• Tag results for ರಸ್ತೆ ಅಪಘಾತ

ಯಲ್ಲಾಪುರ: ಸ್ಕೂಟರ್- ಟ್ಯಾಂಕರ್ ಡಿಕ್ಕಿ: ತಂದೆ, ಮಗಳ ಸಾವು

ಸ್ಕೂಟರ್, ಗ್ಯಾಸ್ ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಮಂಗಳವಾರ ಸಂಭವಿಸಿದೆ.

published on : 29th September 2020

ಅಪಘಾತ ನಡೆದ ಸ್ಥಳದಲ್ಲೇ ದತ್ತಾಂಶ ಸಂಗ್ರಹಣೆಗೆ ಮೊಬೈಲ್ ಅಪ್ಲಿಕೇಷನ್ ಶೀಘ್ರ

ಇಂಟಿಗ್ರೇಟೆಡ್ ರೋಡ್ ಆಕ್ಸಿಡೆಂಟ್ ಡೇಟಾಬೇಸ್ (ಐಆರ್ಎಡಿ) ಮೊಬೈಲ್ ಅಪ್ಲಿಕೇಶನ್ ಶೀಘ್ರದಲ್ಲೇ ಬಿಡುಗಡೆಯಾಗಲಿದ್ದು ಅಪಘಾತ ಪ್ರಕರಣದ ದತ್ತಾಂಶಗಳನ್ನು ಸ್ಥಳದಲ್ಲೇ ಸಂಗ್ರಹಿಸಲು ಸಾಧ್ಯವಾಗಲಿದೆ.

published on : 21st September 2020

ಚಿಕ್ಕಬಳ್ಳಾಪುರ: ಕಾರಿಗೆ ಲಾರಿ ಡಿಕ್ಕಿ, ತಾಯಿ-ಮಕ್ಕಳ ದುರ್ಮರಣ

ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿ, ತಂದೆ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಕಳೆದ ರಾತ್ರಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ  ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಪ್ಯಾಯಲಗುರ್ಕಿ ಬಳಿ ನಡೆದಿದೆ.

published on : 15th September 2020

ಮಂಡ್ಯ, ಮೈಸೂರಿನಲ್ಲಿ ಪ್ರತ್ಯೇಕ ಅಪಘಾತ: ಮೂವರು ಸಾವು

ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಮೂವರು ಮೃತಪಟ್ಟು ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

published on : 13th September 2020

ರಾಯಚೂರು: ಅಂತ್ಯಕ್ರಿಯೆ ಮುಗಿಸಿ ಬರುವಾಗ ಭೀಕರ ಅಪಘಾತ. 3 ಸಾವು

ಲಾರಿ-ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ದೇವದುರ್ಗ ತಾಲೂಕಿನ ಚಿಂಚೋಡಿ ಬಳಿ ನಡೆದಿದೆ.   

published on : 4th September 2020

ಪ್ಲಾಸ್ಮಾ ತೆಗೆದುಕೊಂಡು ಹೋಗುತ್ತಿದ್ದಾಗ ಅಪಘಾತ, ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ನವಜಾತ ಶಿಶು ಸಾವು!

ಒಂದು ಭೀಕರ ಘಟನೆಯಲ್ಲಿ, ತಮ್ಮ  ನವಜಾತ ಶಿಶುವಿಗೆ ಪ್ಲಾಸ್ಮಾ ಸಾಗಿಸುತ್ತಿದ್ದ ಕುಟುಂಬದ ಮೂವರು ಅಪಘಾತದಲ್ಲಿ ಗಾಯಗೊಂಡ ಪರಿಣಾಮ ಸಮಯಕ್ಕೆ ಸರಿಯಾಗಿ ಪ್ಲಾಸ್ಮಾ ದೊರಕದೆ ಮಗು ದುರಂತ ಸಾವಿಗೀಡಾದ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

published on : 14th July 2020

ಚಾಮರಾಜನಗರ: ಬೊಲೆರೋ ವಾಹನ ಪಲ್ಟಿ, 3 ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

ಬೊಲೆರೋ ಪಿಕ್ ಅಪ್ ವಾಹನವೊಂದು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿ ಹದಿನೈದಕ್ಕೆ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರುವಿನಲ್ಲಿ ನಡೆದಿದೆ.

published on : 15th June 2020

ಚೆನ್ನಗಿರಿ: ರಸ್ತೆ ಅಪಘಾತದಲ್ಲಿ ಮೂವರು ಸಾವು

ಚನ್ನಗಿರಿ ಸಮೀಪ ದ್ವಿಚಕ್ರ ವಾಹನವೊಂದಕ್ಕೆ ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟಿದ್ದಾರೆ.

