ದಾರೆ.

published on : 9th July 2020

ತಪ್ಪುಗಳನ್ನು ತಿದ್ದಿಕೊಳ್ಳದೆ ಇದ್ದಾಗ ಬಹಿರಂಗವಾಗಿ ಪ್ರಶ್ನಿಸುವುದು ಅನಿವಾರ್ಯ: ಸರ್ಕಾರಕ್ಕೆ ಸಿದ್ದರಾಮಯ್ಯ ಚಾಟಿ

ಜನತೆಯ ಕಷ್ಟ-ನಷ್ಟಕ್ಕೆ ಕಾರಣವಾದ ಪ್ರಭುತ್ವದ ಜನವಿರೋಧಿ ನಡವಳಿಕೆಗಳಿಗೆ ಸಹಕರಿಸುವುದು ಜನದ್ರೋಹವಾಗುತ್ತದೆ. ಜವಾಬ್ದಾರಿ ವಿರೋಧ ಪಕ್ಷವಾಗಿ ನಾವು ಜನರ ಪರ, ಸರ್ಕಾರದ ಪರ ಅಲ್ಲ ಎಂದು ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟದ ಸೂಚನೆಯನ್ನು ನೀಡಿದ್ದಾರೆ.

published on : 9th July 2020

ಬೆಂಗಳೂರಿನಲ್ಲಿ 600 ಆಂಬುಲೆನ್ಸ್ ವ್ಯವಸ್ಥೆ ಮಾಡಲು ನಿರ್ಧಾರ: ಮುಖ್ಯಮಂತ್ರಿ ಯಡಿಯೂರಪ್ಪ

ಬಿಐಇಸಿಯಲ್ಲಿ 10 ಸಾವಿರ ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್‌ಗೆ ಸಂಜೆ ಭೇಟಿ ನೀಡುತ್ತೇನೆ. ಹೆಚ್ಚುವರಿಯಾಗಿ 280 ಆಂಬುಲೆನ್ಸ್ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಒಟ್ಟು 600 ಆಂಬುಲೆನ್ಸ್ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದ್ದು,

published on : 9th July 2020

ಅನಕೃ ಪುಣ್ಯಸ್ಮರಣೆ: ಮುಖ್ಯಮಂತ್ರಿ ಯಡಿಯೂರಪ್ಪ ಗೌರವ ನಮನ

ನಾಡು-ನುಡಿಗಳಿಗಾಗಿ ಹೋರಾಡಿದ ಅಗ್ರಗಣ್ಯ ಸಾಹಿತಿ, ಪತ್ರಕರ್ತ ಅನಕೃ ಪುಣ್ಯಸ್ಮರಣೆಯಂದು ಅವರಿಗೆ ನಮನಗಳನ್ನು ಸಲ್ಲಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

published on : 8th July 2020

ಕೊರೋನಾ ಸೋಂಕಿತರ ಹೆಚ್ಚಳ ಹಿನ್ನಲೆ: ಬೆಳ್ಳಂಬೆಳಗ್ಗೆ ಅಧಿಕಾರಿಗಳ ಸಭೆ ನಡೆಸಿದ ಸಿಎಂ ಬಿಎಸ್ ಯಡಿಯೂರಪ್ಪ

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ ಹಿನ್ನಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು ಬೆಳ್ಳಂ ಬೆಳಗ್ಗೆಯೇ ತಮ್ಮ ನಿವಾಸದಲ್ಲಿ ಉಪಮುಖ್ಯಮಂತ್ರಿಗಳು, ಸಚಿವರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು.

published on : 8th July 2020

ನೇಕಾರರಿಗೆ ನೇರ ನಗದು ವರ್ಗಾವಣೆಗೆ ಸಿಎಂ ಚಾಲನೆ: ಪ್ರತಿ ನೇಕಾರರಿಗೆ ರೂ.2,000 ಆರ್ಥಿಕ ನೆರವು

ನೇಕಾರ್ ಸಮ್ಮಾನ್ ಯೋಜನೆಯಡಿ ರಾಜ್ಯದ ನೇಕಾರರಿಗೆ ನೇರ ನಗದು ವರ್ಗಾವಣೆಗೆ ಚಾಲನೆ ಸಿಕ್ಕಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಾಲನೆ ನೀಡಿದ್ದಾರೆ. 

