• Tag results for ರಾಜ್ಯಪಾಲ

ಮಧ್ಯಪ್ರದೇಶ: ಗವರ್ನರ್ ಲಾಲ್ ಜೀ ಟಂಡನ್ ಆರೋಗ್ಯದಲ್ಲಿ ಚೇತರಿಕೆ

ಮಧ್ಯಪ್ರದೇಶ ರಾಜ್ಯಪಾಲ ಲಾಲ್ ಜೀ ಟಂಡನ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆಯಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

published on : 20th June 2020

ಮಧ್ಯ ಪ್ರದೇಶ ರಾಜ್ಯಪಾಲ ಲಾಲ್ ಜೀ ಟಂಡನ್ ಆರೋಗ್ಯ ಗಂಭೀರ, ಆದರೂ ಚಿಕಿತ್ಸೆಗೆ ಸ್ಪಂದನೆ: ಆಸ್ಪತ್ರೆ ಹೇಳಿಕೆ

ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆ ಸೇರಿರುವ ಮಧ್ಯ ಪ್ರದೇಶ ರಾಜ್ಯಪಾಲ ಲಾಲ್ ಜೀ ಟಂಡನ್ ಅವರ ಆರೋಗ್ಯ ಗಂಭೀರವಾಗಿದೆಯಾದರೂ, ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಆಸ್ಪತ್ರೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

published on : 18th June 2020

ಮಧ್ಯ ಪ್ರದೇಶ ರಾಜ್ಯಪಾಲ ಲಾಲ್ ಜಿ ಟಂಡನ್ ಸ್ಥಿತಿ ಗಂಭೀರ, ವೆಂಟಿಲೇಟರ್ ಅಳವಡಿಕೆ

ಮಧ್ಯ ಪ್ರದೇಶ ರಾಜ್ಯಪಾಲ ಲಾಲ್ ಜಿ ಟಂಡನ್ ಅವರು ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಮತ್ತು ವೆಂಟಿಲೇಟರ್ ಅಳವಡಿಸಲಾಗಿದೆ ಎಂದು ಸೋಮವಾರ ವೈದ್ಯರು ತಿಳಿಸಿದ್ದಾರೆ.

published on : 16th June 2020

ಬಿಡಿಎ ಅಕ್ರಮ ಸೈಟ್‌ಗಳಿಗೆ ಸಕ್ರಮ ಭಾಗ್ಯ: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸ್ವಾಧೀನಪಡಿಸಿಕೊಂಡ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಮನೆಗಳನ್ನು ಸಕ್ರಮಗೊಳಿಸುವ ಬಿಡಿಎ ಕಾಯ್ದೆ ತಿದ್ದುಪಡಿಗಾಗಿ  ಸರ್ಕಾರ ಹೊರಡಿಸಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ. ಮನೆ ನಿರ್ಮಿಸಿ 12 ವರ್ಷ ಆಗಿದ್ದರೆ ಮಾತ್ರ ಸಕ್ರಮಕ್ಕೆ ಅವಕಾಶ ನೀಡಲಾಗುತ್ತದೆ.

published on : 29th May 2020

ಕೊರೋನಾ ಸಂಕಷ್ಟದಲ್ಲೂ ರಾಜಕೀಯ ಮೇಲಾಟ: ಸಂವಿಧಾನದ ಪ್ರಾಥಮಿಕ ಜ್ಞಾನವೂ ಇಲ್ಲ; ದೀದಿ ವಿರುದ್ಧ ಗವರ್ನರ್ ಗರಂ

ನಾನು ಚುನಾಯಿತ ಮುಖ್ಯಮಂತ್ರಿ, ನೀವು ನಾಮ ನಿರ್ದೇಶಿತ ರಾಜ್ಯಪಾಲರು ಎಂದು ಮಮತಾ ಬ್ಯಾನರ್ಜಿ ಬರೆದಿರುವ 5 ಪುಟಗಳ ಪತ್ರಕ್ಕೆ ರಾಜ್ಯಪಾಲ ಜಗದೀಪ್ ಧನಕರ್ ಪ್ರತ್ಯುತ್ತರ ನೀಡಿದ್ದಾರೆ.

published on : 24th April 2020

ಮಧ್ಯ ಪ್ರದೇಶ: ಕಮಲ್ ನಾಥ್ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು, ಇದು ಜನರ ಗೆಲುವು ಎಂದ ಸಿಂಧಿಯಾ

ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಲಾಲ್ ಜಿ ಟಂಡನ್ ಅವರು ಶುಕ್ರವಾರ ಅಂಗೀಕರಿಸಿದ್ದಾರೆ.

published on : 20th March 2020

ಮಧ್ಯಪ್ರದೇಶ: ನಾಳೆ ವಿಶ್ವಾಸಮತ ಯಾಚನೆ ಹಿನ್ನೆಲೆ, ರಾಜ್ಯಪಾಲ ಲಾಲ್ ಜೀ ಟಂಡನ್ ಭೇಟಿಯಾದ ಕಮಲ್ ನಾಥ್ 

ಮಧ್ಯಪ್ರದೇಶ ರಾಜಕೀಯ ಹೈಡ್ರಾಮದ ನಡುವೆ ಮುಖ್ಯಮಂತ್ರಿ ಕಮಲ್ ನಾಥ್ ಇಂದು ರಾಜಭವನದಲ್ಲಿ ರಾಜ್ಯಪಾಲ ಲಾಲ್ ಜೀ ಟಂಡನ್ ಅವರನ್ನು ಭೇಟಿಯಾಗಿದ್ದಾರೆ.

published on : 16th March 2020

ಮಧ್ಯಪ್ರದೇಶ: ಬಿಕ್ಕಟ್ಟಿನ ಮಧ್ಯೆ ರಾಜ್ಯಪಾಲರನ್ನು ಭೇಟಿಯಾದ ಕಮಲ್ ನಾಥ್!

ಮೂರು ದಿನಗಳ ಹಿಂದೆ 22 ಕಾಂಗ್ರೆಸ್ ಬಂಡಾಯ ಶಾಸಕರು ರಾಜೀನಾಮೆ ನೀಡಿರುವುದರಿಂದ ಮಧ್ಯ ಪ್ರದೇಶ ರಾಜಕೀಯದಲ್ಲಿ ಬಿಕ್ಕಟ್ಟು ತಲೆದೋರಿರುವಂತೆ ಮುಖ್ಯಮಂತ್ರಿ ಕಮಲ್ ನಾಥ್ ಇಂದು ರಾಜ್ಯಪಾಲ ಲಾಲ್ ಜಿ ಟಂಡನ್ ಅವರನ್ನು ಭೇಟಿ ಮಾಡಿದ್ದಾರೆ.

published on : 13th March 2020

ಸ್ಪೀಕರ್, ಯತ್ನಾಳ್ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್ ದೂರು

ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಅವರನ್ನು ಪಾಕಿಸ್ತಾನದ ಏಜೆಂಟ್ ಎಂದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ನಿರ್ದೇಶನ ನೀಡುವಂತ ಕೋರಿ ರಾಜ್ಯಪಾಲ ವಜುಭಾಯ್ ವಾಲಾ ಅವರಿಗೆ ಕಾಂಗ್ರೆಸ್ ಪಕ್ಷ ದೂರು ನೀಡಿದೆ. 

published on : 5th March 2020

ಯತ್ನಾಳ್ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್ ದೂರು ಸಲ್ಲಿಕೆ

ಸ್ವಾತಂತ್ರ್ಯ ಹೋರಾಟಗಾರ  ಎಚ್.ಎಸ್. ದೊರೆಸ್ವಾಮಿ ವಿರುದ್ಧ ಅವಮಾನಕಾರಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ವಿಪಕ್ಷ ನಾಯಕ  ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ನಿಯೋಗ ಬುಧವಾರ ರಾಜ್ಯಪಾಲರಿಗೆ ದೂರು ಸಲ್ಲಿಸಿತು.

published on : 4th March 2020

ನಿಸ್ವಾರ್ಥ ಸೇವೆ ಸಲ್ಲಿಸಿದರೆ ಮಾತ್ರ ಸಮೃದ್ದ ಭಾರತದ ನಿರ್ಮಾಣ ಸಾಧ್ಯ; ವಜೂಭಾಯಿ ವಾಲಾ

ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡವರು ಜಾತಿ ಮತ ಬೇಧವನ್ನು ಬದಿಗಿರಿಸಿ, ನಿಸ್ವಾರ್ಥ ಮನೋಭಾವದಿಂದ ಕೆಲಸ ನಿರ್ವಹಿಸಿದರೆ ಮಾತ್ರ ಶಕ್ತಿಶಾಲಿ ದೇಶದ ನಿರ್ಮಾಣ ಸಾಧ್ಯ ಎಂದು ರಾಜ್ಯಪಾಲ ವಜೂಬಾಯಿ ರೂಢ ವಾಲಾ ಹೇಳಿದ್ದಾರೆ. 

