ದೇಶಲೋಕಪಾಲ ಮುಖ್ಯಸ್ಥರಾಗಿ ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ಎ.ಎಂ. ಖಾನ್ವಿಲ್ಕರ್ ಪ್ರಮಾಣ ವಚನ ಸ್ವೀಕಾರ
ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶ ಎ ಎಂ ಖಾನ್ವಿಲ್ಕರ್ ಅವರು ಲೋಕಪಾಲ ಮುಖ್ಯಸ್ಥರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಲೋಕಪಾಲ ಮುಖ್ಯಸ್ಥರಿಗೆ ಪ್ರಮಾಣ ವಚನ ಬೋಧಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.