• Tag results for ರಾಜ್ಯಪಾಲರು

ಪ್ರತಿದಿನ 1 ಕೋಟಿ ಜನರಿಗೆ ಲಸಿಕೆ ಹಾಕಿ: ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹ

ದೇಶದಲ್ಲಿ ಪ್ರತಿ ದಿನ ಒಂದು ಕೋಟಿ ಜನರಿಗೆ ಕೋವಿಡ್‌ ಲಸಿಕೆ ವ್ಯಾಕ್ಸಿನೇಷನ್‌ ಮಾಡುವಂತೆ ಕೇಂದ್ರ ಸರ್ಕಾರದ ಗಮನಕ್ಕೆ ತರುವಂತೆ ರಾಜ್ಯ ಕಾಂಗ್ರೆಸ್ ನಾಯಕರ ನಿಯೋಗ ರಾಜ್ಯಪಾಲ‌ ವಿ.ಆರ್.ವಾಲಾ ಅವರಿಗೆ ಮನವಿ ಮಾಡಿದೆ.

published on : 5th June 2021

ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ರಾಜಕೀಯ ಹಿಂಸಾಚಾರ: ರಾಜ್ಯಪಾಲರಿಗೆ ಪ್ರಧಾನಿ ಕರೆ; ಆತಂಕ ವ್ಯಕ್ತ!

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಫಲಿತಾಂಶದ ನಂತರ ಉಂಟಾಗಿರುವ ರಾಜಕೀಯ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ರಾಜ್ಯಪಾಲ ಜಗದೀಪ್ ಧನ್ಕರ್ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ. 

published on : 4th May 2021

ರಾಜ್ಯಪಾಲರ ಸರ್ವಪಕ್ಷ ಸಭೆ: ಕಾಂಗ್ರೆಸ್, ಬಿಜೆಪಿ ನಡುವೆ ವಾಕ್ಸಮರ

ರಾಜ್ಯದಲ್ಲಿ ಕೋವಿಡ್‌ ಸೋಂಕು ತೀವ್ರ ಸ್ವರೂಪದಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಅವರು ಮಂಗಳವಾರ ನಡೆಸಿದ ಸರ್ವಪಕ್ಷ ಸಭೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. 

published on : 21st April 2021

ರಾಜ್ಯಪಾಲರು ಮಧ್ಯಪ್ರವೇಶಿಸಿ ಮುಖ್ಯಮಂತ್ರಿಯನ್ನು ವಜಾಗೊಳಿಸಿ: ಸಿದ್ದರಾಮಯ್ಯ ಒತ್ತಾಯ

ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶಿಸಿ ಮುಖ್ಯಮಂತ್ರಿಯನ್ನು ವಜಾಗೊಳಿಸಿ, ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. 

published on : 1st April 2021

ಸೆಕ್ಸ್ ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು

ಸೆಕ್ಸ್ ವಿಡಿಯೋ ಬಹಿರಂಗವಾದ ಹಿನ್ನೆಲೆಯಲ್ಲಿ ನೈತಿಕ ಹೊಣೆಹೊತ್ತು ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಬುಧವಾರ ವಜುಭಾಯಿ ವಾಲಾ ಅವರು ಅಂಗೀಕರಿಸಿದ್ದಾರೆ.

published on : 3rd March 2021

ಖಾಸಗಿ ಕ್ಷೇತ್ರಗಳಲ್ಲಿ ಸ್ಥಳೀಯರಿಗೆ ಶೇ .75 ರಷ್ಟು ಉದ್ಯೋಗ ಮೀಸಲು ಮಸೂದೆಗೆ ಹರಿಯಾಣ ರಾಜ್ಯಪಾಲರು ಅಸ್ತು

ಖಾಸಗಿ ಕ್ಷೇತ್ರದಲ್ಲೂ ರಾಜ್ಯದ ಉದ್ಯೋಗಾಕಾಂಕ್ಷಿಗಳಿಗೆ ಶೇ .75 ರಷ್ಟು ಮೀಸಲಾತಿ ನೀಡುವ ಮಸೂದೆಗೆ ಹರಿಯಾಣ ರಾಜ್ಯಪಾಲ ಸತ್ಯದೇವ ನರೈನ್ ಆರ್ಯ ಅವರು ಅನುಮೋದನೆ ನೀಡಿದ್ದಾರೆ...

published on : 2nd March 2021

ಪುದುಚೆರಿ ರಾಜ್ಯಪಾಲರಾಗಿ ತೆಲಂಗಾಣ ಗವರ್ನರ್ ತಮಿಳುಸಾಯಿ ಸೌಂದರ್ ರಾಜನ್ ಹೆಚ್ಚುವರಿ ಅಧಿಕಾರ ಸ್ವೀಕಾರ 

ಕೇಂದ್ರಾಡಳಿತ ಪ್ರದೇಶ ಪುದುಚೆರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ತಮಿಳುಸಾಯಿ ಸೌಂದರರಾಜನ್ ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ.

published on : 18th February 2021

ಪುದುಚೆರಿ ಲೆಫ್ಟಿನೆಂತ್ ಗೌರ್ನರ್ ಹುದ್ದೆಯಿಂದ ಕಿರಣ್ ಬೇಡಿ ವಜಾ: ರಾಷ್ಟ್ರಪತಿ ಭವನದ ಆದೇಶ!