published on : 29th February 2020

ರಸ್ತೆಯಲ್ಲಿ ಕುಳಿತು ತಮ್ಮ ಅಭಿಪ್ರಾಯವನ್ನು ಬೇರೆಯವರ ಮೇಲೆ ಹೇರುವುದೂ ಭಯೋತ್ಪಾದನೆ: ಕೇರಳ ರಾಜ್ಯಪಾಲ

ರಸ್ತೆಯಲ್ಲಿ ಕುಳಿತು ತಮ್ಮ ಅಭಿಪ್ರಾಯವನ್ನು ಬೇರೆಯವರ ಮೇಲೆ ಹೇರುವುದು ಸಹ ಒಂದು ರೀತಿಯ ಭಯೋತ್ಪಾದನೆ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಶಾಹೀನ್ ಬಾಗ್ ಪ್ರತಿಭಟನೆಯನ್ನು ಉದ್ದೇಶಿಸಿ ಹೇಳಿದ್ದಾರೆ.

published on : 21st February 2020

ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಮಾಡುವಾಗ ಎಚ್ಚರ: ಕಾಂಗ್ರೆಸ್ ಶಾಸಕರಿಗೆ ಸಿದ್ದರಾಮಯ್ಯ ಕಿವಿಮಾತು

ವಿಧಾನಮಂಡಲ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ವಜೂಭಾಯಿ ವಾಲಾ ಮಾಡಿರುವ ಭಾಷಣದಲ್ಲಿ ತಮ್ಮ ನೇತೃತ್ವದ ಸರ್ಕಾರದ ಸಾಧನೆಗಳೇ ತುಂಬಿದ್ದು, ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲೆ ಚರ್ಚೆ ನಡೆಸುವಾಗ ಎಚ್ಚರಿಕೆಯಿಂದ ಟೀಕೆ ಮಾಡಿ ಎಂದು ಸಿದ್ದರಾಮಯ್ಯ ತಮ್ಮ ಶಾಸಕರಿಗೆ ಕಿವಿ ಮಾತು ಹೇಳಿದ್ದಾರೆ. 

published on : 18th February 2020

12 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ- ಸಚಿವ ಜಾರಕಿಹೊಳಿ ಹರ್ಷ 

ರಾಜ್ಯ ಬಿಜೆಪಿ ಸರ್ಕಾರ ಆದ್ಯತೆಯ ಮೇರೆಗೆ ಬೃಹತ್ ನೀರಾವರಿ ಯೋಜನೆಗಳನ್ನು ಕೈಗೊಂಡಿದ್ದು, ರಾಜ್ಯದ 12,000 ಹೆಕ್ಟೇರ್ ಪ್ರದೇಶಕ್ಕೆ ಈ ಪ್ರಸಕ್ತ ವರ್ಷದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸುವ ಸಾಮರ್ಥ್ಯ ತೋರುತ್ತಿರುವುದು ಹೆಮ್ಮೆಯ ಸಂಗತಿ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಲ. ಜಾರಕಿಹೊಳಿ ಹರ್ಷ ವ್ಯಕ್ತಪಡಿಸಿದ್ದಾರೆ.

published on : 17th February 2020

ನಮ್ಮ ಸರ್ಕಾರದ ಸಾಧನೆಗಳನ್ನು ರಾಜ್ಯಪಾಲರ ಭಾಷಣದಲ್ಲಿ ಶ್ಲಾಘಿಸಲಾಗಿದೆ: ಸಿದ್ದರಾಮಯ್ಯ

ರಾಜ್ಯಪಾಲರದ್ದು ಯಾವುದೇ ಗೊತ್ತು ಗುರಿ ಇಲ್ಲದ ಸಪ್ಪೆ ಭಾಷಣ. ಯಡಿಯೂರಪ್ಪ ಸರ್ಕಾರ ಬಂದು ಆರು ತಿಂಗಳಾದರೂ ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ಕಾಂಗ್ರೆಸ್ ಹಾಗೂ ಮೈತ್ರಿ ಸರ್ಕಾರಗಳಲ್ಲಿನ ಸಾಧನೆಗಳು....

published on : 17th February 2020
1 2 3 4 5 6 >