published on : 7th July 2020

ಲಾಕ್'ಡೌನ್ ಇಲ್ಲ, ವೈರಸ್ ಜೊತೆಗೆ ಬದುಕುವುದನ್ನು ಕಲಿಯಿರಿ: ಬೆಂಗಳೂರಿಗರಿಗೆ ಸಿಎಂ ಯಡಿಯೂರಪ್ಪ

ಮತ್ತೊಮ್ಮೆ ಲಾಕ್'ಡೌನ್ ಮಾಡುವುದಿಲ್ಲ. ಭಯ ಬೇಡ. ಸಾಕಷ್ಟು ಮುಂಜಾಗ್ರತೆಯೊಂದಿಗೆ ಜನರು ವೈರಸ್ ಜೊತೆಗೆ ಬದುಕುವುದನ್ನು ಕಲಿಯಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ. 

published on : 7th July 2020

ಗುತ್ತಿಗೆ ಆಧಾರದ ಮೇಲೆ ನೀಡಿದ ಸರ್ಕಾರಿ ಜಮೀನು ಖಾಯಂ ಆಗಿ ಮಂಜೂರು ಮಾಡಲು ಆದೇಶ

ಖಾಸಗಿ ಸಂಘ ಸಂಸ್ಥೆಗಳಿಗೆ ವಿವಿಧ ಉದ್ದೇಶಗಳಿಗೆ ಗುತ್ತಿಗೆ ಆಧಾರದ ಮೇಲೆ ನೀಡಲಾಗಿರುವ ಸರ್ಕಾರಿ ಜಮೀನುಗಳನ್ನು ಗುತ್ತಿಗೆ ಪಡೆದ ಸಂಸ್ಥೆಗೆ ಖಾಯಂ ಆಗಿ ಮಂಜೂರು ಮಾಡುವ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.

published on : 7th July 2020

ಕೊರೋನಾ ವಿರುದ್ಧ ಹೋರಾಟ: ಕೇಂದ್ರ ತಂಡದಿಂದ ಸಿಎಂ ಭೇಟಿ

ರಾಜಧಾನಿ ಬೆಂಗಳೂರಿನಲ್ಲಿ ನಿಯಂತ್ರಣ ಮೀರಿ ಹಬ್ಬುತ್ತಿರುವ ಕೊರೊನಾ ವಿರುದ್ಧ ಹೋರಾಡಲು ಕರ್ನಾಟಕ ಸರ್ಕಾರ ಯಾವ ಕ್ರಮಗಳನ್ನು ಕೈಗೊಂಡಿದೆ ಎಂಬುದರ ಬಗ್ಗೆ ಮಾಹಿತಿ ಪಡೆಯಲು ಕೇಂದ್ರ ಸರ್ಕಾರದ ತಂಡವೊಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿದೆ.

published on : 7th July 2020

ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ, ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ: ಮುಖ್ಯಮಂತ್ರಿ, ಸಚಿವರಿಂದ ಗೌರವ ನಮನ

ಹಸಿರುಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ ರಾಮ್ ಅವರ ಪುಣ್ಯಸ್ಮರಣೆಯಂದು ಅವರಿಗೆ ನಮನಗಳನ್ನು ಸಲ್ಲಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ಸಲ್ಲಿಸಿದ್ದಾರೆ.

published on : 6th July 2020

ಸಂಡೇ ಲಾಕ್ ಡೌನ್: ಕಾವೇರಿಯಲ್ಲೇ ದಿನ ಕಳೆದ ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್​ ಆರ್ಭಟ ಮುಂದುವರಿದಿದೆ. ಈ ಕೋವಿಡ್​​-19 ಸೋಂಕಿಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಇದರ ನಿಯಂತ್ರಣಕ್ಕೆ ಪುನಃ ಸರ್ಕಾರ ಸಂಡೇ ಲಾಕ್​ಡೌನ್ ಮಾಡಲು ನಿರ್ಧಾರ ಮಾಡಿದೆ. 

published on : 6th July 2020
1 2 3 4 5 6 >