ಪುದುಚೆರಿಯ ಲೆಫ್ಟಿನೆಂಟ್ ಗೌರ್ನರ್ ಹುದ್ದೆಯಿಂದ ಮಾಜಿ ಐಪಿಎಸ್ ಅಧಿಕಾರಿ ಕಿರಣ್ ಬೇಡಿ ಅವರನ್ನು ವಜಾಗೊಳಿಸಲಾಗಿದೆ. 

published on : 16th February 2021

ಗೋಹತ್ಯೆ ನಿಷೇಧ ಕಾಯ್ದೆ ವಿರುದ್ಧ ಕಾಂಗ್ರೆಸ್ ಕಿಡಿ: ರಾಜ್ಯಪಾಲರಿಗೆ ದೂರು

ವಿಧಾನಪರಿಷತ್ ನಲ್ಲಿ ಗಲಾಟೆ, ಗದ್ದಲದ ನಡುವೆ ಗೋಹತ್ಯೆ ಮಸೂದೆಯನ್ನು ಅಂಗೀಕರಿಸುವುದರ ವಿರುದ್ಧ ಕಾಂಗ್ರೆಸ್ ಬಿಜೆಪಿ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದು, ರಾಜ್ಯಪಾಲರಿಗೆ ದೂರು ನೀಡಲು ಮತ್ತು ಕಾನೂನು ಹೋರಾಟ ಮಾಡಲು ಮುಂದಾಗಿದೆ. 

published on : 13th February 2021

ಬಿಬಿಎಂಪಿ ವಿಧೇಯಕ-2020ಕ್ಕೆ ರಾಜ್ಯಪಾಲರ ಅಂಕಿತ: ಜನವರಿ 11ರಿಂದ ಹೊಸ ಆಡಳಿತ ಜಾರಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಆಡಳಿತ ವ್ಯವಸ್ಥೆಯನ್ನು ಬದಲಾವಣೆ ಮಾಡುವಂತಹ ಮಹತ್ವದ ಮಸೂದೆ ಬಿಬಿಎಂಪಿ ವಿಧೇಯಕ-2020ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ಜ.11ರಿಂದ ಅಧಿಕೃತವಾಗಿ ಜಾರಿಗೆ ಬರಲಿದೆ. 

published on : 9th January 2021

ಕಲಾಪದಲ್ಲಿ ಭಯದ ವಾತಾವರಣವಿತ್ತು: ರಾಜ್ಯಪಾಲರಿಗೆ ಸಭಾಪತಿ ವರದಿ

ಮಂಗಳವಾರ ವಿಧಾನ ಪರಿಷತ್ತಿನಲ್ಲಿ ನಡೆದ ಘಟನಾವಳಿಗಳ ವಿವರವನ್ನು ವಿಧಾನಪರಿಷತ್ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ರಾಜ್ಯಪಾಲರಿಗೆ ವರದಿ ಸಲ್ಲಿಸಿದ್ದಾರೆ.

published on : 16th December 2020

ಸದನ ಮುಂದೂಡಿಕೆ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು

ವಿಧಾನಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ವಿರುದ್ಧದ ಅವಿಶ್ವಾಸ ಬಗ್ಗೆ ಚರ್ಚೆ ಸಂಬಂಧ ಆಡಳಿತಾರೂಢ ಬಿಜೆಪಿ ಸದಸ್ಯರು ಶುಕ್ರವಾರ ರಾಜ್ಯಪಾಲರ ಮೊರೆ ಹೋಗಿದ್ದಾರೆ. ಇದರ ಬೆನ್ನಲ್ಲೇ ಈ ತಿಂಗಳ 15ಕ್ಕೆ ಕಲಾಪ ನಡೆಸುವಂತೆ ನಿರ್ದೇಶನ ನೀಡಿದೆ. 

published on : 12th December 2020

ಅರ್ನಾಬ್ ಆರೋಗ್ಯ, ಭದ್ರತೆ ವಿಚಾರವಾಗಿ ಮಹಾರಾಷ್ಟ್ರ ಗೃಹ ಸಚಿವರೊಂದಿಗೆ ರಾಜ್ಯಪಾಲ ಕೋಶಿಯಾರಿ ಮಾತುಕತೆ

ಆತ್ಮಹತ್ಯೆಗೆ ಕುಮ್ಮಕ್ಕು ಪ್ರಕರಣದಲ್ಲಿ ಕಳೆದ ವಾರ ಬಂಧಿಸಲಾಗಿರುವ ರಿಪಬ್ಲಿಕ್ ಟಿವಿ ಮಾಲೀಕ ಮತ್ತು ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಆರೋಗ್ಯ, ಭದ್ರತೆ ಬಗ್ಗೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರೊದಿಗೆ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಮಾತುಕತೆ ನಡೆಸಿದ್ದು, ಕಳವಳ ವ್ಯಕ್ತಪಡಿಸಿದ್ದಾರೆ.

published on : 9th November 2020

ಅಮಿತ್ ಶಾ ನಿಲುವನ್ನು ಸ್ವಾಗತಿಸಿದ ಶಿವಸೇನೆ 

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಬರೆದ ಪತ್ರದ ಬಗ್ಗೆ ಅಮಿತ್ ಶಾ ನಿಲುವನ್ನು ಶಿವಸೇನೆ ಸ್ವಾಗತಿಸಿದೆ. 

published on : 18th October 2020

ರಾಜ್ಯಪಾಲರು ಹೇಗೆ ವರ್ತಿಸಬಾರದು ಎಂಬುದನ್ನು ಕೋಶಿಯಾರಿ ತೋರಿಸಿಕೊಟ್ಟಿದ್ದಾರೆ: ಶಿವಸೇನೆ

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದು, ನೀವು "ಜಾತ್ಯತೀತ ಅನಿಸಿಕೊಳ್ಳಲು ಹಿಂದುತ್ವವನ್ನು ತ್ಯಜಿಸಿದರೇ" ಎಂದು ಕೇಳಿದ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಿವಸೇನೆ, ರಾಜ್ಯಪಾಲರು ರಾಜ್ಯ ಸರ್ಕಾರದ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದೆ.

published on : 15th October 2020