published on : 11th June 2020

ಕೊಪ್ಪಳ: ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ, ಹೆಣ್ಣು ಚಿರತೆ ಸ್ಥಳದಲ್ಲೇ ಸಾವು

ರಸ್ತೆ ದಾಟುತ್ತಿದ್ದ ಚಿರತೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಹೇಮಗುಡ್ಡ ಗ್ರಾಮದ ಬಳಿ ಇಂದು ನಡೆದಿದೆ. 

published on : 5th June 2020

ಕೋಲಾರ: ಭೀಕರ ರಸ್ತೆ ಅಪಘಾತ ಇಬ್ಬರು ಸವಾರರು ಸಾವು

ಬೈಕ್‌ ಮತ್ತು ಸರಕು ಸಾಗಣೆ ವಾಹನದ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಕೋಡಿಕಣ್ಣೂರು ಕೆರೆ ಏರಿಯಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ.

published on : 26th May 2020

ಉತ್ತರ ಪ್ರದೇಶ ಮೂಲದ ವಲಸೆ ಕಾರ್ಮಿಕರು ಅಪಘಾತದಲ್ಲಿ ಸಾವು: ಸರ್ಕಾರದಿಂದ ತಲಾ 2 ಲಕ್ಷ ರೂ. ಪರಿಹಾರ

ಮಧ್ಯ ಪ್ರದೇಶದ ಗುನಾ ಎಂಬಲ್ಲಿ ಕಳೆದ ರಾತ್ರಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ವಲಸೆ ಕಾರ್ಮಿಕರ ಕುಟುಂಬಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಂಭೀರ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಪ್ರಕಟಿಸಿದ್ದಾರೆ.

published on : 14th May 2020

ಎರಡು ಪ್ರತ್ಯೇಕ ರಸ್ತೆ ಅಪಘಾತ: 14 ಮಂದಿ ವಲಸೆ ಕಾರ್ಮಿಕರು ಸಾವು

ವಲಸೆ ಕಾರ್ಮಿಕರು ಮಾರ್ಗ ಮಧ್ಯೆ ತಮ್ಮೂರಿಗೆ ಹೋಗುತ್ತಿರುವಾಗ ಸಾಯುವ ಪ್ರಕರಣ ಮುಂದುವರಿದಿದೆ. ಕಳೆದ ತಡರಾತ್ರಿ ಮುಜಾಫರ್ ನಗರ-ಶಹರಾನ್ ಪುರ ಹೆದ್ದಾರಿಯಲ್ಲಿ 6 ಮಂದಿ ವಲಸೆ ಕಾರ್ಮಿಕರು ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬರುತ್ತಿದ್ದ ಬಸ್ ಹರಿದು ಮೃತಪಟ್ಟಿದ್ದಾರೆ.

published on : 14th May 2020

ಬೆಳಗಾವಿ: ಬೈಕ್, ಬುಲೆರೋ ಮುಖಾಮುಖಿ ಡಿಕ್ಕಿ, ಯೋಧ ಸಾವು

ದ್ವಿಚಕ್ರ ವಾಹನ ಹಾಗೂ ಬುಲೆರೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಯೋಧರೊಬ್ಬರು ಮೃತಪಟ್ಟಿದ್ದು, ಓರ್ವನಿಗೆ ಗಂಭೀರ ಗಾಯವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸೌದತ್ತಿ ಸಮೀಪ ನಡೆದಿದೆ.

published on : 5th May 2020

ರಾಮನಗರ: ಅಪಘಾತದಲ್ಲಿ ಕರ್ತವ್ಯನಿರತ ಪತ್ರಕರ್ತ ಸಾವು; ಎಚ್.ಡಿ. ಕುಮಾರಸ್ವಾಮಿ 5 ಲಕ್ಷ ರೂ. ಪರಿಹಾರ ಘೋಷಣೆ

ಕರ್ತವ್ಯನಿರತ ಖಾಸಗಿ ಸುದ್ದಿವಾಹಿನಿಯ ಪತ್ರಕರ್ತರೊಬ್ಬರು ಅಪಘಾತಕ್ಕೀಡಾಗಿ ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.

published on : 21st April 2020

ಹುಕ್ಕೇರಿ: ಪಾದಚಾರಿಗಳ ಮೇಲೆ ಹರಿದ ಬೊಲೆರೋ ವಾಹನ, ಸ್ಥಳದಲ್ಲೇ ಮೂವರು ಸಾವು

ಬೊಲೊರೋ ಜೀಪೊಂದು ಪಾದಾಚಾರಿಗಳ ಮೇಲೆ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿಯ ಹುಕ್ಕೇರಿಯಲ್ಲಿ ನಡೆದಿದೆ.

published on : 28th March 2020
1 2 3 4 5 6 >